LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ವಾಹನ ಚಲಾಯಿಸಿ ಕ್ರೀಡಾ ಜ್ಯೋತಿ ರಥಕ್ಕೆ ಚಾಲನೆ ನೀಡಿದ ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ತುಮಕೂರಿನಲ್ಲಿ ನ.24ರಂದು ನಡೆಯಲಿರುವ ರಾಜ್ಯ ಮಟ್ಟದ ಪತ್ರಕರ್ತರ ಕ್ರೀಡಾ ಕೂಟದ ಅಂಗವಾಗಿ ಜಿಲ್ಲೆಯಾದ್ಯಂತ ಸಂಚರಿಸಲಿರುವ ಕ್ರೀಡಾ ಜ್ಯೋತಿ ರಥವನ್ನು ಸ್ವತಃ ಗೃಹಸಚಿವ ಜಿ.ಪರಮೇಶ್ವರ ಅವರೇ ಚಾಲನೆ ಮಾಡುವ ಮೂಲಕ ಕ್ರೀಡಾ ಕೂಟಕ್ಕೆ ಶುಭ ಹಾರೈಸಿದರು.ಕ್ರೀಡಾ ಜ್ಯೋತಿ ರಥದ ವಾಹನವನ್ನು ಗೃಹ ಸಚಿವವರು ಚಾಲಾಯಿಸಿದರೆ, ಅದಕ್ಕೆ ಅವರ ಪತ್ನಿ ಕನ್ನಿಕಾ ಪರಮೇಶ್ವರ ಹಸಿರು ನಿಶಾನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಜಿ.ಪರಮೇಶ್ವರ ಅವರು, ಪತ್ರಕರ್ತರು ಸದಾ ಒತ್ತಡದ ನಡುವೆ ಕೆಲಸ ಮಾಡುತ್ತಿರುತ್ತಾರೆ. ಮಾನಸಿಕ ಒತ್ತಡ ನಿಭಾಯಿಸಲು ದೈಹಿಕ ವ್ಯಯಾಮ ಚಟುವಟಿಕೆಗಳು ಬಹಳ ಮುಖ್ಯವಾಗಿದೆ. ನಾನೂ ಒಬ್ಬ ಕ್ರೀಡಾಪಟುವಾಗಿ ಈ ಕ್ರೀಡಾಕೂಟ ಆಯೋಜನೆಯಿಂದ ಹಿಡಿದು ಅದರ ಭಾಗವಹಿಸಲು ಹೆಮ್ಮೆಯಾಗುತ್ತದೆ ಎಂದರು. ಕ್ರೀಡೆ ಎಂದರೆ ಎಲ್ಲರನ್ನೂ ಸೌಹಾರ್ಧಯುತವಾಗಿ ಬೆಸೆಯುವಂತಾದ್ದು. ಈ ರಥಯಾತ್ರೆ ಮೂಲಕ ಸೌಹಾದರ್ಶ ಸಂದೇಶವನ್ನು ಎಲ್ಲೆಡೆ ಸಾರಲಿ ಎಂದರು.

ರಾಜ್ಯ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರು ಈ ಬಾರಿ ತುಮಕೂರಿನಲ್ಲಿ ರಾಜ್ಯ ಮಟ್ಟದ ಕ್ರೀಡಾ ಕೂಟ ಏರ್ಪಡಿಸಲು ಅವಕಾಶ ನೀಡಿರುವುದಕ್ಕಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು. ತುಮಕೂರಿನ ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ನಡೆಯಲಿರುವ ಕ್ರೀಡಾಕೂಟಕ್ಕೆ ಜಿಲ್ಲಾಡಳಿತದ ಪೂರ್ಣ ಸಹಕಾರ ನೀಡಲಾಗುವುದು. ನಮ್ಮ ಅತಿಥಿಗಳಾಗಿ ರಾಜ್ಯದ ಎಲ್ಲಾ ಕಡೆಯಿಂದ ಬರುವ ಪತ್ರಕರ್ತರಿಗೆ ಕಲ್ಪತರ ನಾಡಿನ ಆತಿಥ್ಯ ನೀಡಲಾಗುವುದು ಎಂದರು.

ಜಿಲ್ಲಾಧ್ಯಕ್ಷ ಚಿ.ನೀ.ಪುರುಷೋತ್ತಮ ಮಾತನಾಡಿ, ಈ ಕ್ರೋಡಾ ಜ್ಯೋತಿಯನ್ನೊತ್ತ ರಥಯಾತ್ರೆಯು ಎಲ್ಲಾ ತಾಲೂಕುಗಲ್ಲಿ ಮೂರು ದಿನ ಸಂಚರಿಸಲಿದೆ ಎಂದರು.ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯಿತಿ ಸಿಇಒ ಜಿ.ಪ್ರಭು, ಎಸ್ಪಿ ಕೆ.ವಿ.ಅಶೋಕ್, ಶಾಸಕ ಜ್ಯೋತಿ ಗಣೇಶ್, ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜ, ಎಡಿಸಿ ತಿಪ್ಪೇಸ್ವಾಮಿ, ಹಿರಿಯ ಪತ್ರಕರ್ತರಾದ ನಾಗಣ್ಣ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದು ಶುಭ ಹಾರೈಸಿದರು.

ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ರಘುರಾಮ, ಜಿಲ್ಲಾ ಪದಾಧಿಕಾರಿಗಳಾದ ಶಾಂತರಾಜು, ಮಧುಕರ್, ಡಿ.ಎಂ.ಸತೀಶ್, ಕ್ರೀಡಾ ಸಂಚಾಲಕ ಸತೀಶ್ ಹಾರೋಗೆರೆ, ಪ್ರಚಾರ ಸಮಿತಿ ಅಧ್ಯಕ್ಷ ರಂಗರಾಜು, ಯಶಸ್, ಹರೀಶ್ ಆಚಾರ್ಯ ಮತ್ತಿತರರು ಇದ್ದರು.ತುಮಕೂರಿನಿಂದ ಹೊರಟ ಕ್ರೀಡಾ ಜ್ಯೋತಿಯ ರಥಕ್ಕೆ ಕುಣಿಗಲ್‍ನಲ್ಲಿ ಸಾಲುಗಟ್ಟ ನಿಂತು ಮೆರವಣಿಗೆ ನಡೆಸುವ ಮೂಲಕ ಭರ್ಜರಿ ಸ್ವಾಗತ ನೀಡಲಾಯಿತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು