LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ವಿಜಯ್ ಪ್ರಕಾಶ್ ಕಂಠಸಿರಿಯಲ್ಲಿ "ಭಗೀರಥ"ನ ಹಾಡು

ಸಾಯಿ ರಮೇಶ್  ಪ್ರೊಡಕ್ಷನ್ ಲಾಂಛನದಲ್ಲಿ ಕೆ.ರಮೇಶ್, ಬಿ.ಭೈರಪ್ಪ ಮೈಸೂರು, ಚೇತನ್ ಎಸ್ ರಮೇಶ್ ನಿರ್ಮಿಸಿರುವ ಹಾಗೂ ರಾಮ್ ಜನಾರ್ದನ್ ನಿರ್ದೇಶನದ "ಭಗೀರಥ" ಚಿತ್ರದ ಚಿತ್ರಕ್ಕಾಗಿ ಮನೋಹರ್ ಎಸ್ ದೊಡ್ಡಮನಿ ಅವರು ಬರೆದಿರುವ "ಕಣ್ಣನೋಟಕ್ಕೆ ಕಣ್ಣಾಗಿ ಬಂದಳು"ಎಂಬ ಯುಗಳಗೀತೆಯನ್ನು ತಮ್ಮ ಗಾಯನದ ಮೂಲಕ ಜನಪ್ರಿಯ ಗಾಯಕ ವಿಜಯ್ ಪ್ರಕಾಶ್ ಹಾಡಿದ್ದಾರೆ. ಪ್ರದೀಪ್ ಎಸ್ ವರ್ಮ ಸಂಗೀತ ನೀಡಿದ್ದಾರೆ.

ಸದ್ಯದಲ್ಲೇ ಈ ಹಾಡು ಬಿಡುಗಡೆಯಾಗಲಿದೆ." ಭಗೀರಥ" ಚಿತ್ರದ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಮೈಸೂರು, ಮಡಿಕೇರಿ, ಸಕಲೇಶಪುರ, ಮಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆದಿದೆ. ಟೀಸರ್ ಮೂಲಕ ಈಗಾಗಲೇ ಜನರ ಮನಸ್ಸಿಗೆ ಹತ್ತಿರವಾಗಿರುವ ನಮ್ಮ ಚಿತ್ರದ ಹಾಡುಗಳು ಹಾಗೂ ಟ್ರೇಲರ್ ಸದ್ಯದಲ್ಲೇ ಬಿಡುಗಡೆಯಾಗಲಿದೆ.

ನವೆಂಬರ್ ನಲ್ಲಿ ಚಿತ್ರವನ್ನು ತೆರೆಗೆ ತರಲಾಗುವುದು ಎಂದು ನಿರ್ದೇಶಕ ರಾಮ್ ಜನಾರ್ದನ್ ತಿಳಿಸಿದ್ದಾರೆ.ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ನಾಲ್ಕು ಸಾಹಸ ಸನ್ನಿವೇಶಗಳಿದೆ ಥ್ರಿಲ್ಲರ್ ಮಂಜು ಸಾಹಸ ಸಂಯೋಜನೆ ಮಾಡಿದ್ದಾರೆ. ಅಕುಲ್ ನೃತ್ಯ ನಿರ್ದೇಶನ, ಸೂರಿ ಚಿತ್ತೂರು ಛಾಯಾಗ್ರಹಣ, ರವಿಚಂದ್ರನ್ ಸಂಕಲನ ಹಾಗೂ ಮೋಹನ್ ರಾಸು ಅವರ ಸಹ ನಿರ್ದೇಶನ "ಭಗೀರಥ" ಚಿತ್ರಕ್ಕಿದೆ.

ಜಯಪ್ರಕಾಶ್, ಚಂದನ ರಾಘವೇಂದ್ರ, ಧೀನಾ ಉಪಡ, ರೂಪ, ನಿಸರ್ಗ ಅಣ್ಣಪ್ಪ, ಶಶಿಧರ್, ಸುಧಾ ಬೆಳವಾಡಿ, ಶಿವರಾಜ್ ಕೆ.ಆರ್ ಪೇಟೆ, ರವಿಕಾಳೆ, ಬಾಲ ರಾಜವಾಡಿ, ನಯನ, ಸುರಭಿ ರವಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು