LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಲಡಾಖ್​ನಲ್ಲಿ ಗುಡ್ಡ ಕುಸಿದು ಬೆಳಗಾವಿಯ ಯೋಧ ಸಾವು

ಬೆಳಗಾವಿ: ಜಮ್ಮು-ಕಾಶ್ಮೀರದ  ಲಡಾಖ್​ನಲ್ಲಿ ಗುಡ್ಡ ಕುಸಿದು ಬೆಳಗಾವಿ  ಮೂಲದ ಯೋಧರೊಬ್ಬರು ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಇರಣಟ್ಟಿ ಗ್ರಾಮದ ಮಹೇಶ್​ ಅವರು ಡಿಸೆಂಬರ್​ 14ರಂದು ಲಡಾಖ್​ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಗುಡ್ಡ ಕುಸಿದು ಮೃತಪಟ್ಟಿದ್ದಾರೆ. ಸೇನಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಶವ ಹೊರತೆಗೆದಿದ್ದರು.

ಸೈನಿಕ ಮಹೇಶ್ ಅವರ ಪಾರ್ಥಿವ ಶರೀರ ಮಂಗಳವಾರ (ಡಿಸೆಂಬರ್​ 17) ಸಂಜೆ ಇರಣಟ್ಟಿ ಗ್ರಾಮಕ್ಕೆ ಆಗಮಿಸಿತು. ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್​ ಗೌರವ ಸಮರ್ಪಿಸಿದರು. ಸಕಲ ಸರ್ಕಾರಿ ಗೌರವದೊಂದಿಗೆ ಹುಟ್ಟೂರಿನಲ್ಲಿ ಮಹೇಶ್ ಅವರ ಅಂತ್ಯಸಂಸ್ಕಾರ ನೆರವೇರಿತು. ಎರಡು ತಿಂಗಳ ಹಿಂದೆಯಷ್ಟೇ ಸೈನಿಕ ಮಹೇಶ್ ಅವರ ನಿಶ್ಚಿತಾರ್ಥ ಕೂಡ ಆಗಿದ್ದು, ಮದುವೆ ದಿನಾಂಕ ಕೂಡ ನಿಗದಿಯಾಗಿತ್ತು. ಆದರೆ ಲಡಾಖ್​ನಲ್ಲಿ ನಡೆದ ದುರಂತದಲ್ಲಿ ಮಹೇಶ್​ ಪ್ರಾಣ ತೆತ್ತಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST