LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

`ವರ್ಷಕ್ಕೆ 1 ಲಕ್ಷ ಮಂದಿಗೆ ತರಬೇತಿ ನೀಡಿ ವಿದೇಶದಲ್ಲಿ ಉದ್ಯೋಗಾವಕಾಶ’

ಬೆಂಗಳೂರು: ವರ್ಷಕ್ಕೆ ಕನಿಷ್ಠ ಒಂದು ಲಕ್ಷ ಮಂದಿಗೆ ತರಬೇತಿ ನೀಡಿ, ಅವರಿಗೆ ಉದ್ಯೋಗಾವಕಾಶ ಕಲ್ಪಿಸಿ ವಿದೇಶಕ್ಕೆ ಕಳುಹಿಸುವುದು ನಮ್ಮ ಪ್ರಮುಖ ಗುರಿಯಾಗಿದೆ ಎಂದು ‘ಭಾರತ್ ಸ್ಕೂಲ್ ಆಫ್ ವರ್ಟಿಕಲ್ ಟ್ರಾನ್ಸ್‍ಪೋರ್ಟೇಷನ್’ (BSVT) ಸಿಇಒ ಸಂತೋಷ ಕುಮಾರ್ ಹೇಳಿದರು.
ಭಾರತದ ಮೊದಲ ಸಂಸ್ಥೆ ‘ಭಾರತ್ ಸ್ಕೂಲ್ ಆಫ್ ವರ್ಟಿಕಲ್ ಟ್ರಾನ್ಸ್‍ಪೋರ್ಟೇಷನ್’ನ ಬೆಂಗಳೂರಿನ ಮೊಟ್ಟಮೊದಲ ತರಬೇತಿ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಬುಧವಾರ ಲಲಿತ್ ಅಶೋಕ್ ಹೋಟೆಲ್‍ನಲ್ಲಿ ನಡೆದ ಸಮಾರಂಭದಲ್ಲಿ ಈ ತರಬೇತಿ ಕೇಂದ್ರದ ವಿವಿಧ ಕೋರ್ಸ್‍ಗಳಿಗೆ ಚಾಲನೆ ನೀಡಲಾಯಿತು. ಕಾರ್ಮಿಕ ಸಚಿವ ಸಂತೋಷಲಾಡ್, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ಶಾಂತಿ ನಗರ ಶಾಸಕ ಎನ್.ಎ.ಹ್ಯಾರಿಸ್, ನಿವೃತ್ತ ಐಪಿಎಸ್ ಅಧಿಕಾರಿ ಹಾಗೂ ಬೆಂಗಳೂರಿನ ಮಾಜಿ ಪೊಲೀಸ್ ಆಯುಕ್ತರಾದ ಭಾಸ್ಕರ್ ರಾವ್, ಕರ್ನಾಟಕ ರಾಜ್ಯ, ಖಾತರಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್.ಆರ್.ಮೆಹ್ರೋಜ್ ಖಾನ್ ಉಪಸ್ಥಿತರಿದ್ದರು.

ಭಾರತ್ ಸ್ಕೂಲ್ ಆಫ್ ವರ್ಟಿಕಲ್ ಟ್ರಾನ್ಸ್‍ಪೋರ್ಟೇಷನ್ ಟ್ರೈನಿಂಗ್ ಪ್ರೈವೇಟ್ ಲಿಮಿಟೆಡ್‍ನ ವ್ಯವಸ್ಥಾಪಕ ನಿರ್ದೇಶಕ ಮುಕ್ತ ಅತಿಥಿಗಳನ್ನು ಸ್ವಾಗತಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ರಾಜ್ಯ ಕಾರ್ಮಿಕ ಸಚಿವರಾದ ಶ್ರೀ ಸಂತೋಷ ಲಾಡ್ ಅವರು, ವರ್ಟಿಕಲ್ ಟ್ರಾನ್ಸ್‍ಪೋರ್ಟೇಷನ್‍ನಲ್ಲಿ ಡಿಪ್ಲೋಮಾ ಕೋರ್ಸ್ ಒದಗಿಸುತ್ತಿರುವುದು ದೇಶದಲ್ಲಿ ಇದೇ ಮೊದಲು. ಈ ನಿಟ್ಟಿನಲ್ಲಿ ಬಿಎಸ್‍ವಿಟಿ ಪ್ರಮುಖ ಹೆಜ್ಜೆಯಿಟ್ಟಿರುವುದು ಸಂತೋಷದ ಸಂಗತಿ.

ಈ ಉದ್ಯಮದೊಳಗಿನ ಕೌಶಲ್ಯದ ಕೊರತೆಯನ್ನು ನೀಗಿಸುವ ಕೆಲಸ ಆಗಬೇಕು. ರಾಜ್ಯದಲ್ಲಿ ಪ್ರತಿ ವರ್ಷ 10 ಲಕ್ಷ ಮಕ್ಕಳು ಎಸ್ಸೆಸ್ಸೆಲ್ಸಿ ಮುಗಿಸಿ ಹೊರಬರುತ್ತಾರೆ. ಈ ಪೈಕಿ 5 ಲಕ್ಷ ಮಂದಿ ಪಿಯುಸಿಗೆ ಹೋಗುತ್ತಾರೆ. ಅದರಲ್ಲಿ3 ಲಕ್ಷ ಮಂದಿ ಮಾತ್ರ ಪದವಿ, ಸ್ನಾತಕೋತ್ತರದಂಥ ಉನ್ನತ ಶಿಕ್ಷಣದತ್ತ ಮುಖ
ಮಾಡುತ್ತಾರೆ.

ಎಸ್ಸೆಸ್ಸೆಲ್ಸಿ ಮುಗಿಸಿದ ಉಳಿದ 7 ಲಕ್ಷ ಮಂದಿಗೆ ಅತ್ಯುತ್ತಮ ತರಬೇತಿ ನೀಡಿ, ಅವರನ್ನು ಕೌಶಲ್ಯಯುತರನ್ನಾಗಿಸುವತ್ತ ಗಮನ ಹರಿಸುವ ಕೆಲಸ ಆಗಬೇಕಿದೆ. ಬಿಎಸ್‍ವಿಟಿಯಂಥ ಸಂಸ್ಥೆಗಳು ರಾಷ್ಟ್ರೀಯ, ಅಂತಾರಾಷ್ಟ್ರೀಯ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಂಡು ಇಂಥ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಲಭ್ಯವಾಗುವಂತೆ ಮಾಡಬೇಕು ಎಂದು ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು