LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ವಾಷಿಂಗ್ಟನ್ ಸುಂದರ್ ಗೆ ಆದ್ಯತೆ ನೀಡಿದ್ದೇ ಅಶ್ವಿನ್ ನಿವೃತ್ತಿಗೆ ಕಾರಣ: ಹರ್ಭಜನ್

ಮುಂದಿನ ವರ್ಷ ಇಂಗ್ಲೆಂಡ್ ಪ್ರವಾಸಕ್ಕೆ ಆಯ್ಕೆಯಾಗುವ ಬಗ್ಗೆ ಖಾತ್ರಿ ಇಲ್ಲದಿರುವುದು ಮತ್ತು ತಂಡದ ಮ್ಯಾನೇಜ್ ಮೆಂಟ್ ಯುವ ಸ್ಪಿನ್ನರ್ ವಾಷಿಂಗ್ಟನ್ ಸುಂದರ್ ಅವರಿಗೆ ಆದ್ಯತೆ ನೀಡುತ್ತಿರುವುದು ರವಿಚಂದ್ರನ್ ಅಶ್ವಿನ್ ಅವರ ನಿವೃತ್ತಿಯ ನಿರ್ಧಾರಕ್ಕೆ ಕಾರಣ ಇರಬಹುದು ಎಂದು ನಾನು ಅಂದುಕೊಂಡಿದ್ದೇನೆ ಎಂದು ಭಾರತದ ಮಾಜಿ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಅವರು ಅಭಿಪ್ರಾಯಪಟ್ಟಿದ್ದಾರೆ.

ರವಿಚಂದ್ರನ್ ಅಶ್ವಿನ್ ಅವರ ದಿಢೀರ್ ನಿವೃತ್ತಿಯ ಬಗ್ಗೆ ಸ್ಪೋರ್ಟ್ಸ್ ನೌ ಜೊತೆ ಮಾತನಾಡಿದ ಅವರು, ಇದೊಂದು ಅಚ್ಚರಿ ಮತ್ತು ಆಘಾತಕರ ನಿರ್ಧಾರವಾಗಿದೆ ಎಂದು ತಿಳಿಸಿದರು. ನನಗೆ ನಿಜಕ್ಕೂ ಅಚ್ಚರಿಯಾಯಿತು. ಇಂತಹ ದೊಡ್ಡ ನಿರ್ಧಾರವನ್ನು ಸರಣಿಯ ಮಧ್ಯದಲ್ಲೇ ತೆಗೆದುಕೊಂಡಿದ್ದರಿಂದ ನಿಜಕ್ಕೂ ಆಘಾತವಾಗಿದೆ ಎಂದು ತಿಳಿಸಿದರು.

ಮುಂದಿನ ಪಂದ್ಯಗಳಲ್ಲಿ ಆಡುವ ನಿರೀಕ್ಷೆಯಿತ್ತುಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯ ಮಧ್ಯದಲ್ಲೇ ಈ ನಿರ್ಧಾರ ತೆಗೆದುಕೊಂಡಿರುವುದಕ್ಕೆ ನಿಜವಾಗಿಯೂ ನನಗೆ ಅಚ್ಚರಿಯಾಗಿದೆ. 4ನೇ ಮತ್ತು 5ನೇ ಟೆಸ್ಟ್ ಪಂದ್ಯಗಳು ನಡೆಯಲಿರುವ ಮೆಲ್ಬರ್ನ್ ಮತ್ತು ಸಿಡ್ನಿ ಕ್ರೀಡಾಂಗಣದ ಪಿಚ್ ಗಳು ಸ್ಪಿನ್ನರ್ ಗಳಿಗೆ ನೆರವಾಗುವುದರಿಂದ ಅವರಲ್ಲಿ ಮಹತ್ವದ ಪಾತ್ರ ವಹಿಸುವರು ಎಂದು ನಾವೆಲ್ಲರೂ ಅಂದುಕೊಂಡಿದ್ದೆವು.

ಆದರೆ ಅವರು ವೈಯಕ್ತಿಕ ನಿರ್ಧಾರಕ್ಕೆ ನಾವು ಗೌರವ ನೀಡಲೇಬೇಕು. ಅವರು ಬಹಳ ಯೋಚಿಸಿಯೇ ಈ ನಿರ್ಧಾರಕ್ಕೆ ಬಂದಿರುತ್ತಾರೆ. ಅವರೊಬ್ಬ ಶ್ರೇಷ್ಠ ಆಟಗಾರ ಅರ ಸಾಧನೆಗೆ ನನ್ನ ಸೆಲ್ಯೂಟ್. ಭಾರತಕ್ಕಾಗಿ ಅವರು ಬಹಳಷ್ಟು ಪಂದ್ಯ ಮತ್ತು ಸರಣಿಗಳನ್ನು ಗೆದ್ದುಕೊಟ್ಟಿದ್ದಾರೆ. ಅವರ ಕ್ರಿಕೆಟ್ ಜೀವನದಲ್ಲಿ ಅವರು ಮಹತ್ತರವಾದುದನ್ನು ಸಾಧಿಸಿದ್ದಾರೆ. ಅವರ ನಿವೃತ್ತ ಜೀವನವೂ ಸುಖಕರವಾಗಿರಲಿ ಎಂದು ನಾನು ಆಶಿಸುತ್ತೇನೆ ಎಂದರು.

ಕ್ರಿಕೆಟ್ ನಲ್ಲಿ `ಕ್ಯಾರಂ' ಬಾಲ್ ಹೇಗೆ ಬಂತು: ಹೀಗಿದೆ `ಅಶ್ವಿನ್' ಅಪರೂಪದ ಬೌಲಿಂಗ್ ಶೈಲಿಯ ಹಿಂದಿನ ಕತೆ!ವಾಶಿಂಗ್ಟನ್ ಸುಂದರ್ ಗೆ ಹೆಚ್ಚುತ್ತಿರುವ ಆದ್ಯತೆ: 2025ರಲ್ಲಿ ಭಾರತ ತಂಡ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದ್ದು ಅಲ್ಲಿ ವಾಶಿಂಗ್ಟನ್ ಸುಂದರ್ ಅವರಿಗೆ ಆದ್ಯತೆ ನೀಡುವ ಸಾಧ್ಯತೆಯಿರುವುದೂ ಸಹ ಅಶ್ವಿನ್ ಅವರ ಈ ನಿರ್ಧಾರಕ್ಕೆ ಕಾರಣವಾಗಿರಬಹುದು. ಇತ್ತೀಚಿನ ವರ್ಷಗಳಲ್ಲಿ ಅವರು ವಿದೇಶಿ ಪ್ರವಾಸದಲ್ಲಿ ಹೆಚ್ಚು ಪಂದ್ಯಗಳನ್ನು ಆಡಿಲ್ಲ. ವಿದೇಶಗಳಲ್ಲಿ ನಿರಂತರವಾಗಿ ಆಡದೇ ಹೋದಾಗ ಇನ್ನು ನಾನು ಸಾಬೀತು ಪಡಿಸಬೇಕಿರುವುದು ಏನನ್ನು ಎಂಬ ಭಾವ ಆಗಾರನನ್ನು ಮೂಡುತ್ತದೆ. ಇದು ಸಹ ಅವರ ನಿವೃತ್ತಿಯ ನಿರ್ಧಾರಕ್ಕೆ ಕಾರಣವಾಗಿರಬಹುದು ಎಂದು ತಿಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು