LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Haveri

`ವಿಧಾನಸೌಧಕ್ಕೆ ಬೀಗ ಹಾಕಿ, ಹಣದೊಂದಿಗೆ `ಕೈ' ಪ್ರಚಾರ'

ಹಾವೇರಿ (ಶಿಗ್ಗಾವಿ): ರಾಜ್ಯ ಸರ್ಕಾರ ಹದಿನೈದು ದಿನದಿಂದ ವಿಧಾನಸೌಧಕ್ಕೆ ಕೀಲಿ ಹಾಕಿ ಹಣದ ಚೀಲ ತೆಗೆದುಕೊಂಡು ಬಂದು ಚುನಾವಣೆ ಮಾಡಿದ್ದಾರೆ ಅವರಿಗೆ ಜನರು ಪಾಠ ಕಲಿಸುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಅವರು ಇಂದು ಶಿಗ್ಗಾವಿ ಸವಣೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಅವರೊಂದಿಗೆ ಶಿಗ್ಗಾವಿ ಪಟ್ಟಣದ ಸರಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆ ನಂ-೧ ನಲ್ಲಿ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು.
ಶಿಗ್ಗಾವಿ ಸವಣೂರು ಕ್ಷೇತ್ರದಲ್ಲಿ ಆರಂಭದಿAದಲೂ ನೂರಕ್ಕು ನೂರು ಸಾಮಾನ್ಯ ಮತದಾರರು ಬಹಿರಂಗ ಬೆಂಬಲ ವ್ಯಕ್ತ ಪಡಿಸಿದ್ದಾರೆ. ದಿನೇ ದಿನೆ ಹೆಚ್ಚಳವಾಗಿದೆ ಇದೆಲ್ಲದರ ಹಿನ್ನೆಲೆಯಲ್ಲಿ ಭರತ್ ಬೊಮ್ಮಾಯಿ ಬಹಳ ಅಂತರದಿAದ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸರ್ಕಾರ ವಿಧಾನಸೌಧಕ್ಕೆ ಕೀಲಿ ಹಾಕಿ ಹಣದ ಚೀಲ ಹಿಡಿದುಕೊಂಡು ಬಂದು ಚುನಾವಣೆ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗಾಳಿಗೆ ತೂರಿ ಸರ್ಕಾರಿ ಕೆಲಸಗಳನ್ನು ನಿಲ್ಲಿಸಿ ಚುನಾವಣೆ ನಡೆಸಿದ್ದಾರೆ. ಅವರು ತಮ್ಮ ರಾಜಕೀಯ ಅಧಪತನವನ್ನು ಈ ರೀತಿ ತೊರಿಸಿದ್ದಾರೆ ಎಂದರು.
ಕಾAಗ್ರೆಸ್ ನವರು ನಮ್ಮ ಮೇಲೆ ಮಾಡಿರುವ ಅರೋಪ ಯಾವುದು ಸತ್ಯವಲ್ಲ. ನವೆಂಬರ್ ೨೩ಕ್ಕೆ ಅದಕ್ಕೆಲ್ಲ ಉತ್ತರ ಸಿಗುತ್ತದೆ ಎಂದರು.
ಕಾAಗ್ರೆಸ್ ಅಭ್ಯರ್ಥಿ ರೌಡಿ ಶೀಟರ್ ಪ್ರಕರಣ ಇನ್ನು ಖುಲಾಸೆಯಾಗಿಲ್ಲ ಎಂದು ಎಸ್ಪಿ ಅವರೇ ಹೇಳಿದ್ದರು. ಅವರೇ ಎರಡು ತಾಸಿನಲ್ಲಿ ಉಲ್ಟಾ ಹೊಡೆದರು. ಗೃಹ ಇಲಾಖೆ ಪೊಲೀಸರನ್ನು ಸಂಪೂರ್ಣ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ನಾವು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ ಎಂದು ಹೇಳಿದರು.
ಈ ಚುನಾವಣೆಯಲ್ಲಿ ಅಲ್ಪ ಸಂಖ್ಯಾತರ ತುಷ್ಟೀಕರಣ ಹೆಚ್ಷಾಗಿದಿಯಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಕಾಂಗ್ರೆಸ್ ಗೆ ಸೋಲಿನ ಭಯದಲ್ಲಿ ತುಷ್ಟೀಕರಣ ನಿರಂತರ ಮಾಡುತ್ತಾ ಬಂದಿದ್ದಾರೆ. ಅವರು ರಾಗದ್ವೇಷ ಇಲ್ಲದೆ ಕೆಲಸ ಮಾಡುವುದಾಗಿ ಪ್ರಮಾಣ ವಚನ ಸ್ವೀಕರಿಸಿದದ್ದರು. ಆದರೆ, ಚುನಾವಣೆ ಗೆಲ್ಲಲು ತುಷ್ಟೀಕರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು