LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ವಿಪಕ್ಷಗಳ ಗದ್ದಲ ಸಂಸತ್ ಉಭಯ ಸದನಗಳಲ್ಲಿ ಕುಂಭಮೇಳದ ಕಾಲ್ತುಳಿತ ಪ್ರಕರಣ ಮಾಹಿತಿಗೆ ಒತ್ತಾಯ

ನವದೆಹಲಿ: ಇಂದು ಸಂಸತ್‍ನ ಉಭಯ ಸದನಗಳಲ್ಲಿ ವಿಪಕ್ಷಗಳು ಉತ್ತರಪ್ರದೇಶದ ಘಟನೆ ಬಗ್ಗೆ ಮಾಹಿತಿ ನೀಡುವಂತೆ ಒತ್ತಾಯಿಸಿ ಗದ್ದಲ ಎಬ್ಬಿಸಿದೆ.ಇಂದು ಲೋಕಸಭೆ ಕಲಾಪ ಆರಂಭವಾಗುತ್ತಿದ್ದಂತೆ ಲೋಕಸಭಾ ಅಧ್ಯಕ್ಷ ಓಂಬಿರ್ಲಾ ಅವರು ಪ್ರಶ್ನೋತ್ತರ ಕಲಾಪವನ್ನು ಕೈಗೆತ್ತಿಕೊಂಡರು.

ಆದರೆ ಪ್ರತಿಪಕ್ಷಗಳು ಉತ್ತರಪ್ರದೇಶದ ಪ್ರಯಾಗ್‍ರಾಜ್‍ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಮೌನಿ ಅಮಾವಾಸ್ಯೆಯಂದು ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಚರ್ಚೆಗೆ ಒತ್ತಾಯಿಸಿದರು.ಆದರೆ ಸಭಾಧ್ಯಕ್ಷರು ಪ್ರಶ್ನೋತ್ತರ ಕಲಾಪದ ವೇಳೆ ಈ ರೀತಿ ಒತ್ತಾಯಿಸುವುದು ಸರಿಯಲ್ಲ. ಪ್ರಶ್ನೋತ್ತರದ ನಂತರ ಈ ಬಗ್ಗೆ ಚರ್ಚಿಸೋಣ ಎಂದು ತಿಳಿಸಿದರಾದರೂ ಪಟ್ಟು ಬಿಡದ ಪ್ರತಿಪಕ್ಷಗಳು ಸದನದ ಬಾವಿಗಿಳಿದು ತಮ್ಮ ಒತ್ತಾಯವನ್ನು ಪಟ್ಟು ಹಿಡಿದು ಘಟನೆ ಸಂಬಂಧ ಉತ್ತರಪ್ರದೇಶದ ಸರ್ಕಾರ ಸರಿಯಾದ ಮಾಹಿತಿ ನೀಡಿಲ್ಲ.

ಈ ಬಗ್ಗೆ ಸ್ಪಷ್ಟವಾದ ಅಂಕಿಅಂಶಗಳನ್ನು ನೀಡಬೇಕು. ಕೇಂದ್ರ ಸರ್ಕಾರವೂ ಸಹ ಏನನ್ನು ಹೇಳುತ್ತಿಲ್ಲ. ಈ ಬಗ್ಗೆ ಸರಿಯಾದ ದಾಖಲೆ ಒದಗಿಸಿ ಎಂದು ಪಟ್ಟುಹಿಡಿದ ಪ್ರತಿಪಕ್ಷಗಳು ಸದನದ ಬಾವಿಯಲ್ಲಿ ನಿಂತು ಆಗ್ರಹ ಪಡಿಸಿದರು.ಸಭಾಧ್ಯಕ್ಷರು ಎಷ್ಟೇ ಮನವಿ ಮಾಡಿದರು. ಪ್ರತಿಪಕ್ಷಗಳ ಸದಸ್ಯರು ತಮ್ಮ ಪಟ್ಟು ಸಡಿಲಿಸಲಿಲ್ಲ. ಇತ್ತ ರಾಜ್ಯ ಸಭೆಯಲ್ಲೂ ಸಹ ಇದೇ ವಿಷಯ ಪ್ರತಿಧ್ವನಿಸಿ, ಪ್ರತಿಪಕ್ಷಗಳು ಕಾಲ್ತುಳಿತ ಪ್ರಕರಣದ ಬಗ್ಗೆ ಚರ್ಚೆಗೆ ಅವಕಾಶ ಕೋರುವಂತೆ ಒತ್ತಾಯಿಸಿ ಗದ್ದಲ ನಡೆಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು