LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ವಿದ್ಯಾರ್ಥಿಗಳು ಹಿಂಜರಿಕೆಯ ಮನೋಭಾವ ಬಿಟ್ಟು ತಮ್ಮ ಸಾಮರ್ಥ್ಯ ಪ್ರದರ್ಶಿಸುವ ಧೈರ್ಯ ತೋರಬೇಕು: ವಿ.ಎಸ್.ಹೆಗಡೆ

ದೊಡ್ಡಬಳ್ಳಾಪುರ: ಸಾಹಿತ್ಯ, ಸಂಗೀತ ಮುಂತಾದ ಲಲಿತಕಲೆಗಳಿಂದ ಮುನುಷ್ಯನ ಬದುಕು ಸುಸಂಸ್ಕೃತವು ಮತ್ತು ಸಮೃದ್ಧವು ಆಗುತ್ತದೆ ಎಂದು ಜವಾಹರ್ ನವೋದಯ ವಿದ್ಯಾಲಯದ ನಿವೃತ್ತ ಅಧ್ಯಾಪಕ ವಿ.ಎಸ್.ಹೆಗಡೆ ತಿಳಿಸಿದರು.

ಅವರು ದೊಡ್ಡಬಳ್ಳಾಪುರ ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸಹಯೋಗದಲ್ಲಿ ಜಾನಪದ ಗೀತಾ ಗಾಯನದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿನಿಯರುಗಳಾದ ಎಂ.ಕವಿತಾ, ಟಿ.ಸಿ.ಹರ್ಷಿತಾ, ಕೆ.ಯು.ಹರ್ಷಿತಾ, ಬಿ.ಎಂ.ವರ್ಷಿಣಿ, ವಿ.ನಾಗವೇಣಿ, ಎನ್.ಕಾವ್ಯಶ್ರೀ ಅವರನ್ನು ಅಭಿನಂದಿಸಿ ಮಾತನಾಡಿದರು.

ಪ್ರತಿ ವಿದ್ಯಾರ್ಥಿಯಲ್ಲೂ ಒಂದಲ್ಲ ಒಂದು ಪ್ರತಿಭೆ ಇದ್ದೆ ಇರುತ್ತದೆ. ವಿದ್ಯಾರ್ಥಿಗಳು ಹಿಂಜರಿಕೆಯ ಮನೋಭಾವ ಬಿಟ್ಟು ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸುವ ಧೈರ್ಯ ತೋರಬೇಕು. ಪ್ರತಿಭೆಯು ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ವಿಕಸನಗೊಳಿಸುತ್ತದೆ ಎಂದರು.ಬೆಂಗಳೂರು ಗ್ರಾಮಾಂತರ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ ಸಹಾಯಕ ಆಯುಕ್ತ ವೆಂಕಟರಾಜು ಮಾತನಾಡಿ, ಮಂಡ್ಯದಲ್ಲಿ ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಅಯ್ಕೆಯಾಗಿರುವ ಗೊ.ರು.ಚನ್ನಬಸಪ್ಪ ಅವರು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಪ್ರಧಾನ ಆಯುಕ್ತರಾಗಿ ಆಗಿ ಮಹತ್ವದ ಸೇವೆ ಸಲ್ಲಿಸಿದವರು.

ಗೊ.ರು.ಚನ್ನಬಸಪ್ಪ ಅವರು ಭಾರತ್ ಸ್ಕೌಟ್ಸ್ ಮತ್ತು ಗೈಡ್ ವಿದ್ಯಾರ್ಥಿಗಳಿಗೆ ಹಲವಾರು ನೃತ್ಯ ಗೀತೆಗಳನ್ನು ರಚಿಸಿದ್ದಾರೆ. ಜಾನಪದ ವಿದ್ವಾಂಸರಾಗಿ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ, ವಿವಿಧ ಸಂಘ ಸಂಸ್ಥೆಗಳಲ್ಲಿ ಗಣನೀಯ ಸೇವೆಯನ್ನು ಗೊ.ರು.ಚನ್ನಬಸಪ್ಪ ಸಲ್ಲಿಸಿದ್ದಾರೆ ಎಂದರು.ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಎ.ಜಯರಾಮ ಮಾತನಾಡಿ, ಜಾನಪದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಇಂದಿನ ಯುವಕರ ಮೇಲಿದೆ.

ಜಾನಪದ ಸಾಹಿತ್ಯದಲ್ಲಿ ಬದುಕಿನ ಅನುಭವ ಮತ್ತು ಮಾನವೀಯ ಮೌಲ್ಯಗಳನ್ನು ಕಾಣಬಹುದಾಗಿದೆ. ಜಾನಪದ ಎಂಬುದು ಸಾಂಸ್ಕೃತಿಕ ಮತ್ತು ಸಾಮಾಜಿಕ ವ್ಯವಸ್ಥೆಯ ಮೂಲವೇ ಆಗಿದೆ ಎಂದರು.ಕಾರ್ಯಕ್ರಮದಲ್ಲಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರುಗಳಾದ ಪ್ರೊ.ನಂಜಪ್ಪ, ಪ್ರೊ.ಸುಷ್ಮಾ, ಪ್ರೊ.ಭಾರತಿ, ಪ್ರೊ.ದಿವ್ಯಶ್ರೀ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು