LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ವಿನಯ್ `ಪೆಪೆ' ವಿತರಣೆ ಹಕ್ಕು ಕೆಆರ್‍ಜಿಗೆ

ವಿನಯ್ ರಾಜ್ ಕುಮಾರ್ ನಟನೆಯ ಪೆಪೆ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಚಿತ್ರದ ವಿತರಣೆ ಹಕ್ಕು ಕೆಆರ್ ಜಿ ಸೇರಿರುವ ಬಗ್ಗೆ ಮಾಹಿತಿ ಹೊರಬಿದ್ದಿದೆ.
ಕೆಆರ್‍ಜಿ ಸ್ಟುಡಿಯೋಸ್ ಸಂಸ್ಥೆ 'ಪೆಪೆ' ಸಿನಿಮಾವನ್ನು ರಾಜ್ಯಾದ್ಯಂತ ವಿತರಣೆ ಮಾಡಲಿದೆ.ಕೆಆರ್ ಜಿ ಸಂಸ್ಥೆಯ ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾಜ್ ಚಿತ್ರ ವಿತರಣೆ ಮಾಡುವ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.

ವಿನಯ್ ರಾಜ್‍ಕುಮಾರ್ ಇಲ್ಲಿವರೆಗೂ ಸಾಫ್ಟ್ ಚಿತ್ರಗಳನ್ನೆ ಮಾಡಿದ್ದಾರೆ. ಆದರೆ ಪೆಪೆ ಚಿತ್ರ ವಿಭಿನ್ನವಾಗಿಯೇ ಇವೆ. ಪೆಪೆ ಚಿತ್ರದಲ್ಲಿ ವಿನಯ್ ರಗಡ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಕ್ಲಾಸ್ ಹೀರೋನಿಂದ ಮಾಸ್ ಲುಕ್ ಆಗಿ ಪ್ರೇಕ್ಷಕರ ಎದುರು ಬರುತ್ತಿದ್ದಾರೆ.ಶ್ರೀಲೇಶ್ ಎಸ್ ನಾಯರ್ ಚೊಚ್ಚಲ ನಿರ್ದೇಶನದಲ್ಲಿಯೇ ಭರವಸೆ ಮೂಡಿಸಿದ್ದಾರೆ.

ಮೊದಲ ಹೆಜ್ಜೆಯಲ್ಲಿಯೇ ಒಂದು ರೀತಿ ಪರಿಪೂರ್ಣ ವಿಭಿನ್ನ ಕಥೆ ಹೊತ್ತು ಬರುತ್ತಿದ್ದಾರೆ. ಈ ಚಿತ್ರದಲ್ಲಿ ನಾಯಕಿಯಾಗಿ ಕಾಜಲ್ ಕುಂದರ್ ನಟಿಸಿದ್ದು, ಮಯೂರ್ ಪಟೇಲ್, ಯಶ್ ಶೆಟ್ಟಿ, ಬಲ ರಾಜ್‍ವಾಡಿ, ಮೇದಿನಿ ಕೆಳಮನೆ, ಅರುಣಾ ಬಾಲರಾಜ್, ನವೀನ್ ಡಿ. ಪಡೀಲ್‍ರನ್ನು ಒಳಗೊಂಡ ತಾರಾಬಳಗವಿದೆ. ?ಪೆಪೆ? ಚಿತ್ರಕ್ಕೆ ಅಭಿಷೇಕ್ ಜಿ. ಕಾಸರಗೋಡು ಕ್ಯಾಮೆರಾ ವರ್ಕ್, ಪೂರ್ಣಚಂದ್ರ ತೇಜಸ್ವಿಯವರ ಸಂಗೀತ ನಿರ್ದೇಶನವಿದೆ.

ಡಾ. ರವಿವರ್ಮ, ಚೇತನ್ ಡಿಸೋಜಾ, ಡಿಫ್ರೆಂಟ್ ಡ್ಯಾನಿ, ನರಸಿಂಹ ಅವರ ತಂಡ ಚಿತ್ರದ ಸಾಹಸ ದೃಶ್ಯಗಳನ್ನು ನಿರ್ದೇಶನ ಮಾಡಿದೆ. ಬೆಂಗಳೂರು, ಮೈಸೂರು, ಕೊಡಗು, ಸಕಲೇಶಪುರಗಳಲ್ಲಿ?ಪೆಪೆ? ಸಿನಿಮಾವನ್ನು ಸೆರೆಹಿಡಿಯಲಾಗಿದೆ. ಉದಯ್ ಸಿನಿ ವೆಂಚರ್, ದೀಪ ಫಿಲ್ಮ್ಸ್ ಬ್ಯಾನರ್‍ನಡಿ ಉದಯ್ ಶಂಕರ್.ಎಸ್ ಹಾಗೂ ಕೋಲಾರದ ಬಿ.ಎಮ್.ಶ್ರೀರಾಮ್ ಚಿತ್ರಕ್ಕೆ ಬಂಡವಾಳ ಹೂಡಿದ್ದು ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು