LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಇಡಿ ವಶಕ್ಕೆ ನಾಗೇಂದ್ರ ಬೆಂಗಳೂರು ಡಾಲರ್ಸ್ ಕಾಲೋನಿ ನಿವಾಸದಲ್ಲಿ ಕಾರ್ಯಾಚರಣೆ

ಬೆಂಗಳೂರು: ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಿಗಮದ 187 ಕೋಟಿ ರೂ. ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಬಳ್ಳಾರಿ ಗ್ರಾಮೀಣ ಕಾಂಗ್ರೆಸ್ ಶಾಸಕ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಇಂದು ಬೆಳಗ್ಗೆ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿ ವಶಕ್ಕೆ ಪಡೆದುಕೊಂಡರು. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ಕೇಸ್‍ನಲ್ಲಿ ಈಗಾಗಲೇ ಸಿಬಿಐ ಸಹ ತನಿಖೆ ನಡೆಸಿದೆ.

ಇದರ ಬೆನ್ನಲ್ಲೇ ಏಕಾಏಕಿ ಇಡಿ ಅಧಿಕಾರಿಗಳು ಬುಧವಾರ ಕಾಂಗ್ರೆಸ್ ಶಾಸಕರಾದ ನಾಗೇಂದ್ರ ಮತ್ತು ಬಸನಗೌಡ ದದ್ದಲ್ ನಿವಾಸಗಳ ಮೇಲೆ ದಾಳಿ ಮಾಡಿ, ದಾಖಲೆಗಳನ್ನು ಪರಿಶೀಲನೆ ನಡೆಸಿದರು.ಬುಧವಾರ ಬೆಳ್ಳಂಬೆಳಗ್ಗೆ ರಾಯಚೂರು ಗ್ರಾಮೀಣ ಶಾಸಕರಾದ ಬಸನಗೌಡ ದದ್ದಲ್ ಹಾಗೂ ಬಳ್ಳಾರಿ ಗ್ರಾಮೀಣ ಶಾಸಕರಾದ ನಾಗೇಂದ್ರ ನಿವಾಸದ ಮೇಲೆ ಈಟಿ ಅಧಿಕಾರಿಗಳು ದಾಳಿ ಮಾಡಿದ್ದು,

ಬಳಿಕ ಇಡಿ ಅಧಿಕಾರಿಗಳು ಬೆಂಗಳೂರಿನಲ್ಲಿ ನಾಗೇಂದ್ರ ಆಪ್ತ ಸಹಾಯ ಹರೀಶ್ ಎಂಬುವರನ್ನು ವಶಕ್ಕೆ ಪಡೆದುಕೊಂಡು, ವಿಚಾರಣೆ ನಡೆಸಿದ್ದರು. ಈ ವೇಳೆ ಹರೀಶ್ ನೀಡಿದ ಕೆಲ ಮಾಹಿತಿ ಆಧಾರದ ಮೇಲೆ ಶಾಸಕ ನಾಗೇಂದ್ರನ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ಯಾಂಕ್ ಖಾತೆಯಿಂದ ಹಣ ಅಕ್ರಮ ವರ್ಗಾವಣೆ ಬಗ್ಗೆ ನನಗೇನು ಗೊತ್ತಿಲ್ಲ ಎಂದು ಮಾಜಿ ಸಚಿವ ನಾಗೇಂದ್ರ ಪ್ರತಿಕ್ರಿಯೆ ನೀಡಿದರು.

ಪ್ರಕರಣ ಸಂಬಂಧ ವಿಚಾರಣೆಗಾಗಿ ಕಾಂಗ್ರೆಸ್ ಮಾಜಿ ಸಚಿವ ನಾಗೇಂದ್ರ ಅವರನ್ನು ಇಂದು ಬೆಳಗ್ಗೆ ಇಡಿ ಅಧಿಕಾರಿಗಳು ವಶಕ್ಕೆ ಪಡೆದರು. ಇಡಿ ಕಚೇರಿಗೆ ಕರೆದೊಯ್ಯುವ ವೇಳೆ ಮಾಧ್ಯಮಗಳಿಗೆ, ನನಗೇನೂ ಗೊತ್ತಿಲ್ಲ ಎಂದಷ್ಟೇ ನಾಗೇಂದ್ರ ಅವರು ಪ್ರತಿಕ್ರಿಯಿಸಿದರು.ಹಗರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳವರೆಗೆ ಜಾರಿ ನಿರ್ದೇಶನಾಲಯ ಶೋಧ ನಡೆಸಿತು. ಅಧಿಕಾರಿಗಳು, ಬಸನಗೌಡ ದದ್ದಲ್ ಅವರ ಮನೆ, ಕಚೇರಿಗಳಲ್ಲಿ ಪರಿಶೀಲನೆ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿತ್ತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು