LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ವಿಜಯೇಂದ್ರ ವಿರುದ್ಧ ಕಿಡಿ ನಿನ್ನೆ ಮೊನ್ನೆ ಬಂದವರಿಗೆ ಉತ್ತರ ಕೊಡಲಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಿನ್ನೆ ಮೊನ್ನೆ ಬಂದವರಿಗೆಲ್ಲಾ ಉತ್ತರ ಕೊಡಲಾರೆ ಎಂದು ಹೇಳುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಮುಖ್ಯಮಂತ್ರಿಯವರ ಬಗ್ಗೆ ಬಿ.ವೈ ವಿಜಯೇಂದ್ರ ಮಾಡಿರುವ ಆರೋಪ ಮತ್ತು ಟೀಕೆಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಅವರು, ವಿಜಯೇಂದ್ರ ನಿನ್ನೆ ಮನ್ನೆ ಬಂದಿದ್ದಾರೆ. ಹಾಗಾಗಿ ಅವರ ಬಗ್ಗೆ ನಾನು ಉತ್ತರ ನೀಡುವುದಿಲ್ಲ ಎಂದಿದ್ದಾರೆ.
ಆಪರೇಶನ್ ಕಮಲದ ಬಗ್ಗೆ ಮುಖ್ಯಮಂತ್ರಿಗಳು ದಾಖಲಾತಿಗಳಿದ್ದರೆ ತನಿಖೆ ಮಾಡಿಸಬೇಕೆಂದು ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರು, ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ ವಿಜಯೇಂದ್ರ ಮೊನ್ನೆ ಮೊನ್ನೆ ಬಂದಿದ್ದಾರೆ. ಈ ಬಗ್ಗೆ ನಾನು ಉತ್ತರ ನೀಡುವುದಿಲ್ಲ ಎಂದರು.
ರಾಜ್ಯದಲ್ಲಿ ನಡೆದ ಮೂರು ವಿಧಾನಸಭಾ ಉಪಚುನಾವಣೆಯಲ್ಲಿ ಮೂರು ಕಡೆಯೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
ಇದಕ್ಕೂ ಮುನ್ನಾ ಭಾರತದ ಮೊದಲ ಪ್ರಧಾನಿ ಪಂಡಿತ್ ಜವಹಾರ್ ಲಾಲ್ ನೆಹರು ಅವರ ಜನ್ಮ ದಿನದ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿರುವ ಜವಾಹಲ್ ಲಾಲ್ ನೆಹರು ಪ್ರತಿಮೆ ಬಳಿ ಅವರ ಭಾವಚಿತ್ರಕ್ಕೆ ಗೌರವ ನಮನ ಸಲ್ಲಿಸಿ ತದ ನಂತರ ಸುದ್ದಿಗಾರರೊಂದಿಗೆ ಮಾತನಡಿದರು.
ದೇಶಕ್ಕೆ ಸ್ವಾತಂತ್ರ÷್ಯ ಬಂದ ನಂತರ ಮೊದಲ ಪ್ರಧಾನಿಯಾದ ಜವಾಹರ್ ಲಾಲ್ ನೆಹರೂ ಅವರು ಆಧುನಿಕ ಭಾರತದ ಶಿಲ್ಪಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಜವಾಹರ್ ಲಾಲ್ ನೆಹರು ಅವರ ಜನ್ಮದಿನವನ್ನು ಮಕ್ಕಳ ದಿನಾಚರಣೆಯಾಗಿ ಆಚರಿಸಲಾಗುತ್ತದೆ.ನೆಹರೂ ಅವರಿಗೆ ಮಕ್ಕಳ ಬಗ್ಗೆ ಬಹಳ ಪ್ರೀತಿಯಿದ್ದುದ್ದರಿಂದ ಅವರನ್ನು ಚಾಚಾ ನೆಹರೂ ಎಂದು ಕರೆಯಲಾಗುತ್ತಿತ್ತು ಎಂದರು.
ಸುಮಾರು ೧೭ ವರ್ಷಗಳ ಕಾಲ ದೇಶದ ಪ್ರಧಾನಿಯಾಗಿ ದೇಶದಲ್ಲಿ ಮಿಕ್ಸಡ್ ಎಕಾನಮಿ ಜಾರಿ ಮಾಡಿದರು. ಸಮಾಜವಾದಿಯಾಗಿದ್ದ ನೆಹರೂ ಕಾಂಗ್ರೆಸ್ ಪಕ್ಷವನ್ನು ಸಮಾಜವಾದಿಯಾಗಿಸಿದ ರೂವಾರಿ. ನೆಹರೂ, ಲೋಹಿಯಾ ಮೊದಲಾದವರು ಸೇರಿ ಸೋಷಿಯಲಿಸ್ಟ್ ಕಾಂಗ್ರೆಸ್ ಕಟ್ಟಿದರು. ೧೭ ವರ್ಷಗಳಲ್ಲಿ ದೇಶದ ಅನೇಕ ಸಮಸ್ಯೆಗಳನ್ನು ಬಗೆಹರಿಸಿದರು. ಬೃಹತ್ ಕೈಗಾರಿಕೆ, ಅಣೆಕಟ್ಟು, ನೀರಾವರಿ, ಉದ್ಯೋಗ ಸೃಷ್ಟಿ ಮಾಡಿದರು. ವಿಜ್ಞಾನ ಮತ್ತು ವೈಚಾರಿಕತೆಯಲ್ಲಿ ನಂಬಿಕೆ ಇಟ್ಟುಕೊಂಡಿದ್ದ ನೆಹರೂ ಅವರು ಸುದೀರ್ಘ ಕಾಲ ದೇಶದ ಪ್ರಧಾನಿಯಾಗಿದ್ದರು. ಇಂದು ಆಧುನಿಕ ಭಾರತವನ್ನು ನಾವು ಕಾಣುತ್ತಿದ್ದರೆ ಅದಕ್ಕೆ ನೆಹರೂ ಅವರ ಕೊಡುಗೆ ಅಪಾರವಾಗಿದೆ . ಆಹಾರ ಸ್ವಾವಲಂಬನೆಗೆ ನೆಹರೂ, ಇಂದಿರಾ ಗಾಂಧಿ, ಜಗಜೀವನ್ ರಾಂ ಲಾಲ್ ಬಹದ್ದೂರ್ ಶಾಸ್ತಿç ಅವರೆಲ್ಲರೂ ಕಾರಣ. ಒಂದು ಕಾಲದಲ್ಲಿ ಆಹಾರಕ್ಕೆ ಬೇರೆ ದೇಶಗಳ ಮೇಲೆ ಅವಲಂಬಿಸಿದ್ದೆವು. ಇಂದು ನಾವು ಸ್ವಾವಲಂಬಿಯಾಗಿದ್ದರೆ ಅವರು ಕಾರಣ ಎಂದರು.
ಸಚಿವ ಜಮೀರ್ ಅಹಮ್ಮದ್ ಖಾನ್ ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು