LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಲೈಂಗಿಕ ದೌರ್ಜನ್ಯ ಆರೋಪ: ಚರಿತ್ ಬಾಳಪ್ಪ ಬಂಧನ

ಬೆಂಗಳೂರು: ಕಿರುತೆರೆ ನಟ ಚರಿತ್ ಬಾಳಪ್ಪ ವಿರುದ್ದ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದಿದೆ. ಹಾಗಾಗಿ ಆರ್​ಆರ್ ನಗರ ಠಾಣೆಯ ಪೊಲೀಸರು ಅವರನ್ನು ಅರೆಸ್ಟ್​ ಮಾಡಿದ್ದಾರೆ. ಕನ್ನಡದ ‘ಮುದ್ದುಲಕ್ಷ್ಮಿ‌’ ಸೇರಿದಂತೆ ಹಲವು ಸೀರಿಯಲ್​ನಲ್ಲಿ ಚರಿತ್ ನಟಿಸಿದ್ದಾರೆ. ತೆಲುಗಿನಲ್ಲೂ ಅನೇಕ ಧಾರಾವಾಹಿಗಳಲ್ಲಿ ನಟಿಸಿ ಗುರುತಿಸಿಕೊಂಡಿದ್ದಾರೆ. ತನಗೆ ಪರಿಚಯವಿದ್ದ ಗೆಳತಿಗೆ‌ ಲೈಂಗಿಕ ದೌರ್ಜನ್ಯ  ಎಸಗಿರೋ ಆರೋಪ ಈಗ ಚರಿತ್ ಬಾಳಪ್ಪ ಮೇಲೆ ಎದುರಾಗಿದೆ.

ಪ್ರೀತಿಸುತ್ತೇನೆ ಅಂತ ಹೇಳಿ ದೈಹಿಕ ಸಂಪರ್ಕಕ್ಕೆ ಒತ್ತಾಯ ಮಾಡಿದ್ದಾರೆ ಎಂದು ಯುವತಿಯೊಬ್ಬರು ಆರೋಪ ಮಾಡಿದ್ದಾರೆ. ಯುವತಿ ವಾಸ ಮಾಡುತ್ತಿದ್ದ ಮನೆಗೆ ಸಹಚರರ ಜೊತೆ ನುಗ್ಗಿದ ಚರಿತ್ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ. ಅಷ್ಟಲ್ಲದೇ ಯುವತಿ ಬಳಿ ಹಣಕ್ಕೂ ಬೇಡಿಕೆ ಇಟ್ಟಿರುವ ಆರೋಪ ಇದೆ. ಹಣ ಕೊಡದಿದ್ದರೆ ಆಕೆಯ ಖಾಸಗಿ ಫೋಟೋ, ವಿಡಿಯೋ ಹರಿಬಿಡುವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಚರಿತ್ ವಿರುದ್ಧ ಲೈಂಗಿಕ ದೌರ್ಜನ್ಯ, ಹಲ್ಲೆ, ಕೊಲೆ ಬೆದರಿಕೆ ಆರೋಪಗಳು ಕೇಳಿಬಂದಿವೆ. ಯುವತಿ ನೀಡಿದ ದೂರಿನ ಅನ್ವಯ ಆರೋಪಿ ಚರಿತ್ ಬಾಳಪ್ಪ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅಂದಹಾಗೆ, ಚರಿತ್ ಅವರಿಗೆ ಈಗಾಗಲೇ ಮದುವೆಯಾಗಿ ವಿಚ್ಛೇದನ ಕೂಡ ಪಡೆದಿದ್ದಾರೆ. ಡಿವೋರ್ಸ್​ ನಂತರವೂ ಅವರು ಮಾಜಿ ಪತ್ನಿಯ ಜೊತೆ ಕಿರಿಕ್ ಮಾಡಿಕೊಂಡಿದ್ದರು.

2017ರಲ್ಲಿ ನಟಿ ಮಂಜು ಜೊತೆ ಚರಿತ್​ ಬಾಳಪ್ಪ ಅವರಿಗೆ ವಿವಾಹ ಆಗಿತ್ತು. 2022ರ ಬಳಿಕ ಅವರ ಸಂಸಾರದಲ್ಲಿ ಬಿರುಕು ಮೂಡಿತ್ತು. ನಂತರ ಅವರಿಬ್ಬರು ನ್ಯಾಯಾಲಯದಲ್ಲಿ ವಿಚ್ಚೇದನ ಪಡೆದುಕೊಂಡಿದ್ದರು. ಕೋರ್ಟ್ ಆಜ್ಞೆಯಂತೆ ಡೈವರ್ಸ್ ಪರಿಹಾರ ಹಣಕ್ಕೆ ನೋಟಿಸ್ ಕಳಿಸಿದ್ದಕ್ಕೆ ಮಾಜಿ ಪತ್ನಿಗೆ ಬೆದರಿಕೆ ಹಾಕಿದ್ದಾರೆ ಎಂದು ಚರಿತ್ ಬಾಳಪ್ಪ ವಿರುದ್ಧ ಕಳೆದ ಜೂನ್ ತಿಂಗಳಲ್ಲಿ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ‌ ದೂರು ದಾಖಲಾಗಿತ್ತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು