LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ವಿಜ್ಞಾನದೆಡೆಗೆ ನಮ್ಮ ನಡಿಗೆ ಜ.28ರಂದು ದೊಡ್ಡಬಳ್ಳಾಪುರಕ್ಕೆ ಆಗಮನ

ದೊಡ್ಡಬಳ್ಳಾಪುರ: ವೈಜ್ಞಾನಿಕ ಚಿಂತಕ, ಶಿಕ್ಷಣತಜ್ಞ ಡಾ.ಎಚ್.ನರಸಿಂಹಯ್ಯ ಅವರ ಜನ್ಮಶತಮಾನೋತ್ಸವದ ಅಂಗವಾಗಿ ಕರ್ನಾಟಕಜ್ಞಾನ ವಿಜ್ಞಾನ ಸಮಿತಿ (ಕೆಜೆವಿಎಸ್)ನೇತೃತ್ವದಲ್ಲಿ ವೈಜ್ಞಾನಿಕ ಚಿಂತನೆಗಾಗಿ ಬೆಂಗಳೂರಿನಿಂದ ಅವರ ಹುಟ್ಟೂರಾದ ಗೌರಿಬಿದನೂರು ತಾಲೂಕಿನ ಹೊಸೂರಿಗೆ ವಿಜ್ಞಾನ ನಮ್ಮ ನಡಿಗೆ ಕಾರ್ಯಕ್ರಮ ಜ.27ರಿಂದ ಆರಂಭವಾಗಲಿದ್ದು, ಜ.28ರಂದು ದೊಡ್ಡಬಳ್ಳಾಪುರ ತಲುಪಲಿದೆ. ವೈಜ್ಞಾನಿಕ ಜಾಗೃತಿಯ ಈ ಕಾರ್ಯಕ್ರಮದಲ್ಲಿ ಆಸಕ್ತು ಭಾಗವಹಿಸಿ ವಿಜ್ಞಾನದ ವಿಚಾರಗಳನ್ನು ಪ್ರಚುರಪಡಿಸಲು ಕೈಜೋಡಿಸಬೇಕಿದೆ ಎಂದು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಕಾರ್ಯದರ್ಶಿ ಈ.ಬಸವರಾಜು ತಿಳಿಸಿದ್ದಾರೆ.

ಈ ಕುರಿತು ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟಗಾರ, ಗಾಂಧೀ ವಾದಿ, ವೈಜ್ಞಾನಿಕ ಚಿಂತಕ, ಶಿಕ್ಷಣತಜ್ಞ, ಸರಳತೆಗೆ ಹೆಸರಾಗಿದ್ದ ಡಾ ಹೆಚ್. ನರಸಿಂಹಯ್ಯ ಅವರು ತಮ್ಮ ಸ್ವಂತ ಪರಿಶ್ರಮದಿಂದ ಬೆಂಗಳೂರಿನ ನ್ಯಾಷನಲ್ ಕಾಲೇಜಿನ ಪ್ರಾಂಶುಪಾಲರಾಗಿ, ನ್ಯಾಷನಲ್ ವಿದ್ಯಾಸಂಸ್ಥೆಯ ಅಧ್ಯಕ್ಷರಾಗಿ, ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳಾಗಿ, ವಿಧಾನ ಪರಿಷತ್ ಸದಸ್ಯರಾಗಿ, ಕನ್ನಡ ಅಭಿವೃದ್ಧಿ ಪ್ರಾಕಾರದ ಅಧ್ಯಕ್ಷರಾಗಿ ದಕ್ಷತೆಯಿಂದ ನಿಸ್ವಾರ್ಥ ಸೇವೆ ಮಾಡಿದ್ದಾರೆ ಸದಾ ವೈಜ್ಞಾನಿಕ ಚಿಂತನೆ ರೂಢಿಸಿಕೊಂಡಿದ್ದ ಅವರ ಆಶಯಗಳನ್ನು ಸಾಕಾರಗೊಳಿಸಲು ಇಂದಿನ ಪೀಳಿಗೆಗೆ ಡಾ.ಹೆಚ್ ನರಸಿಂಹಯ್ಯನವರ ಚಿಂತನೆ, ಆದರ್ಶ, ವೈಜ್ಞಾನಿಕ ಮನೋಭಾವ, ಸರಳತೆ ಬಹಳ ಮುಖ್ಯವಾಗಿ ಪ್ರಶ್ನಿಸುವ ಮನೋಭಾವ ಇವುಗಳನ್ನು ಇಂದಿನ ಜನಮಾನಸಕ್ಕೆ ಪರಿಚಯಿಸುವ ಅಗತ್ಯವಿದೆ.

2020ಕ್ಕೆ ಡಾ. ಎಚ್.ನರಸಿಂಹಯ್ಯ ಅವರು ಜನಿಸಿ ಒಂದು ಶತಮಾನವಾದ ಹಿನ್ನೆಲೆಯಲ್ಲಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಸಮಿತಿ ಅನೇಕ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ವಿಶೇಷವಾಗಿ ಅವರ ಭಾವಚಿತ್ರದ ಸಾವಿರಾರು ಪ್ರತಿ ಮಾಡಿಸಿ ಮನೆ ಮನೆಗಳಿಗೆ, ಶಾಲೆ ಕಾಲೇಜುಗಳಿಗೆ ತಲುಪಿಸಿ ಡಾ. ಹೆಚ್ ನರಸಿಂಹಯ್ಯ ಅವರ ಚಿಂತನೆಗಳನ್ನು ಹರಡುವ ಪ್ರಯತ್ನ ಮಾಡಲಾಗಿದೆ. ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಸಹ ಹಲವಾರು ವೈಜ್ಞಾನಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

ವಿಜ್ಞಾನದೆಡೆಗೆ ನಮ್ಮ ನಡಿಗೆ :
ಡಾ.ಎಚ್.ನರಸಿಂಹಯ್ಯ ಅವರ ಜನ್ಮಶತಮಾನೋತ್ಸವದ ಅಂಗವಾಗಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ನೇತೃತ್ವದಲ್ಲಿ ವೈಜ್ಞಾನಿಕ ಚಿಂತನೆಗಾಗಿ ಬೆಂಗಳೂರಿನಿಂದ ಅವರ ಹುಟ್ಟೂರಾದ ಗೌರಿಬಿದನೂರು ತಾಲೂಕಿನ ಹೊಸೂರಿಗೆ ವಿಜ್ಞಾನದೆಡೆಗೆ ನಮ್ಮ ನಡಿಗೆ ಕಾರ್ಯಕ್ರಮ ಬೆಂಗಳೂರಿನ ಬಸವನಗುಡಿ, ನ್ಯಾಷನಲ್ ಕಾಲೇಜಿನಲ್ಲಿ ಜ.27ರಂದು ಆರಂಭವಾಗಲಿದ್ದು, ಜ.28ರಂದು ರಾಜಾನುಕುಂಟೆ, ಮಾರಸಂದ್ರ, ಬಾಶೆಟ್ಟಿಹಳ್ಳಿ ಮೂಲಕ ದೊಡ್ಡಬಳ್ಳಾಪುರಕ್ಕೆ ಆಗಮಿಸಲಿದ್ದು ರಾತ್ರಿ ತಂಗಲಿದೆ. ನಂತರ ಗೌರಿಬಿದನೂರು ಮಾರ್ಗವಾಗಿ ಹೊಸೂರು ತಲುಪಿ ಹೊಸೂರಿನಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ.

ಸಮಾರೋಪ ಸಮಾರಂಭ ಮುಗಿಸಿಕೊಂಡು ಡಾ. ಹೆಚ್.ನರಸಿಂಹಯ್ಯ ಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ವಿದುರಾಶ್ವತ್ಥದ ವೀರಸೌಧಕ್ಕೆ ಭೇಟಿ ನೀಡಬಹುದು. ಪಾದಯಾತ್ರೆಯ ಮಾರ್ಗದುದ್ದಕ್ಕೂ ವೈಜ್ಞಾನಿಕ ಚಿಂತನೆಗೆ ಸಂಬಂಸಿದ ಬೀದಿ ನಾಟಕ ಪ್ರದರ್ಶನ, ಪವಾಡ ರಹಸ್ಯ ಬಯಲು, ಚರ್ಚೆ, ಸಂವಾದ, ಕಡಿಮೆ ಬೆಲೆಯ ಪುಸ್ತಕಗಳ ಮಾರಾಟ, ಮಾರ್ಗದುದ್ದಕ್ಕೂ ಯಾತ್ರೆಯ ನೆನಪಿಗಾಗಿ 100 ಸಸಿಗಳನ್ನು ನೆಡುವುದು ಮುಂತಾದ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಈ ಪಾದಯಾತ್ರೆಯಲ್ಲಿ ಆಸಕ್ತರು ಐದೂ ದಿನ ಅಥವಾ ತಮಗೆ ಅನುಕೂಲವಾದ ದಿನ ಭಾಗವಹಿಸಬಹುದಾಗಿದೆ ಎಂದು ಮನವಿ ಮಾಡಿದರು.ಈ ವೇಳೆ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಬೆಂಗಳೂರು ನಗರ ಜಿಲ್ಲಾ ಕಾರ್ಯದರ್ಶಿ ಎಂ.ಲಕ್ಷ್ಮಿನರಸಿಂಹ, ಗೋವಿಂದರಾಜ ನಗರ ಕ್ಷೇತ್ರದ ಅಧ್ಯಕ್ಷ ಬಾಲಾಜಿರಾವ್, ಬೆಂ.ಗ್ರಾ. ಜಿಲ್ಲಾ ಘಟಕದ ಅಧ್ಯಕ್ಷ ತೂಬಗೆರೆ ಷರೀಫ್ ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು