ಬೆಂಗಳೂರು: ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ಬಿಜೆಪಿಯು ಸೋಮವಾರ ರಾಜ್ಯಾದಾದ್ಯಂತ ಪ್ರತಿಭಟನೆ ನಡೆಸಲಿದೆ.
ವಕ್ಫ್ ಆಸ್ತಿ ಕುರಿತ ಗೆಜೆಟ್ ಅಧಿಸೂಚನೆ ಹಿಂಪಡೆಯಬೇಕು, ಅಧಿಕಾರ ದುರ್ಬಳಕೆ ಕುರಿತು ಸಿಬಿಐ ತನಿಖೆ ನಡೆಸಬೇಕು ಮತ್ತು ವಿವಾದಕ್ಕೆ ಕಾರಣವಾದ ಸಚಿವ ಜಮೀರ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂಬ ಆಗ್ರಹಗಳನ್ನು ಮುಂದಿಟ್ಟುಕೊಂಡು ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ತಾಲೂಕುಗಳ ತಾಲೂಕು ಕಚೇರಿ ಎದುರು ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿದೆ. ಈ ಪ್ರತಿಭಟನೆಯಲ್ಲಿ ಪಕ್ಷದ ಎಲ್ಲಾ ಮುಖಂಡರು ಹಾಗೂ ಕಾರ್ಯಾಕರ್ತರು ಪಾಲ್ಗೊಳ್ಳಲಿದ್ದಾರೆಂದು ಬಿಜೆಪಿ ತಿಳಿಸಿದೆ.ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ 'ಜಗನ್ನಾಥ ಭವನ'ದಲ್ಲಿ ಭಾನುವಾರ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರು, 1974ರ ವಕ್ಫ್ ಆಸ್ತಿ ಕುರಿತ ಗೆಜೆಟ್ ಅಧಿಸೂಚನೆ ಹಿಂಪಡೆಯಲು ಆಗ್ರಹಿಸಿ ಮತ್ತು ಅಧಿಕಾರ ದುರ್ಬಳಕೆಯ ಕುರಿತು ಸಿಬಿಐ ತನಿಖೆಗೆ ಆಗ್ರಹಿಸಿ ಸೋಮವಾರ ರಾಜ್ಯದೆಲ್ಲೆಡೆ ಪ್ರತಿಭಟನೆ ನಡೆಸಲಾಗುವುದು ಎಂದರು.
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.