LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ವಿನೋದ್ ಕಾಂಬ್ಳಿಗೆ ಆಜೀವ ಪರ್ಯಂತ ಉಚಿತ ಚಿಕಿತ್ಸೆ

ಮುಂಬಯಿ: ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿಯವರ ಚಿಕಿತ್ಸಾ ವೆಚ್ಚವನ್ನು ಆಜೀವ ಪರ್ಯಂತ ಭರಿಸುವುದಾಗಿ ಆಸ್ಪತ್ರೆ ಘೋಷಿಸಿದೆ. ಮೂತ್ರ ಸೋಂಕು ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ಕಾಂಬ್ಳಿ ಅವರ ಮೆದುಳಿನಲ್ಲಿರಕ್ತ ಹೆಪ್ಪುಗಟ್ಟಿರುವುದಾಗಿಯೂ ಆದರೆ ಅವರ ಆರೋಗ್ಯ ಸ್ಥಿರವಾಗಿರುವುದಾಗಿ ವೈದ್ಯರು ಮಂಗಳವಾರ ತಿಳಿಸಿದ್ದಾರೆ.ಕಾಂಬ್ಳಿ ಮುಂಬಯಿನ ಥಾಣೆಯಲ್ಲಿನ ಆಕೃತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಾಂಬ್ಳಿಯವರಿಗೆ ಉಚಿತ ಚಿಕಿತ್ಸೆ ನೀಡುವ ಆಸ್ಪತ್ರೆಯ ನಿರ್ಧಾರಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಸ್ವತಃ ಕಾಂಬ್ಳಿಯವರೇ ಆಸ್ಪತ್ರೆಯ ಔದಾರ್ಯಕ್ಕೆ ಭಾವುಕಗೊಂಡಿದ್ದಾಗಿ ತಿಳಿದುಬಂದಿದೆ.
ಇನ್ನೂ ಕೆಲ ದಿನ ಐಸಿಯುನಲ್ಲಿ ಸದ್ಯ ಕಾಂಬ್ಳಿ ಆರೋಗ್ಯ ಸ್ಥಿರವಾಗಿದ್ದು. ಹೆಚ್ಚಿನ ಪರೀಕ್ಷೆಗಳನ್ನು ಕೈಗೊಳ್ಳಲಿದ್ದೇವೆ. ಅವರ ಆರೋಗ್ಯದ ಮೇಲೆ ತೀವ್ರ ನಿಗಾ ಇರಿಸಿದ್ದೇವೆ. ಅದಕ್ಕಾಗಿ ಅವರು ಇನ್ನೂ ಕೆಲ ದಿನಗಳ ಕಾಲ ಐಸಿಯುನಲ್ಲಿ ಇರಬೇಕಾಗುತ್ತದೆ ಎಂದು ಡಾ. ವಿವೇಕ್ ತ್ರಿವೇದಿ ತಿಳಿಸಿದ್ದಾರೆ.

ಇತ್ತೀಚಿಗಷ್ಟೆ ಕಾಂಬ್ಳಿ ತಾವು ಮೂತ್ರಕೋಶ ಸೋಂಕು ಸೇರಿದಂತೆ ಹಲವು ಗಂಭೀರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವುದಾಗಿ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು. ಅದರ ಬೆನ್ನಲ್ಲೇ ಕಳೆದ ಶನಿವಾರ ಆರೋಗ್ಯ ಹದಗೆಟ್ಟ ಪರಿಣಾಮ ತಡರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದರು.ಇತ್ತೀಚೆಗೆ ಮುಂಬೈನಲ್ಲಿ ನಡೆದ ದಿವಂಗತ ರಮಾಕಾಂತ್ ಅಚ್ರೇಕರ್ ಅವರ ಸ್ಮಾರಕ ಉದಾÐಟನಾ ಕಾರ್ಯಕ್ರಮದ ವೇದಿಕೆಯಲ್ಲಿ ಅವರ ಇಬ್ಬರು ಶಿಷ್ಯಂದಿರಾದ ವಿನೋದ್ ಕಾಂಬ್ಳಿ ಮತ್ತು ಸಚಿನ್ ತೆಂಡೂಲ್ಕರ್ ಮುಖಾಮುಖಿಯಾಗಿದ್ದರು. ಪ್ರಾರಂಭದಲ್ಲಿ ಸಚಿನ್ ಅವರನ್ನು ವಿನೋದ್ ಕಾಂಬ್ಳಿಗೆ ಗುರುತು ಹಿಡಿಯಲೂ ಸಾಧ್ಯವಾಗಿರಲಿಲ್ಲ. ಈ ವಿಡಿಯೋ ವೈರಲ್ ಆಗಿತ್ತು.

ಬೆಂಬಲಿಸಿದ ಮಾಜಿ ಕ್ರಿಕೆಟಿಗರು ಇದನ್ನು ನೋಡಿ ಟೀಂ ಇಂಡಿಯಾದ ಮಾಜಿ ನಾಯಕ ಸುನಿಲ್ ಗವಾಸ್ಕರ್ ಅವರು ಬಹಳ ಕಳವಳ ವ್ಯಕ್ತಪಡಿಸಿದ್ದರು. 1983ರ ವಿಶ್ವಕಪ್ ವಿಜೇತ ತಂಡ ವಿನೋದ್ ಕಾಂಬ್ಳಿ ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸಲಿದೆ ಎಂದು ತಿಳಿಸಿದ್ದರು. ಕಪಿಲ್ ದೇವ್ ಅವರು ಕಾಂಬ್ಳಿ ತಮ್ಮನ್ನು ತಾವು ಮೊದಲು ನೋಡಿಕೊಳ್ಳಬೇಕು. ಆಗ ನಾವಾದರೂ ಏನಾದರೂ ಮಾಡಲು ಸಾಧ್ಯ ಎಂದು ತಿಳಿಸಿದ್ದರು. ಇದಾದ ಕೆಲ ದಿನಗಳ ಬಳಿಕ ಒಂದು ವೇಳೆ ಕ್ಯಾಂಬ್ಳಿ ಅವರು ಪುನಶ್ಚೇತನ ಶಿಬಿರಕ್ಕೆ ಸೇರಲು ಬಯಸಿದಲ್ಲಿ ಅವರಿಗೆ ಸಹಾಯ ಮಾಡಲು ಸಿದ್ಧ ಎಂದು ಶೋಘಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು