LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಲಿಂಗಾಯತರ ಸಮಾವೇಶ ಬೇಡ ಅಭಿಮಾನಿಗಳು, ಹಿತೈಷಿಗಳಲ್ಲಿ ವಿಜಯೇಂದ್ರ ಮನವಿ

ಬೆಂಗಳೂರು: ತಮ್ಮ ಹಾಗೂ ತಮ್ಮ ತಂದೆಯವರ ಮೇಲೆ ಅಭಿಮಾನದಿಂದ ಈ ತಿಂಗಳು ವೀರಶೈವ ಲಿಂಗಾಯತರ ಹೆಸರಿನಲ್ಲಿ ತಮ್ಮ ಅಭಿಮಾನಿ ಹಿತೈಷಿಗಳು ವೀರಶೈವ ಲಿಂಗಾಯತರ ಸಮಾವೇಶ ಮಾಡಲು ಮುಂದಾಗಿದ್ದಾರೆ. ಈ ಸಮಾವೇಶ ಮಾಡುವುದು ಸಮಂಜಸವಲ್ಲ ಎಂದು ಅಭಿಪ್ರಾಯ ಪಟ್ಟಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಮಾವೇಶ ಮಾಡುವುದುಬೇಡ ಎಂದು ಅಭಿಮಾನಿಗಳಿಗೆ ವಿನಂತಿ ಮಾಡಿದ್ದಾರೆ.

ಈ ಸಂಬಂಧ ಟ್ವಿಟ್ ಮಾಡಿರುವ ಅವರು ಸಮ ಸಮಾಜ ಕಟ್ಟಲು ತಮ್ಮನ್ನು ಸಮರ್ಪಿಸಿಕೊಂಡ ಅಣ್ಣ ಬಸವಣ್ಣನವರ ತತ್ವ ಅನುಸರಿಸಿ, ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ``ಸರ್ವರಿಗೂ ಸಮಬಾಳು-ಸರ್ವರಿಗೂ ಸಮಪಾಲು'' ಎಂಬ ಧ್ಯೇಯ ಪಾಲಿಸಿ ಆಡಳಿತ ನಡೆಸಿದವರು ಮಾನ್ಯ ಬಿ.ಎಸ್. ಯಡಿಯೂರಪ್ಪನವರು, ಅವರ ಆದರ್ಶಗಳನ್ನು ಅಳವಡಿಸಿಕೊಂಡು ಮುನ್ನಡೆಯುತ್ತಿರುವ ನಾನು ವೀರಶೈವ ಲಿಂಗಾಯತ ಸಮಾಜಕ್ಕೆ ಸೇರಿದವನು ಎಂಬ ಬಗ್ಗೆ ಕಾಳಜಿ ಪೂರ್ವಕ ಹೆಮ್ಮೆ ಇರಿಸಿಕೊಂಡಿದ್ದೇನೆ,ಈ ನಿಟ್ಟಿನಲ್ಲಿ ಸಮಾಜದ ಆಶಯಕ್ಕೆ ಪೂರಕವಾಗಿ ಸರ್ವ ಸಮಾಜಗಳ ಬಗ್ಗೆ ಸಮಭಾವ ಇಟ್ಟುಕೊಂಡು ಒಟ್ಟು ಸಮಾಜದ ಏಳಿಗೆ ಹಾಗೂ ಅಭಿವೃದ್ಧಿಗಾಗಿ ಚಿಂತಿಸುವವನು, ಆ ಮೂಲಕ ಸಮಗ್ರ ಕರ್ನಾಟಕದ ಶ್ರೇಯೋಭಿವೃದ್ಧಿಗಾಗಿ ಹಾಗೂ ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರ ವಿಕಸಿತ ಭಾರತದ ಮಹಾ ಸಂಕಲ್ಪದ ಗುರಿ ಸಾಧಿಸಲು ಪರಿಶ್ರಮಿಸುತ್ತಿರುವ ಭಾರತೀಯ ಜನತಾ ಪಾರ್ಟಿಯ ಸಿದ್ದಾಂತ ಪ್ರತಿಪಾದಿಸುವ ಒಬ್ಬ ನಿಷ್ಠ ಕಾರ್ಯಕರ್ತನಾಗಿ ಹೆಜ್ಜೆ ಇಡುತ್ತಿದ್ದೇನೆ.

ಕೆಲವು ಹಿತೈಷಿಗಳು ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ನನ್ನ ಹಾಗೂ ಬಿ.ಎಸ್.ಯಡಿಯೂರಪ್ಪನವರ ಮೇಲಿನ ಅಭಿಮಾನದ ಕಾರಣಕ್ಕಾಗಿ ವೀರಶೈವ ಲಿಂಗಾಯತ ಸಮುದಾಯದ ಸರಣೀ ಸಭೆಗಳನ್ನು ನಡೆಸಲು ಹೊರಟಿರುವ ವಿಷಯ ನನ್ನ ಗಮನಕ್ಕೆ ಬಂದ ತಕ್ಷಣದಲ್ಲೇ ಇದನ್ನು ನಿಲ್ಲಿಸುವಂತೆ ತಿಳಿಸಿದ್ದೇನೆ, ಇಂದರಿಂದ ಪಕ್ಷಕ್ಕೂ ಸಹ ಮುಜುಗರದ ಸನ್ನಿವೇಶ ಸೃಷ್ಟಿ ಮಾಡಲಿದೆ, ಆದ್ದರಿಂದ ನಮ್ಮ ಹಿತೈಷಿಗಳು ಹಾಗೂ ಅಭಿಮಾನಿಗಳು ತಮ್ಮ ಗಮನವನ್ನು ಪಕ್ಷ ಸಂಘಟನೆಯತ್ತ ಕೇಂದ್ರೀಕರಿಸಬೇಕೆ ಹೊರತು, ಸಮಾಜದ ಹೆಸರಿನಲ್ಲಿ ಸಭೆಗಳನ್ನು ಸಂಘಟಿಸುವ ಪ್ರಯತ್ನಗಳನ್ನು ಈ ಕೂಡಲೇ ನಿಲ್ಲಿಸುವಂತೆ ಈ ಮೂಲಕ ವಿನಂತಿಸುವೆ ಎಂದಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು