LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ವಕ್ಫ್ ಹಗರಣ ರಿಂಗಣ ವಿಧಾನಸಭೆಯಲ್ಲಿ ಪ್ರತಿಪಕ್ಷಗಳಿಂದ ನಿಲುವಳಿ ಸೂಚನೆ ನೇರ ಚರ್ಚೆಗೆ ಪಟ್ಟು ಹಿಡಿಯುವ ಸಾಧ್ಯತೆ

ಬೆಳಗಾವಿ: ಬೆಳಗಾವಿ ಅಧಿವೇಶನದಲ್ಲಿ ಮೊದಲನೇ ದಿನವಾದ ಇಂದು ಪ್ರತಿಪಕ್ಷಗಳಾದ ಬಿಜೆಪಿ ಜೆಡಿಎಸ್ ಸದಸ್ಯರು ರಾಜ್ಯದಲ್ಲಿ ನಡೆದಿರುವ ವಕ್ಫ್ ಹಗರಣಗಳ ಬಗ್ಗೆ ಚರ್ಚೆಗೆ ಪಟ್ಟು ಹಿಡಿಯುವ ಸಾಧ್ಯತೆ ಇದೆ.ಇಂದು ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಇತ್ತೀಚೆಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿದ ನಂತರ ಪ್ರಶ್ನೋತ್ತರ ಕಲಾಪ ಕೈಬಿಟ್ಟು ವಕ್ಫ್ ಹಗರಣದ ವಿರುದ್ಧ ಚರ್ಚೆ ಕೈಗೊಳ್ಳಲು ಸಭಾಧ್ಯಕ್ಷರನ್ನು ಮನವಿ ಮಾಡಲಿದ್ದಾರೆ.

ಮಠಮಾನ್ಯಗಳು ಸೇರಿದಂತೆ ರಾಜ್ಯದ ಬಹುತೇಕ ರೈತರ ಜಮೀನನ್ನು ವಕ್ಫ್ ಆಸ್ತಿ ಎಂದು ನಮೂದಿಸಲಾಗುತ್ತಿದೆ. ಈ ಸರ್ಕಾರ ಕೇವಲ ಒಂದೇ ವರ್ಗದವರನ್ನು ಓಲೈಸಲು ಮುಂದಾಗಿದೆ. ರಾಜ್ಯದ ರೈತರನ್ನು ಒಕ್ಕಲೆಬ್ಬಿಸುವ ಕಾರ್ಯಕ್ಕೆ ಮುಂದಾಗಿದೆ. ಇದೊಂದು ರೈತ ವಿರೋಧಿ ಸರ್ಕಾರ. ವಕ್ಫ್ ವಿಚಾರವನ್ನು ನಿಲುವಳಿ ಸೂಚನೆ ಮೇರಗೆ ಚರ್ಚೆಗೆ ಅವಕಾಶ ನೀಡಲು ಸಭಾಧ್ಯಕ್ಷರನ್ನು ಕೋರಲಿದ್ದಾರೆ.

ಇದೇ ವೇಳೆ ಬಳ್ಳಾರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವಿನ ಹಿನ್ನೆಲೆ ತಪ್ಪು ನಮ್ಮ ಕಡೆಯಿಂದ ಆಗಿದ್ದರೆ ರಾಜೀನಾಮೆ ನೀಡಲು ಸಿದ್ಧ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿಕೆಗೆ ಸಂಬಂಧಪಟ್ಟಂತೆ ದಿನೇಶ್ ಗುಂಡೂರಾವ್ ಅವರ ರಾಜೀನಾಮೆಗೆ ಪಟ್ಟು ಹಿಡಿಯಲು ವಿಪಕ್ಷಗಳು ಅದರಲ್ಲೂ ಬಿಜೆಪಿ ನಾಯಕರು ತೀರ್ಮಾನ ಕೈಗೊಂಡಿದ್ದಾರೆ ಎನ್ನಲಾಗಿದೆ.

ಬಾಣಂತಿಯರ ಸರಣಿ ಸಾವಿನ ಹಿನ್ನೆಲೆ ಸಚಿವರೇ ಹೇಳಿಕೆ ಮಾಡಿದ್ದಾರೆ. ಇದನ್ನೇ ಅಸ್ತ್ರ ಮಾಡಿಕೊಳ್ಳಬೇಕು ಎಂದು ನಿರ್ಧಾರ ಮಾಡಿರುವ ಬಿಜೆಪಿ ಶಾಸಕರು ಶತಾಯಗತಾಯ ದಿನೇಶ್ ಗುಂಡೂರಾವ್ ರಾಜೀನಾಮೆಗೆ ಪಟ್ಟು ಹಿಡಿಯಲೇಬೇಕು ಎಂದು ತೀರ್ಮಾನಿಸಿದ್ದಾರೆ.ಈಗಾಗಲೇ ವಾಲ್ಮೀಕಿ ನಿಗಮದಲ್ಲಿನ ಅವ್ಯವಹಾರದ ವಿಚಾರವಾಗಿ ಅಂದಿನ ಸಚಿವ ಬಿ. ನಾಗೇಂದ್ರರ ರಾಜೀನಾಮೆ ಪಡೆಯುವಲ್ಲಿ ನಾವು ಸಫಲರಾಗಿದ್ದೇವೆ. ಸದ್ಯ ಬಳ್ಳಾರಿಯ ಆಸ್ಪತ್ರೆಯಲ್ಲಿ ಆಗಿರುವ ಅವಘಡ ಹಾಗೆಯೇ ಬಿಡಲು ಸಾಧ್ಯವಿಲ್ಲ. ಸಚಿವರೇ ರಾಜೀನಾಮೆ ಬಗ್ಗೆ ಉಲ್ಲೇಖಿಸಿರುವುದರಿಂದ ಅದನ್ನೇ ಅಸ್ತ್ರ ಮಾಡಿಕೊಳ್ಳೋಣ ಎಂದು ಬಿಜೆಪಿ ಮುಖಂಡರು ತೀರ್ಮಾನ ಮಾಡಿದ್ದಾರೆ ತಿಳಿದುಬಂದಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು