LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ವಕ್ಫ್ ಹಗರಣ ವಿರುದ್ಧ ಹೋರಾಟ ಅಶ್ವತ್ಥ್‍ನಾರಾಯಣ್

ಬೆಂಗಳೂರು: ವಕ್ಫ್ ಹಗರಣ ಇಡೀ ದೇಶಾದ್ಯಂತ ಚರ್ಚೆಯಲ್ಲಿದೆ. ರಾಜ್ಯದಲ್ಲೂ ಇದು ದೊಡ್ಡ ಪ್ರಮಾಣದಲ್ಲಿ ಚರ್ಚೆಯಾಗುತ್ತಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಬಿಜೆಪಿ ಹಿರಿಯ ಮುಖಂಡ ಡಾ.ಸಿ.ಎನ್. ಅಶ್ವತ್ಥ್‍ನಾರಾಯಣ ಹೇಳಿದ್ದಾರೆ.

ಪಕ್ಷದ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ತುಷ್ಟೀಕರಣ ರಾಜಕಾರಣ ಮಾಡಲು ಈ ನಿರ್ಧಾರ ತೆಗೆದುಕೊಂಡಿದೆ ಎಂದಿದ್ದಾರೆ.ಕೇವಲ ತುಷ್ಟೀಕರಣಕ್ಕಾಗಿ ಇದನ್ನೆಲ್ಲಾ ಮಾಡಲಾಗುತ್ತಿದೆ. ರೈತರ ಭೂಮಿ, ಮಠ ಮಾನ್ಯಗಳ ಜಾಗ ವಕ್ಫ್ ಆಗುತ್ತಿದೆ. ಸರ್ಕಾರ ಅಧಿಕಾರವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಜಮೀರ್ ಅಹ್ಮದ್ ಖಾನ್ ಅವರು ಸಿಎಂರನ್ನು ಓಲೈಕೆ ಮಾಡುತ್ತಾ, ಆರ್‍ಟಿಸಿ ನಲ್ಲಿ ಬರುವ ಹಾಗೇ ಮಾಡುತ್ತಿದ್ದಾರೆ ಎಂದು ದೂರಿದರು.

ಈಗ ಕಾಂಗ್ರೆಸ್ ಸರ್ಕಾರ ನೋಟಿಸ್ ಹಿಂಪಡೆಯುವ ಕೆಲಸ ಮಾಡುತ್ತಿದ್ದಾರೆ.ಹಳ ಮುಖ್ಯವಾಗಿ ಆರ್‍ಟಿಸಿ ನಲ್ಲಿ ಆಗಿರುವ ನಮೂದು ವಾಪಸ್ ಪಡೆಯಬೇಕು. ಇದು ನಮ್ಮ ಆಗ್ರಹ ಎಂದಿರುವ ಅವರು, ನಾವು ಬಿಜೆಪಿ ವತಿಯಿಂದ ಜನಾಂದೋಲನ ಮಾಡಲು ಮುಂದಾಗಿದ್ದೇವೆ ಎಂದಿದ್ದಾರೆ.ನವೆಂಬರ್ 21 ರಿಂದ ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಧರಣಿ ಮಾಡಲಾಗುತ್ತಿದೆ. ಜನರ ಮೇಲಿನ ಶೋಷಣೆ ತಡೆಯಲು ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಹೋರಾಟ ಮಾಡುವ ಕಾರ್ಯಕ್ರಮ ಇದು ಎಂದು ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು