LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ವಾಹನಗಳ ಮುಖಾಮುಖಿಗೆ ಇಬ್ಬರು ಬಲಿ

ಕಲಬುರಗಿ: ಮಹಿಂದ್ರಾ ಪಿಕಪ್ ಹಾಗೂ ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ೨೫ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಕಲಬುರಗಿ ಜಿಲ್ಲೆಯ ನಗರದ ಹೊರವಲಯದ ಹಾರುತಿ ಹಡಗಿಲ್ ಬಳಿ ಸಂಭವಿಸಿದೆ.
ರಟಕಲ್ ಗ್ರಾಮ ಕಲಬುರಗಿಯ ಜನತಾ ಲೇಔಟ್ ನಿವಾಸಿ ಮುರಗೇಶ್ ಚಂದ್ರಶೇಖರ ಉಪ್ಪಿನ್ (೪೨) ಹಾಗೂ ಶಹಾಬಾದ್ ನಿವಾಸಿ ಧೂಳಮ್ಮ ಯಮುನಪ್ಪ (೬೦) ಮೃತ ದುರ್ದೈವಿಗಳು.
ಮರುಗೇಶ್ ಕಲಬುರಗಿಯ ಎಚ್‌ಡಿಎಫ್‌ಸಿ ಗೋಲ್ಡ್ ಬ್ಯಾಂಕ್ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ಮಂಗಳವಾರ ಮಧ್ಯರಾತ್ರಿ ಕಾರಿನಲ್ಲಿ ಮುರುಗೇಶ್ ಹಾಗೂ ಇನ್ನೋರ್ವ ವ್ಯಕ್ತಿ ಕಲಬುರಗಿ ಕಡೆಗೆ ಹೊರಟಿದ್ದರು. ಈ ವೇಳೆ ಕಲಬುರಗಿ ಕಡೆಯಿಂದ ಬರುತ್ತಿದ್ದ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಅಪಘಾತದ ತೀವ್ರತೆಗೆ ಪಿಕಪ್ ಜೀಪಿನಲ್ಲಿದ್ದ ಧೂಳಮ್ಮ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.
ದುರ್ಘಟನೆಯಲ್ಲಿ ಪಿಕಪ್ ಜೀಪಿನ ಹಿಂಬದಿ ಕುಳಿತಿದ್ದ ೨೫ ಮಂದಿ ಗಾಯಗೊಂಡಿದ್ದಾರೆ. ಸಂಚಾರಿ ಪೊಲೀಸ್ ಠಾಣೆ-೧ರಲ್ಲಿ ಪ್ರಕರಣ ದಾಖಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು