LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ವಿದ್ಯಾರ್ಥಿಗಳು ಅಭ್ಯಾಸದೊಂದಿಗೆ ಶ್ರದ್ಧೆ ರೂಡಿಸಿಕೊಳ್ಳುವುದು ಅತ್ಯವಶ್ಯ ಪ್ರೊ: ಡೋರೇನ್ ಸ್ನೇಹಲತಾ ಕೋಟ್ಯಾನ್

ಹೊಸಕೋಟೆ: ವಿದ್ಯಾರ್ಥಿಗಳು ಪಠ್ಯಾಭ್ಯಾಸಕ್ಕೆ ನೀಡುವಷ್ಟೆ ಪ್ರಾಮುಖ್ಯತೆಯನ್ನು ಪಠ್ಯೇತರ ಚಟುವಟಿಕೆಗಳಾದ ಕ್ರೀಡಾ, ಸಾಂಸ್ಕøತಿಕ ಮತ್ತು ಇನ್ನಿತರೆ ಕಾರ್ಯಕ್ರಮಗಳಿಗೆ ನೀಡಿದಲ್ಲಿ ಮಾತ್ರ ಶಿಕ್ಷಣ ಪರಿಪೂರ್ಣಗೊಳ್ಳಲಿದೆ. ಇದರಿಂದ ಮಾನಸಿಕ ಮತ್ತು ದೈಹಿಕ ಸಮತೋಲನ ಕಾಪಾಡಿಕೊಂಡು ಏಕಾಗ್ರತೆಯಿಂದ ಕಲಿಕೆಯಲ್ಲಿ ತೊಡಗಲು ಸಹಕಾರಿಯಾಗಲಿದೆ ಎಂದು ಪ್ರಿನ್ಸಿಪಾಲ್ ಪ್ರೊ: ಡೋರೇನ್ ಸ್ನೇಹಲತಾ ಕೋಟ್ಯಾನ್ ಹೇಳಿದರು.

ಅವರು ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2023-24ನೇ ಸಾಲಿನ ಕ್ರೀಡಾ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಸಮಾರಂಭದಲ್ಲಿ ಮಾತನಾಡಿದರು.ಕೇವಲ ಪರೀಕ್ಷೆಗಳಲ್ಲಿ ಅಂಕ ಗಳಿಸಲಷ್ಟೇ ಶಿಕ್ಷಣವನ್ನು ಸೀಮಿತಗೊಳಿಸದೆ ಶ್ರದ್ಧೆ ಹಾಗೂ ಉತ್ತಮ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕಾದ್ದು ಸಹ ಅತ್ಯವಶ್ಯವಾಗಿದ್ದು ಇದರಿಂದ ಮಾತ್ರ ಶಿಕ್ಷಣ ಸಾರ್ಥಕಗೊಳ್ಳಲಿದೆ.

ಪ್ರತಿ ಚಟುವಟಿಕೆ, ಅಭ್ಯಾಸವನ್ನು ಶ್ರದ್ಧೆ, ಭಕ್ತಿಯಿಂದ ನೆರವೇರಿಸಿದಾಗ ಗುರಿ ಸಾಧಿಸಬಹು ದಾಗಿದೆ. ಇದರಿಂದ ವಿದ್ಯಾರ್ಥಿಗಳು ತಮ್ಮ ದೈನಂದಿನ ಜೀವನದಲ್ಲಿ ಉತ್ತಮ ಕೌಶಲ್ಯವನ್ನು ಪಡೆದುಕೊಳ್ಳಲು ಸಹಕಾರಿಯಾಗಲಿದೆ ಎಂದರು.ಇದೇ ಸಂದರ್ಭದಲ್ಲಿ 16ನೇ ದಕ್ಷಿಣ ಭಾರತ ಮಟ್ಟದ ಥ್ರೋಬಾಲ್ ಚಾಂಪಿ
ಯನ್‍ಶಿಪ್‍ನಲ್ಲಿ ಪ್ರಥಮ ಸ್ಥಾನ ಗಳಿಸಿದ ಅಂತಿಮ ವರ್ಷದ ವಿಜ್ಞಾನ ವಿಭಾಗದ ವಿದ್ಯಾರ್ಥಿ ಆರ್. ಕಲ್ಪನಾ ಚಾವ್ಲಾರನ್ನು ಸನ್ಮಾನಿಸಿ ಗೌರವಿಸಲಾಯಿತು.
ಸಂಯೋಜಕರಾದ ಡಾ: ಅಶ್ವಥನಾರಾಯಣ್, ಭೌತಶಾಸ್ತ್ರ ವಿಭಾಗದ ಪ್ರೊ: ಕಲಾವತಿ, ಡಾ: ಅರ್ಜುನ್‍ಗೌಡ, ಎಸ್.ಶ್ರೀನಿವಾಸಚಾರ್, ಸುನಿಲ್ ಕುಮಾರ್, ಡಾ: ಚಲುವರಾಜು, ಡಾ: ವಿಶ್ವೇಶ್ವರಯ್ಯ, ಡಾ: ಕವಲಯ್ಯ ಇನ್ನಿತರರು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು