LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ವಿದ್ಯಾರ್ಥಿಗಳು ಉತ್ತಮ ಸಮಾಜ ಕಟ್ಟಲು ಗುರುವಿನ ಪಾತ್ರ ಬಹಳ ಮುಖ್ಯ ಗುರುವಂದನಾ ಕಾರ್ಯಕ್ರಮದಲ್ಲಿ ಬಸವಣ್ಣ ದೇವರ ಮಠದ ಶ್ರೀಗಳಾದ ಸಿದ್ದಲಿಂಗ ಸ್ವಾಮೀಜಿ ಹೇಳಿಕೆ

ನೆಲಮಂಗಲ: ಗುರುವಿನ ಮಾರ್ಗದರ್ಶನವಿಲ್ಲದೆ ಯಾವೊಬ್ಬ ವಿದ್ಯಾರ್ಥಿಯು ಉತ್ತಮ ಸಮಾಜ ಕಟ್ಟಲು ಸಾಧ್ಯವಿಲ್ಲ ಹಾಗಾಗಿ ಗುರುವಿನ ಪಾತ್ರ ಬಹಳ ದೊಡ್ಡದು ಎಂದು ಪವಾಡ ಶ್ರೀ ಬಸವಣ್ಣ ದೇವರ ಮಠದ ಶ್ರೀಗಳಾದ ಸಿದ್ದಲಿಂಗ ಸ್ವಾಮೀಜಿಯವರು ತಿಳಿಸಿದರು.

ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಹೋಬಳಿಯ ಹುಸ್ಕೂರು ಗ್ರಾಮದಲ್ಲಿರುವ ಶ್ರೀ ಬಸವ ಪ್ರೌಢಶಾಲೆಯಲ್ಲಿ 1998-99ನೇ ಸಾಲಿನ ವಿದ್ಯಾರ್ಥಿಗಳು ಆಯೋಜಿಸಿದ ಗುರುವಂದನಾ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸಿದ್ದಲಿಂಗ ಶ್ರೀಗಳು ಮಾತನಾಡಿದರು
ಹಲವಾರು ಗುರುವಂದನ ಕಾರ್ಯಕ್ರಮಗಳಿಗೆ ಭಾಗವಹಿಸಿದ್ದೇನೆ ಆದರೆ ಹುಸ್ಕೂರಿನ ಶ್ರೀ ಬಸವ ಪ್ರೌಢಶಾಲೆಯ 1998-99 ನೇ ಸಾಲಿನ ವಿದ್ಯಾರ್ಥಿಗಳು 25 ವರ್ಷಗಳ ಬಳಿಕ ಗುರುವಂದನ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ಆರೋಗ್ಯ ತಪಾಸಣಾ ಹಾಗೂ ರಕ್ತದಾನ,ನೇತ್ರದಾನ, ನೇತ್ರ ಚಿಕಿತ್ಸೆ ಆಯೋಜಿಸಿ ಸಾರ್ವಜನಿಕರಿಗೆ ಸಹಾಯಕವಾಗುವುದರ ಜೊತೆಗೆ ವಿದ್ಯೆ ಕಲಿಸಿ ಜ್ಞಾನ ನೀಡಿದ ಗುರುಗಳಿಗೆ ಗುರುವಂದಿಸಿದ್ದಾರೆ.

ಹಾಗಾಗಿ ಎಲ್ಲಾ ಧರ್ಮಗಳಿಗಿಂತ ಶ್ರೇಷ್ಠ ಧರ್ಮ ಹಿಂದೂ ಧರ್ಮ ಬೇರೆ ಯಾವುದೇ ಧರ್ಮದಲ್ಲೂ ಗುರುವಂದನಾ ಕಾರ್ಯಕ್ರಮ ಮಾಡುವುದಿಲ್ಲ
ಆದರೆ ಹಿಂದೂ ಧರ್ಮದಲ್ಲಿ ಆಚರಣೆ ಮಾಡುತ್ತೇವೆ ಗುರುಗಳನ್ನ ಸ್ಮರಿಸುತ್ತೇವೆ ಎಂದು ತಿಳಿಸಿದ ಶ್ರೀಗಳು ಹಳೆಯ ವಿದ್ಯಾರ್ಥಿಗಳು ಗುರುಗಳಿಗೆ ಕಾಣಿಕೆಯಾಗಿ ನೀಡಿದ ಗುರುಗಳ ಭಾವಚಿತ್ರವನ್ನು ನೆತ್ತರಲ್ಲಿ ನಿರ್ಮಿಸಿರುವುದನ್ನು ಕಂಡು ಆಶ್ಚರ್ಯಗೊಂಡರು ಜೊತೆಗೆ ಇಂತಹ ಸಾಹಸಕ್ಕೆ ಕೈ ಹಾಕಬೇಡಿ ಎಂಬ ಕಿವಿ ಮಾತನ್ನು ಹೇಳಿದರು.

1998 - 99 ನೇ ಸಾಲಿನ ವಿದ್ಯಾರ್ಥಿ ಮುನಿರಾಜು ಬಿ ಸಿ ಮಾತನಾಡಿ ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ ಎಂಬ ನಾಳ್ನುಡಿಯಂತೆ ಗುರುಗಳು ನೀಡಿದ ವಿದ್ಯೆಯಿಂದ, ಅವರು ತಿಳಿಸಿಕೊಟ್ಟ ಉತ್ತಮ ಜ್ಞಾನದಿಂದ ನಮ್ಮ ಸಾಲಿನ ವಿದ್ಯಾರ್ಥಿಗಳು ಶಿಕ್ಷಕರು ಸೇರಿದಂತೆ ವಿವಿಧ ರಂಗಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಜೊತೆಗೆ ಸಮಾಜಕ್ಕೆ ಮಾದರಿ ಕೂಡ ಆಗಿದ್ದಾರೆ ನಾನು ಕೂಡ ಮೆಡಿಕಲ್ಸ್ ನಡೆಸುತ್ತಿದ್ದು ಒಂದೊಳ್ಳೆ ಜೀವನ ನಡೆಸಲು ಕಾರಣರಾದ ಗುರುಗಳಿಗೆ ಗುರುವಂದನೆ ಸಲ್ಲಿಸಬೇಕೆಂಬ ದೃಷ್ಟಿಯಿಂದ ನಾವೆಲ್ಲ ಹಳೆಯ ವಿದ್ಯಾರ್ಥಿಗಳು ಸೇರಿ ಈ ಗುರು ವಂದನಾ ಕಾರ್ಯಕ್ರಮದ ಜೊತೆಗೆ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಿದ್ದೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಿಕ್ಷಕರುಗಳು ಮಾತನಾಡಿ ವಿದ್ಯಾರ್ಥಿಗಳೆಲ್ಲ ಸೇರಿ ಗುರುವಂದನಾ ಕಾರ್ಯಕ್ರಮದ ಜೊತೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ, ರಕ್ತದಾನ ಶಿಬಿರ, ನೇತ್ರದಾನ ಶಿಬಿರ ಜೊತೆಗೆ ನೇತ್ರ ತಪಾಸಣಾ ಶಿಬಿರಗಳ ಮೂಲಕ ಉತ್ತಮ ಸಮಾಜದ ನಿರ್ಮಾಣಕ್ಕೆ ಪ್ರೇರಣೆಯಾಗಿರುವುದು ನಮ್ಮ ವಿದ್ಯಾರ್ಥಿಗಳು ಸಮಾಜಕ್ಕೆ ನೀಡಿದ ಅತಿ ದೊಡ್ಡ ಕೊಡುಗೆ ಎಂದರೆ ತಪ್ಪಾಗಲಾರದು ಎಂದು ಸಂತಸ ವ್ಯಕ್ತಪಡಿಸಿದರು.

ಗುರುವಂದನ ಕಾರ್ಯಕ್ರಮದಲ್ಲಿ ಶಾಲಾ ಜಾಗದ ದಾನಿಗಳಾದ ಪರಮಶಿವಯ್ಯ, ಮುಖ್ಯ ಶಿಕ್ಷಕರಾದ ಶಶಿಧರ ಸಿ ಎಂ, ಹಿಂದಿನ ಮುಖ್ಯ ಶಿಕ್ಷಕರಾಗಿದ್ದ ರವಿಶಂಕರ್, ಶಿಕ್ಷಕಿ ಅಕ್ಕಮಹಾದೇವಿ, ರುದ್ರಸ್ವಾಮಿ, ಚನ್ನಬಸವಣ್ಣ, ಮಂಜುನಾಥ ಆರಾಧ್ಯ, ಹಳೆಯ ವಿದ್ಯಾರ್ಥಿಗಳಾದ ಸಿದ್ಧಲಿಂಗ ಪ್ರಸಾದ್, ಹನುಮಂತರಾಜು, ಬಿಸಿ ಮುನಿರಾಜು, ರಘು, ಶ್ರೀನಾಥ್, ಎಚ್ ಮುನಿರಾಜು, ರುದ್ರೇಶ್, ಆಶಾ, ಹೇಮಲತಾ, ಸುಜಾತ, ಲಲಿತಾ, ರೇಣುಕಾ, ಮುನಿರತ್ನ, ಸೇರಿದಂತೆ ಇನ್ನಿತರ ವಿದ್ಯಾರ್ಥಿಗಳು ಗುರುವಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು