LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ವಿದರ್ಭದ ವಿರುದ್ಧ ನಡೆಯದ ಕೇರಳ ಟ್ರಿಕ್ಸ್: ಕುತೂಹಲದ ಘಟ್ಟದಲ್ಲಿ ರಣಜಿ ಟ್ರೋಫಿ ಫೈನಲ್

ಬೌಲರ್‍ಗಳ ಸಂಘಟನಾತ್ಮಕ ಪ್ರದರ್ಶನದ ನೆರವಿನಿಂದ ವಿದರ್ಭ ತಂಡ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಕೇರಳ ತಂಡದ ವಿರುದ್ಧ 37 ರನ್ ಗಳ ಪ್ರಥಮ ಇನ್ನಿಂಗ್ಸ್ ಇನಿಂಗ್ಸ್ ಮುನ್ನಡೆ ಸಾಧಿಸಿದೆ. ಹೀಗಾಗಿ ಶತಾಯಗತಾಯ ಪ್ರಥಮ ಇನ್ನಿಂಗ್ಸ್ ಮುನ್ನಡೆ ಸಾಧಿಸಬೇಕು ಎಂದಿದ್ದ ಕೇರಳ ತಂಡದ ಪ್ರಯತ್ನ ಸಂಪೂರ್ಣ ವಿಫಲವಾಗಿದೆ.

ವಿದರ್ಭ ಕ್ರಿಕೆಟ್ ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದ 3ನೇ ದಿನವಾದ ಶುಕ್ರವಾರ 3 ವಿಕೆಟ್‍ಗೆ 131 ರನ್‍ಗಳಿಂದ ಮೊದಲ ಇನಿಂಗ್ಸ್ ಮುಂದುವರಿಸಿದ ಕೇರಳ, ದಿನದಾಟದ ಮುಕ್ತಾಯಕ್ಕೆ 125 ಓವರ್‍ಗಳಲ್ಲಿ 342 ರನ್‍ಗಳಿಗೆ ಆಲೌಟಾಗಿ 37 ರನ್‍ಗಳ ಹಿನ್ನಡೆ ಅನುಭವಿಸಿತು. ಕ್ವಾರ್ಟರ್‍ಫೈನಲ್ ಮತ್ತು ಸೆಮಿಫೈನಲ್ ಪಂದ್ಯಗಳಲ್ಲಿ ಅಲ್ಪ ಮುನ್ನಡೆಯೊಂದಿಗೆ ಮೊದಲ ಸಲ ಫೈನಲ್ ಪ್ರವೇಶಿಸಿದ್ದ ಕೇರಳ ನಿರ್ಣಾಯಕ ಪಂದ್ಯದಲ್ಲಿ ಇನಿಂಗ್ಸ್ ಮುನ್ನಡೆ ಪಡೆಯಲು ವಿಫಲಗೊಂಡಿದೆ.

ಪ್ರಸ್ತುತ 37 ರನ್‍ಗಳ ಮುನ್ನಡೆ ಹೊಂದಿರುವ ವಿದರ್ಭ, ಪಂದ್ಯದ ನಾಲ್ಕನೇ ದಿನವಾದ ಶನಿವಾರ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರೆ, ಕೇರಳ ತಂಡಕ್ಕೆ ಕಠಿಣ ಸವಾಲು ನೀಡಬಹುದು. ಮತ್ತೊಂದೆಡೆ ಕೇರಳ ಬೌಲರ್‍ಗಳು ಕರಾರುವಾಕ್ ಬೌಲಿಂಗ್ ಸಂಘಟಿಸಿದ್ದಲ್ಲಿ ಎದುರಾಳಿ ತಂಡವನ್ನು ಸಣ್ಣ ಮೊತ್ತಕ್ಕೆ ನಿಯಂತ್ರಿಸಿ ಗುರಿ ಭೇದಿಸಿ ಚೊಚ್ಚಲ ಪ್ರಶಸ್ತಿ ಗೆಲ್ಲುವ ಅವಕಾಶವನ್ನು ತನ್ನದಾಗಿಸಿಕೊಳ್ಳಬಹುದು. ಹೀಗಾಗಿ ಶನಿವಾರದ ಆಟವು ಉಭಯ ತಂಡಗಳಿಗೆ ಅತ್ಯಂತ ನಿರ್ಣಾಯಕವಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು