LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಲೋಕಾಯುಕ್ತ ವರದಿ.. ಸತ್ಯಕ್ಕೆ ಸಂದ ಜಯ ಯತೀಂದ್ರ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಲೋಕಾಯುಕ್ತ ನೀಡಿರುವ ತನಿಖಾ ವರದಿ ಸತ್ಯಕ್ಕೆ ಸಿಕ್ಕಿದ ಜಯ ಎಂದು ಮೈಸೂರಿನಲ್ಲಿ ವಿಧಾನಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.ಸೈಟ್ ವಿಚಾರವಾಗಿ ನನ್ನ ತಂದೆ ಯಾವುದೇ ಪತ್ರ ಬರೆದಿಲ್ಲ, ನನ್ನ ತಾಯಿ ಪತ್ರ ಬರೆದಿದ್ದಾರೆ. ನನ್ನ ಜಮೀನು ಬದಲಿ ಸೈಟ್ ನೀಡಿ ಎಂದು ಬರೆದಿದ್ದಾರೆ. ಸೈಟ್ ಪಡೆಯುವಲ್ಲಿ ಯಾವುದೇ ಪ್ರಭಾವ ಬಳಸಿಲ್ಲ. ಎಲ್ಲರಿಗೂ ಸೈಟ್ ಕೊಟ್ಟಂತೆ ನಮಗೂ ಕೊಟ್ಟಿದ್ದಾರೆ. ನಮ್ಮ ಜಮೀನು ಬಳಸಿಕೊಂಡು ಸೈಟ್ ಕೊಟ್ಟಿದ್ದಾರೆ. ಇದನ್ನೇ ದೊಡ್ಡ ಹಗರಣ ಅಂತ ಬಿಂಬಿಸಿದ್ರು . ಬೇಕು ಬೇಕಂತಲೇ ನಮ್ಮ ತಂದೆ ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡಿದ್ದರು. ಈಗ ಕ್ಲೀನ್ ಚಿಟ್ ಸಿಕ್ಕಿದೆ. ಈವಾಗ ಸತ್ಯಕ್ಕೆ ಜಯ ಸಿಕ್ಕಿದೆ.

ಮುಡಾ ಹಗರಣದಲ್ಲಿ ನನ್ನ ಹೆಸರನ್ನು ಕೂಡ ತಳುಕು ಹಾಕಲು ಯತ್ನ ನಡೀತು, ನಾನು ಮುಡಾ ಸದಸ್ಯ ಆಗಿದ್ದೆ. ಎಲ್ಲಿಯೂ ಕೂಡ ನಾನು ಏನು ಹೇಳಿಲ್ಲ. ಆರ್ ಟಿಐ ಕಾರ್ಯಕರ್ತರನ್ನ ಇಟ್ಕೊಂಡು ನಮ್ಮ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡಿದರು. ಆದರೆ ಕೊನೆಗೂ ಸತ್ಯಕ್ಕೆ ಜಯ ಸಿಕ್ಕಿದೆ. ದೂರುದಾರ ಸ್ನೇಹಮಯಿ ಕೃಷ್ಣ ಸುಪ್ರೀಂಕೋರ್ಟಿಗೆ ಹೋಗಲಿ , ನಾವು ಯಾವುದೇ ತಪ್ಪು ಮಾಡಿಲ್ಲ ಕೋರ್ಟ್ ನಲ್ಲೂ ಕೂಡ ನಮ್ಮ ಪರ ನ್ಯಾಯ ಸಿಗತ್ತೆ ಅನ್ನೋ ವಿಶ್ವಾಸ ಇದೆ ಎಂದಿದ್ದಾರೆ.

ಉದಯಗಿರಿ ಪೊಲೀಸ್ ಠಾಣೆ ಮೇಲಿನ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಯಾರೋ ಕಿಡಿಗೇಡಿ ವಿವಾದಿತ ಪೋಸ್ಟ್ ಹಾಕಿದ್ದ. ಅದಕ್ಕೆ ಕೆಲವರು ಕಾನೂನು ಕೈಗೆತ್ತಿಕೊಂಡ್ರು , ಸರ್ಕಾರ ಇಬ್ಬರ ವಿರುದ್ಧವೂ ಕಾನೂನು ಕ್ರಮ ಕೈಗೊಂಡಿದೆ. ಇದನ್ನು ರಾಜಕೀಯ ಮಾಡಲು ಬಿಜೆಪಿ ಹೊರಟಿತ್ತು.ನಿನ್ನೆ ಹೋರಾಟದಲ್ಲಿ ಜನ ಇರಲಿಲ್ಲ, ಸತ್ಯ ಏನು ಅಂತ ಜನಕ್ಕೆ ಗೊತ್ತು. ಅದಕ್ಕಾಗಿ ಪ್ರತಿಭಟನೆಯಲ್ಲಿ ಜನ ಇರಲಿಲ್ಲ. ನೆನ್ನೆಯ ಬಿಜೆಪಿ ಪ್ರತಿಭಟನೆ ಯಶಸ್ವಿ ಆಗಿಲ್ಲ. ಸಿಎಂ ಬದಲಾವಣೆ ಆಗುತ್ತೆ ಆಗತ್ತೆ ಅಂತ ಹೇಳುತ್ತಾನೆ ಇದ್ದಾರೆ, ಬಿಜೆಪಿಯಲ್ಲಿ ಕಚ್ಚಾಟ ಹೆಚ್ಚಾಗಿದೆ.ಬಿಜೆಪಿ ಪಕ್ಷ ಹರಿದು ಊರು ಬಾಗಿಲು ಆಗಿದೆ. ಸಿಎಂ ಬದಲಾವಣೆ ಆಗಲ್ಲ ಎಂದು ನಮ್ಮ ಹೈ ಕಮಾಂಡ್ ಸ್ಪಷ್ಟವಾಗಿ ಹೇಳಿದೆ. ಸಿಎಂ ಸಿದ್ದರಾಮಯ್ಯ ಪರ ಹೈಕಮಾಂಡ್ ನಿಂತಿದೆ. ರಾಜ್ಯದಲ್ಲಿ ಸಿಎಂ ಬದಲಾವಣೆ ಮಾತೇ ಇಲ್ಲ ಎಂದು ಯತೀಂದ್ರ ಸ್ಪಷ್ಟಪಡಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು