LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ವಿಕ್ರಂಗೌಡ ಎನ್‍ಕೌಂಟರ್ ಬಗ್ಗೆ ಅನುಮಾನ ಅಗತ್ಯವಿಲ್ಲ ಸಚಿವ ಪರಮೇಶ್ವರ್ ಸ್ಪಷ್ಟನೆ

ಬೆಂಗಳೂರು: ವಿಕ್ರಂ ಗೌಡ ಎನ್‍ಕೌಂಟರ್ ವಿಚಾರದಲ್ಲಿ ಯಾವುದೇ ಅನುಮಾನ ವ್ಯಕ್ತಪಡಿಸುವ ಅಗತ್ಯವಿಲ್ಲ ಎಂದು ಗೃಹ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಎನ್‍ಕೌಂಟರ್ ಬಗ್ಗೆ ಕೆಲ ಎಡಪಂಥೀಯರು ಅನುಮಾನ ವಿಚಾರ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನನಗೆ ಬಂದ ಮಾಹಿತಿ ಪ್ರಕಾರ ವಿಕ್ರಮ್ ಗೌಡ ಬಳಿ ಅಪಾಯಕಾರಿ ಶಸ್ತ್ರಾಸ್ತ್ರಗಳಿದ್ದವು.

ವಿಕ್ರಮ್ ಮೇಲೆ ಕೊಲೆ ಆರೋಪ ಸೇರಿ 60 ಕ್ಕೂ ಹೆಚ್ಚು ಪ್ರಕರಣಗಳಿದ್ದವು. ಪೊಲೀಸರು ಶೂಟ್ ಮಾಡದಿದ್ದರೆ ವಿಕ್ರಮ್ ಗೌಡ ಪೊಲೀಸರನ್ನೇ ಶೂಟ್ ಮಾಡುವ ಸಾಧ್ಯತೆ ಇತ್ತು. ಹೀಗಾಗಿ ಎನ್‍ಕೌಂಟರ್ ಮಾಡಿರುವುದಾಗಿ ಪೊಲೀಸರು ಹೇಳಿದ್ದಾರೆ ಎಂದರು.ಕಾಂಗ್ರೆಸ್ ಬಂದ ಮೇಲೆ ನಕ್ಸಲ್ ಚಟುವಟಿಕೆ ಜಾಸ್ತಿಯಾಗಿದೆ ಎಂಬ ಶಾಸಕ ಸುನೀಲ್ ಕುಮಾರ್ ಆರೋಪಕ್ಕೆ, ನಕ್ಸಲ್ ನಿಗ್ರಹ ಪಡೆಯ ಕೇಂದ್ರ ಸ್ಥಳ ಕಾರ್ಕಳದಲ್ಲೇ ಇದೆ. ನಕ್ಸಲ್ ನಿಗ್ರಹ ದಳ ಸತತವಾಗಿ ನಕ್ಸಲರ ಚಟುವಟಿಕೆ ಮೇಲೆ ನಿಗಾ ಇಟ್ಟುಕೊಂಡೇ ಬಂದಿತ್ತು.

ಆದರೆ ಕಳೆದ 15 ದಿನಗಳ ಹಿಂದೆ ನಕ್ಸಲ್ ಮುಖಂಡರಾದ ಲತಾ ಹಾಗೂ ರಾಜು ಕಾಣಿಸಿಕೊಂಡರು. ಆಗ ಕೂಂಬಿಂಗ್ ಮಾಡುವುದಕ್ಕೆ ಶುರು ಮಾಡಿದರು ಎಂದು ತಿಳಿಸಿದರು.ಈ ಮಧ್ಯೆ ವಿಕ್ರಮ್ ಗೌಡ ತಂಡದಲ್ಲಿ ಇರುವ ಬಗ್ಗೆ ಮಾಹಿತಿ ಸಿಕ್ಕಿತು. ವಿಕ್ರಮ್ ಗೌಡನನ್ನು ಹಾಗೇ ಬಿಟ್ಟುಕೊಂಡು ಅವರು ಏನು ಮಾಡಿದರೂ ಸರಿ ಎನ್ನುವ ಪರಿಸ್ಥಿತಿ ಇರಲಿಲ್ಲ. ಅದಕ್ಕಾಗಿ ಎನ್‍ಕೌಂಟರ್ ಮಾಡಲಾಗಿದೆ. ಈ ಎನ್‍ಕೌಂಟರ್ ಮೇಲೆ ತನಿಖೆ ಆಗಬೇಕು ಅಂತ ಕೆಲವರು ಮಾಧ್ಯಮಗಳಲ್ಲಿ ಹೇಳಿದ್ದಾರೆ.

ಮಷಿನ್ ಗನ್ ಇಟ್ಟುಕೊಂಡಿದ್ದ 60 ಪ್ರಕರಣ ಇರುವ ವಿಕ್ರಮ್ ಗೌಡ ಎನ್‍ಕೌಂಟರ್ ಬಗ್ಗೆ ಯಾವ ದೃಷ್ಟಿಯಿಂದ ತನಿಖೆ ಮಾಡಬೇಕು ಹೇಳಿ ಎಂದು ಪ್ರಶ್ನಿಸಿದರು.
ನಾವು ಎಲ್ಲವನ್ನೂ ಕಾನೂನು ಚೌಕಟ್ಟಿನಲ್ಲಿ ಮಾಡಿದ್ದೇವೆ. ಇಲ್ಲಿ ಕಾಂಗ್ರೆಸ್ ಬಿಜೆಪಿ ಎನ್ನುವ ಪ್ರಶ್ನೆ ಬರಲ್ಲ, ಸುರಕ್ಷತೆ ಮುಖ್ಯ. ಈ ಹಿಂದೆಯೇ ಆತನಿಗೆ ಶರಣಾಗುವಂತೆ ಸೂಚಿಸಲಾಗಿತ್ತು. ಆದರೆ ಶರಣಾಗಿರಲಿಲ್ಲ ಎಂದು ಪರಮೇಶ್ವರ್ ಹೇಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು