LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಲಾಲ್‍ಬಾಗ್‍ನಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಸಿದ್ಧತೆ

ಬೆಂಗಳೂರು: ಸ್ವಾತಂತ್ರ್ಯೋತ್ಸವ ಮತ್ತು ಗಣರಾಜ್ಯೋತ್ಸವ ಅಂಗವಾಗಿ ಪ್ರತಿ ವರ್ಷ ಒಂದೊಂದು ರೀತಿಯ ವಿಷಯವಸ್ತುವಿನ ಆಧಾರದಲ್ಲಿ ತೋಟಗಾರಿಕೆ ಇಲಾಖೆ ಬೆಂಗಳೂರಿನ ಸಸ್ಯಕಾಶಿ ಲಾಲ್‍ಬಾಗ್‍ನಲ್ಲಿ ಫಲಪುಷ್ಪ ಪ್ರದರ್ಶನ ಆಯೋಜಿಸುತ್ತದೆ. ಅದರಂತೆ, ಗಣರಾಜ್ಯೋತ್ಸವಕ್ಕೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಪ್ರತಿವರ್ಷದಂತೆ ಈ ವರ್ಷವೂ ಫಲಪುಷ್ಪ ಪ್ರದರ್ಶನಕ್ಕೆ ತೋಟಗಾರಿಕೆ ಇಲಾಖೆ ಸಿದ್ದತೆ ನಡೆಸಿದೆ.

ತೋಟಗಾರಿಕೆ ಇಲಾಖೆ ಫಲಪುಷ್ಪ ಪ್ರದರ್ಶನವನ್ನು ಜನವರಿ 16 ರಿಂದ 26ರವರೆಗೆ 11 ದಿನಗಳ ಕಾಲ ಆಯೋಜಿಸುತ್ತಿದೆ. ಈ ಬಾರಿಯ ಫಲಪುಷ್ಪ ಪ್ರದರ್ಶನದಲ್ಲಿ ಮಹರ್ಷಿ ವಾಲ್ಮೀಕಿ ಜೀವನ ಆಧಾರಿತ ವಿಷಯ ಹಾಗೂ ರಾಮಾಯಣ ಮಹಾಕಾವ್ಯವನ್ನು ಆಕರ್ಷಕವಾಗಿ ಪುಷ್ಪಗಳಲ್ಲಿ ಅರಳಿಸಲು ತೀರ್ಮಾನಿಸಲಾಗಿದೆ.

ಫಲಪುಷ್ಪ ನೋಡಲು ಬರುವ ಪ್ರವಾಸಿಗರು ಮತ್ತು ಬೆಂಗಳೂರಿನ ಜನತೆ ಮಹರ್ಷಿ ವಾಲ್ಮೀಕಿ ವಿಷಯಾಧರಿತ ಹೂವಿನ ಪ್ರತಿಕೃತಿ ಹಾಗೂ ರಾಮಾಯಣದ ಪ್ರಮುಖ ಘಟನೆಗಳನ್ನು ಕಣ್ತುಂಬಿಕೊಳ್ಳಲಿದ್ದಾರೆ. ಹೂ ಅಲಂಕಾರಕ್ಕಾಗಿ ದೇಶ ವಿದೇಶಗಳಿಂದ ಹೂವುಗಳನ್ನು ಆಮದು ಮಾಡಿಕೊಳ್ಳಲಾಗುತ್ತಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು