LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chikkaballapura

ವಿಕಲಚೇತನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿ-ಡಿಸಿ


ಚಿಕ್ಕಬಳ್ಳಾಪುರ: ವಿಕಲಚೇತನರ ಕುಂದುಕೊರತೆಗಳನ್ನು ಆಲಿಸಿ, ತಾಲ್ಲೂಕು ಹಂತದಲ್ಲಿಯೇ ಅವರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕು. ತಾಲ್ಲೂಕು ಮಟ್ಟದಲ್ಲಿ ನಿಯಮಿತವಾಗಿ ಕುಂದುಕೊರತೆ ಸಭೆಗಳನ್ನು ನಡೆಸಲು ವಿಫಲವಾಗಿರುವ ಸಂಬಂಧಪಟ್ಟ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ನೀಡಿ ಅಗತ್ಯ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ.ಪ್ರಭು ಅವರು ಸೂಚಿಸಿದರು.ಇಲ್ಲಿನ ಜಿಲ್ಲಾ ಪಂಚಾಯತ್ ಸರ್.ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ  ಸೋಮವಾರ ನಡೆದ ವಿಕಲಚೇತನರ ಜಿಲ್ಲಾ ಮಟ್ಟದ ಕುಂದುಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿಕಲಚೇತನರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಪ್ರತಿ ಬಾರಿ ಜಿಲ್ಲಾ ಕಚೇರಿಗೆ ಬರುವ ಪರಿಸ್ಥಿತಿ ನಿರ್ಮಾಣವಾಗಬಾರದು. ತಾಲ್ಲೂಕು ಹಂತದಲ್ಲಿಯೇ ಸಮಸ್ಯೆಗಳನ್ನು ಪರಿಹರಿಸಿ, ಸರ್ಕಾರದಿಂದ ದೊರೆಯಬೇಕಾದ ಸೌಲಭ್ಯಗಳು ಮತ್ತು ಸೇವೆಗಳನ್ನು ಅರ್ಹರಿಗೆ ಸಮರ್ಪಕವಾಗಿ ಒದಗಿಸಬೇಕು ಎಂದರು 
ಸರ್ಕಾರಿ ಕಚೇರಿಗಳಲ್ಲಿ ರ‍್ಯಾಂಪ್ ಕಡ್ಡಾಯ: ವಿಕಲಚೇತನರಿಗೆ ಅನುಕೂಲವಾಗುವಂತೆ ಪ್ರತಿಯೊಂದು ಸರ್ಕಾರಿ ಕಚೇರಿ ಹಾಗೂ ಆಸ್ಪತ್ರೆಗಳಲ್ಲಿ ರ‍್ಯಾಂಪ್ ಅಥವಾ ಲಿಫ್ಟ್ ವ್ಯವಸ್ಥೆ ಇರಬೇಕು. ಜಿಲ್ಲೆಯಲ್ಲಿ ರ‍್ಯಾಂಪ್ ಸೌಲಭ್ಯ ಇಲ್ಲದ ಕಚೇರಿಗಳು ಮತ್ತು ಆಸ್ಪತ್ರೆಗಳ ಮಾಹಿತಿಯನ್ನು ಪಟ್ಟಿ ಮಾಡಿ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸಲ್ಲಿಸಬೇಕು ಎಂದು ವಿಕಲಚೇತನ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಘ-ಸAಸ್ಥೆಗಳು ಹಾಗೂ ಎಂಆರ್‌ಡಬ್ಲ್ಯೂ, ಯುಆರ್‌ಡಬ್ಲ್ಯೂ, ವಿ.ಆರ್‌ಡಬ್ಲ್ಯೂಗಳಿಗೆ ಹಾಗೂ ವಿಕಲ ಚೇತನರಿಗೆ ತಿಳಿಸಿದರು. ಜಿಲ್ಲೆಯಲ್ಲಿ ನಡೆಯುವ ಸರ್ಕಾರಿ ಕಟ್ಟಡ ಕಾಮಗಾರಿಗಳಲ್ಲಿ ರ‍್ಯಾಂಪ್ ವ್ಯವಸ್ಥೆಯನ್ನು ಅಳವಡಿಸಿರುವ ಬಗ್ಗೆ ಎಲ್ಲಾ ಕಾರ್ಯಪಾಲಕ ಅಭಿಯಂತರರಿಂದ ದೃಢೀಕರಣ ಪತ್ರ ಪಡೆಯುವಂತೆ ವಿಕಲಚೇತನರ ಕಲ್ಯಾಣಾಧಿಕಾರಿಗೆ ನಿರ್ದೇಶನ ನೀಡಿದರು.ಒಂದು ತಿಂಗಳೊಳಗೆ ಉದ್ಯೋಗ ಮೇಳ: ವಿಕಲಚೇತನರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಸಕಲ ಸಿದ್ಧತೆಗಳೊಂದಿಗೆ ಮುಂದಿನ ಒಂದು ತಿಂಗಳೊಳಗಾಗಿ ಉದ್ಯೋಗ ಮೇಳ ಆಯೋಜಿಸಬೇಕು. ಉದ್ಯೋಗ ಮೇಳದಲ್ಲಿ ವಿಕಲಚೇತನರಿಗೆ ಆದ್ಯತೆ ನೀಡಿ ಉದ್ಯೋಗ ದೊರಕಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉದ್ಯೋಗಾಧಿಕಾರಿಗೆ ತಿಳಿಸಿದರು.ಆಧಾರ್ ಕಾರ್ಡ್ ಮಾಡಿಸಲು ಅಥವಾ ತಿದ್ದುಪಡಿ ಮಾಡಲು ವಿಕಲಚೇತನರ ಬೆರಳಚ್ಚು ತಂತ್ರಾಂಶದಲ್ಲಿ ಸ್ವೀಕರಿಸದ ಸಂದರ್ಭದಲ್ಲಿ, ತಾಲ್ಲೂಕು ಮಟ್ಟದ ಆಹಾರ ನಿರೀಕ್ಷಕರ ಮೂಲಕ ಪ್ರಮಾಣಪತ್ರ ನೀಡಿ ಅರ್ಹರಿಗೆ ಸರ್ಕಾರದ ಸೌಲಭ್ಯಗಳು ದೊರೆಯುವಂತೆ ಕ್ರಮವಹಿಸಬೇಕು ಎಂದರು.ವಿದ್ಯಾರ್ಥಿವೇತನಕ್ಕೆ ನೋಂದಣಿ: ಜಿಲ್ಲೆಯಲ್ಲಿರುವ ಸುಮಾರು 22 ಸಾವಿರ ವಿಕಲಚೇತನರ ಪೈಕಿ ವಿದ್ಯಾರ್ಥಿಗಳನ್ನು ಗುರುತಿಸಿ, ವಿದ್ಯಾರ್ಥಿವೇತನ ಹಾಗೂ ವಿದ್ಯಾರ್ಥಿ ಪ್ರೋತ್ಸಾಹ ಯೋಜನೆಗಳಡಿ ನೋಂದಣಿ ಮಾಡಿಸಲು ಅರಿವು ಮೂಡಿಸಬೇಕು. ಮೊಬೈಲ್ ಕ್ಲಿನಿಕ್ ಮೂಲಕ ವಿಕಲಚೇತನರು ಇರುವ ಸ್ಥಳಗಳಿಗೆ ತೆರಳಿ ನಿಯಮಿತ ಆರೋಗ್ಯ ತಪಾಸಣೆ ನಡೆಸಬೇಕು. ವಿಕಲಚೇತನ ಸ್ನೇಹಿ ಬಸ್‌ಗಳ ಸೌಲಭ್ಯ ಕಲ್ಪಿಸುವ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಕ್ರಮವಹಿಸಬೇಕು ಎಂದು ತಿಳಿಸಿದರು.ಗ್ರಾಮ ಪಂಚಾಯಿತಿಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಸೂಲಾಗುವ ತೆರಿಗೆಯ ಶೇ.5ರಷ್ಟು ಮೊತ್ತವನ್ನು ವಿಕಲಚೇತನರ ಕಲ್ಯಾಣಕ್ಕೆ ಬಳಸುವ ಹಿನ್ನೆಲೆಯಲ್ಲಿ ಜಿಲ್ಲೆಗೆ ಲಭ್ಯವಾಗುವ ಅನುದಾನದ ಮಾಹಿತಿ ಪಡೆದು, ಅದರಡಿ ಸುಮಾರು 2,000 ವಿಕಲಚೇತನರಿಗೆ ಅಗತ್ಯ ಸಾಧನ ಸಲಕರಣೆಗಳನ್ನು ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.ಪುನರ್ವಸತಿ ಕೇಂದ್ರ ನಿರ್ಮಾಣಕ್ಕೆ ಜಾಗ ಗುರುತಿಸಿ: ಜಿಲ್ಲಾ ಕೇಂದ್ರದಲ್ಲಿ ವಿಕಲಚೇತನರ ಪುನರ್ವಸತಿ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಜಾಗ ಗುರುತಿಸಿ, ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಬೇಕು. ವಿವಿಧ ಯೋಜನೆಗಳಡಿ ಬ್ಯಾಂಕ್ ಸಾಲ ಹಾಗೂ ಸಹಾಯಧನಕ್ಕೆ ಮಂಜೂರಾತಿ ಪಡೆದಿರುವ ವಿಕಲಚೇತನ ಫಲಾನುಭವಿಗಳಿಗೆ ಸಾಲ ಮಂಜೂರು ಮಾಡಲು ಕೆಲವು ಬ್ಯಾಂಕುಗಳು ನಿರ್ಲಕ್ಷ್ಯ ತೋರುತ್ತಿರುವುದು ಕಂಡುಬAದಿದೆ. ಈ ಹಿನ್ನೆಲೆಯಲ್ಲಿ ಸಂಬAಧಪಟ್ಟ ಎಲ್ಲಾ ಬ್ಯಾಂಕ್ ವ್ಯವಸ್ಥಾಪಕರ ಸಭೆಯನ್ನು ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಆಯೋಜಿಸುವಂತೆ ಸೂಚಿಸಿದರು. ತಾಲ್ಲೂಕು ಮಟ್ಟದಲ್ಲಿ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸದಿರುವುದು ಹಾಗೂ ಜಿಲ್ಲಾ ಮಟ್ಟದ ಸಭೆಗಳ ನಡಾವಳಿ ಮತ್ತು ಅನುಪಾಲನಾ ವರದಿಯನ್ನು   ಜಿಲ್ಲಾ ಮಟ್ಟದ ವಿಕಲ ಚೇತನ ಅಧಿಕಾರಿಗಳು ಅನುಷ್ಠಾನಗೊಳಿಸದಿರುವ ಬಗ್ಗೆ ಮುಂದಿನ ಕೆಡಿಪಿ ಸಭೆಯಲ್ಲಿ ಮಂಡಿಸಿ, ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತರುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಅತಿಕ್ ಪಾಷ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚೇತನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಆರ್.ವೆಂಕಟೇಶರೆಡ್ಡಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ಜ್ಯೋತಿಲಕ್ಷ್ಮಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST