LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ವಯನಾಡು ಸಂತ್ರಸ್ತರಿಗೆ ಬಿಬಿಎಂಪಿ ಅಧಿಕಾರಿ, ನೌಕರರ ನೆರವು

ಬೆಂಗಳೂರು: ಬಿಬಿಎಂಪಿ ಕೇಂದ್ರ ಕಛೇರಿಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘ ಮತ್ತು ಬಿಬಿಎಂಪಿ ನೌಕರರ ಸಹಕಾರ ಸಂಘದಿಂದ ಕೇರಳದ ವಯನಾಡ್ ನಲ್ಲಿ ಮಳೆ ಪ್ರವಾಹ, ಭೂಕುಸಿತದಿಂದ ಸಂಕಷ್ಟದಲ್ಲಿರುವ ಸಂತ್ರಸ್ತರಿಗೆ ಅಗತ್ಯ ವಸ್ತುಗಳ ನೆರವು ಮತ್ತು ದಿನಸಿ ಸಾಮಾಗ್ರಿಗಳನ್ನು ತಲುಪಿಸುವ ವಾಹನಕ್ಕೆ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ಮತ್ತು ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘ ಮತ್ತು ಸಹಕಾರ ಸಂಘದ ಅಧ್ಯಕ್ಷರಾದ ಎ.ಅಮೃತ್ ರಾಜ್ ರವರು ಚಾಲನೆ ನೀಡಿದರು.

ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ಮಾತನಾಡಿ ಜನರಿಗೆ ಸಮಸ್ಯೆ ಮತ್ತು ಸಂಕಷ್ಟಗಳು ಬಂದಾಗ ಬಿಬಿಎಂಪಿ ನೌಕರರ ಸಂಘವು ಸಹಾಯ, ಸಹಕಾರ ನೀಡುತ್ತಾ ಬಂದಿದ್ದು, ವಯನಾಡ್ ದುರಂತದಲ್ಲಿ ಸಂತ್ರಸ್ತರಾದವರಿಗೆ ನಮ್ಮ ಬಿಬಿಎಂಪಿ ಸಂಘವು ಅಂದಾಜು 25ಲಕ್ಷ ರೂಪಾಯಿ ಮೌಲ್ಯದ ದಿನಸಿ ಸಾಮಾಗ್ರಿಗಳು ನೀಡುತ್ತಿದ್ದಾರೆ. ಬಿಬಿಎಂಪಿ ನೌಕರರ ಸಂಘವು ಸಾಮಾಜಿಕ ಸೇವಾ ಕಾರ್ಯಗಳನ್ನು ಮಾಡುತ್ತಾ ಬಂದಿದೆ.

ಬಿಬಿಎಂಪಿ ಅಧಿಕಾರಿ ಮತ್ತು ನೌಕರರು ತಮ್ಮ ಸಂಬಳದಲ್ಲಿ ವಯನಾಡ್ ಸಂತ್ರಸ್ತರಿಗೆ ನೆರವಿನ ಸಹಾಯ ಹಸ್ತ ನೀಡಿದ್ದಾರೆ.ವಯನಾಡ್ ದುರಂತ ನೋವಿನ ಸಂಗತಿ, ಇಂತಹ ಸಂಕಷ್ಟದ ಸಮಯದಲ್ಲಿ ಸರ್ಕಾರದ ಅಧಿಕಾರಿಗಳ ಜೊತೆಯಲ್ಲಿ ಸಂಘ, ಸಂಸ್ಥೆಗಳು ಸಹಕಾರ ನೀಡುತ್ತಿದೆ ಎಂದು ಹೇಳಿದರು.
ಅಧ್ಯಕ್ಷರಾದ ಎ.ಅಮೃತ್ ರಾಜ್ ರವರು ಮಾತನಾಡಿ ಕೇರಳ ವಯನಾಡ್ ನಲ್ಲಿ ಮಳೆ ಪ್ರವಾಹ ದುರಂತದಲ್ಲಿ ಜನರು ಸಂಕಷ್ಟದಲ್ಲಿ ಇದ್ದಾರೆ .ಸರ್ಕಾರ ಜೊತೆಯಲ್ಲಿ ಸಂಘ, ಸಂಸ್ಥೆಗಳು ಸಾರ್ವಜನಿಕರು ಸಹಕಾರ ನೀಡಿದಾಗ ಬಂದ ಸಂಕಷ್ಟಗಳಿಗೆ ಸುಲಭ ಪರಿಹಾರವಾಗುತ್ತದೆ.

ನಮ್ಮ ಸಂಘಟನೆ ಈ ಹಿಂದೆ ಉತ್ತರ ಕರ್ನಾಟಕ ಮತ್ತು ಕೊಡಗು ಮಳೆ ಪ್ರವಾಹದಿಂದ ಸಂಕಷ್ಟ ಸಮಯದಲ್ಲಿ ದಿನಸಿ ಸಾಮಾಗ್ರಿಗಳನ್ನು ತೆಗೆದುಕೊಂಡು ಜನರಿಗೆ ನೀಡಲಾಯಿತು.ಧರ್ಮಸ್ಥಳದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದಗ 1ಲಕ್ಷ ಲೀಟರ್ ಕುಡಿಯುವ ನೀರನ್ನು ನೀಡಲಾಯಿತು. ವಯನಾಡ್ ಸಂತ್ರಸ್ತರಿಗೆ ಹತ್ತು ಟನ್ ಆಹಾರ ಪದಾರ್ಥಗಳು ಮತ್ತು ದಿನ ನಿತ್ಯ ಬಳಕೆಯ ವಸ್ತುಗಳಾದ (ಹಾಸಿಗೆ, ದಿಂಬು, ಬೆಡ್ ಶಿಟ್,ಸ್ವಟರ್, ಜರ್ಕಿನ್, ಪಾದರಕ್ಷೆಗಳು, ಸೀರೆ, ಕಂಬಳಿ, ಮಹಿಳೆಯರ ನೈಟ್ ಡ್ರೆಸ್ ಮತ್ತು ಪಂಚೆ,ಟವಲ್, ಲುಂಗಿ, ಟೀ ಶರ್ಟ್) ನೀಡಲಾಗುತ್ತಿದೆ ಎಂದು ಹೇಳಿದರು.

ಕ್ಷೇಮಾಭಿವೃದ್ದಿ ಸಂಘದ ಮತ್ತು ಸಹಕಾರ ಸಂಘದ ಪದಾಧಿಕಾರಿಗಳಾದ ಸಾಯಿಶಂಕರ್, ಎ.ಜಿ.ಬಾಬಣ್ಣ, ಕೆ.ಜಿ.ರವಿ, ಡಾ.ಶೋಭಾ, ಹೆಚ್.ಕೆ.ಹರೀಶ್, ಸೋಮಶೇಖರ್,ಆರ್.ರೇಣುಕಾಂಬ , ಕೆ.ಮಂಜೇಗೌಡ, ಶ್ರೀಧರ್ ಎನ್, ಸಂತೋಷ್ ಕುಮಾರ್, ಎನ್.ಮಂಜುನಾಥ್, ಕೆ.ನರಸಿಂಹ ಕೆ.ಸಂತೋಷ್ ಕುಮಾರ್ ನಾಯ್ಕ, ಸಿ.ಎಂ.ಮುನಿರಾಜು, ಮಹೇಶ್ ಎಂ, ಮಂಜುನಾಥ್ ಎಲ್.ಆರ್, ಹರೀಶ್ ಕುಮಾರ್ ಎನ್, ವಿನಯಕುಮಾರ್, ರಾಜಶೇಖರ್, ಮಂಜುನಾಥ್, ವಾಣಿ ಅರ್.ಪಿ.ರವರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು