LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ವಿರೋಧ ಪಕ್ಷಗಳ ಅಪಪ್ರಚಾರಕ್ಕೆ ಮತದಾರರಿಂದ ತಕ್ಕ ಉತ್ತರ ಮಾಜಿ ಸಂಸದ ಡಿ.ಕೆ. ಸುರೇಶ್

ಬೆಂಗಳೂರು: ಇಂದು ರಾಜ್ಯದ ಮೂರು ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಸಂಪೂರ್ಣ ಬೆಂಬಲ ದೊರೆತಿದೆ. ಗ್ಯಾರಂಟಿಗಳ ವಿರುದ್ಧ, ಮುಖ್ಯಮಂತ್ರಿಗಳ ವಿರುದ್ಧದ ವಿರೋಧ ಪಕ್ಷಗಳ ಸುಳ್ಳು ಆರೋಪಕ್ಕೆ ರಾಜ್ಯದ ಮೂರು ಭಾಗಗಳಲ್ಲಿ ಜನ ತಕ್ಕ ಪಾಠ ಕಲಿಸಿದ್ದಾರೆ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ತಿಳಿಸಿದ್ದಾರೆ.

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶದ ಬಗ್ಗೆ ಸುರೇಶ್ ಅವರು ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು.
ಚನ್ನಪಟ್ಟಣದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಹಾಗೂ ಶಿಗ್ಗಾವಿಯಲ್ಲಿ ಮಾಜಿ ಸಿಎಂ ಬೊಮ್ಮಾಯಿ ಅವರ ಪುತ್ರರನ್ನು ಜನ ಸೋಲಿಸಿದ್ದಾರೆ.ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿ, ವಿರೋಧ ಪಕ್ಷಗಳು ಸರ್ಕಾರಕ್ಕೆ ಅನಗತ್ಯವಾಗಿ ಅಡ್ಡಿಮಾಡಿ ಅಭಿವೃದ್ಧಿಗೆ ತೊಂದರೆ ನೀಡದಂತೆ ಸಂದೇಶ ರವಾನಿಸಿದ್ದಾರೆ ಎಂದು ತಿಳಿಸಿದ್ದಾರೆ.

ಸರ್ಕಾರದ ವಿರುದ್ಧದ ಇದು ಆರೋಪಗಳಿಗೆ ಉತ್ತರವೇ ಎಂದು ಕೇಳಿದಾಗ, ಮಾಜಿ ಪ್ರಧಾನಿಗಳು, ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವರು, ವಿರೋಧ ಪಕ್ಷಗಳ ನಾಯಕರ ಆರೋಪಗಳಿಗೆ ಜನ ಸ್ಪಷ್ಟ ತೀರ್ಪು ನೀಡಿದ್ದಾರೆ. ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಹಾಗೂ ಹಳೆ ಮೇಸೂರು ಭಾಗದ ಜನ ಈ ಸಂದೇಶ ನೀಡಿದ್ದಾರೆ. ಇನ್ನಾದರೂ ಸರ್ಕಾರ ಹಾಗೂ ಮುಖ್ಯಮಂತ್ರಿಗಳ ಮೇಲೆ ಸುಳ್ಳು ಆರೋಪ ಮಾಡುವುದನ್ನು ಬಿಟ್ಟು ರಾಜ್ಯದ ಅಭಿವೃದ್ಧಿಗೆ ಸಹಕಾರ ನೀಡಲಿ ಎಂದರು.

ಚನ್ನಪಟ್ಟಣದಲ್ಲಿ ಜಮೀರ್ ಅವರ ಹೇಳಿಕೆ ಅಢ್ಡಿಯಾಗಬಹುದು ಎಂಬ ಊಹಾಪೋಹ ಇತ್ತು ಎಂದು ಕೇಳಿದಾಗ, ಆ ಭಾವನೆ ಸ್ಥಳಈಯ ಮಟ್ಟದಲ್ಲಿಲ್ಲ ಎಂದು ನಾನು ಸ್ಪಷ್ಟನೆ ನೀಡಿದ್ದೆ. ಒಬ್ಬ ಅಭ್ಯರ್ಥಿಯ ಪರವಾಗಿ ಮಾಧ್ಯಮಗಳ ಸೃಷ್ಟಿ ಎಂದು ಹೇಳಿದ್ದೆ. ಇದರಿಂದ ಮಾಧ್ಯಮಗಳಿಗೆ ಬೇಸರವಾಗಿರಬಹುದು. ಜಮೀರ್ ಅವರ ಹೇಳಿಕೆ ಮೊದಲ ಬಾರಿಗೆ ಹೇಳಿದ್ದಲ್ಲ. ಜಮೀರ್ ಅವರು ಯಾರಿಗೆ ಈ ಪದ ಬಳಸಿದ್ದರು ಅವರು ಇದಕ್ಕೆ ಈ ಹಿಂದೆ ಆಕ್ಷೇಪ ಮಾಡಿರಲಿಲ್ಲ. ಈ ಹಿಂದೆ ಮಾಧ್ಯಮಗಳು ಪ್ರಶ್ನೆ ಮಾಡಿರಲಿಲ್ಲ ಎಂದು ಹೇಳಿದ್ದೆ. ನಾವು ಹಳ್ಳಿ ಹಳ್ಳಿಗೆ ಹೋಗಿ ಒಂದು ತಿಂಗಳ ಕಾಲ ಚುನಾವಣೆ ಮಾಡಿದ್ದೆವು.

ಕ್ಷೇತ್ರದ ಹೊರಗೆ ಈ ವಿಚಾರ ಚರ್ಚೆಯಾಗುತ್ತಿತ್ತೇ ಹೊರತು, ಕ್ಷೇತ್ರದ ಒಳಗೆ ಅಭಿವೃದ್ಧಿ ವಿಚಾರವಷ್ಟೇ ಚರ್ಚೆಯಾಗಿತ್ತು. ಕಾರಣ, ಈ ಕ್ಷೇತ್ರ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದ ಕ್ಷೇತ್ರ. ಅವರಿಂದ ತೆರವಾದ ಹಿನ್ನೆಲೆಯಲ್ಲಿ ಅವರ ಅಭಿವೃದ್ಧಿ ಯೋಜನೆಗಳ ಚರ್ಚೆಯಾಗಿತ್ತು. ನಾನು ನನ್ನ ಅಂತರಾಳದ ಮಾತುಗಳನ್ನು ವ್ಯಕ್ತಪಡಿಸಿದ್ದೆ ಹೊರತು ಮಾಧ್ಯಮಗಳನ್ನು ದೂಷಿಸುವುದಲ್ಲ. ನನ್ನ ಮಾತಿನಿಂದ ಮಾಧ್ಯಮಗಳಿಗೆ ಬೇಸರವಾಗಿದ್ದರೆ ಕ್ಷಮೆ ಇರಲಿ ಎಂದರು.

ಎಷ್ಟು ಅಂತರದಲ್ಲಿ ಗೆಲ್ಲಬಹುದು ಎಂದು ಕೇಳಿದಾಗ, ಈಗಾಗಲೇ 22 ಸಾವಿರ ಮತಗಳ ಅಂತರದ ಮುನ್ನಡೆ ಕಾಯ್ದುಕೊಂಡಿದ್ದು, ಇದೇ ಅಂತರ ಕಾಯ್ದುಕೊಳ್ಳುವ ವಿಶ್ವಾಸವಿದೆ ಎಂದು ತಿಳಿಸಿದರು.ಮಹಾರಾಷ್ಟ್ರ ಚುನಾವಣೆ ಫಲಿತಾಂಶದ ಬಗ್ಗೆ ಕೇಳಿದಾಗ, ನೀವು ನನ್ನ ಮೇಲೆ ಒತ್ತಡ ಹಾಕಿದ್ದ ಕಾರಣ ನಾನು ಕೇವಲ ಕರ್ನಾಟಕ ಚುನಾವಣೆ ಬಗ್ಗೆ ಮಾತ್ರ ಗಮನ ಹರಿಸಿದ್ದೆ. ಬೇರೆ ರಾಜ್ಯಗಳ ಚುನಾವಣೆ ಬಗ್ಗೆ ಗಮನಹರಿಸಿರಲಿಲ್ಲ. ಸಿಎಂ, ಡಿಸಿಎಂ ಸೇರಿದಂತೆ ಕಾಂಗ್ರೆಸ್ ನಾಯಕರು ಪ್ರಚಾರಕ್ಕೆ ತೆರಳಿದ್ದರು. ಅವರು ಕೂಡ ವಿಶ್ವಾಸ ವ್ಯಕ್ತಪಡಿಸದ್ದರು.

ಈ ಫಲಿತಾಂಶದ ಬಗ್ಗೆ ನಮ್ಮ ಹೈಕಮಾಂಡ್ ನಾಯಕರು ಪರಿಶೀಲನೆ ಮಾಡಲಿದ್ದಾರೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲ್ಲಿಸಿದ ಎಲ್ಲಾ ಮತದಾರರಿಗೆ ವಿಶೇಷವಾಗಿ ಧನ್ಯವಾದಗಳು. ಪಕ್ಷದ ಪರವಾಗಿ ಶ್ರಮಿಸಿದ ಕಾರ್ಯಕರ್ತರು, ಮಂತ್ರಿಗಳು, ಶಾಸಕರು ಚುನಾವಣೆ ಮಾಡಿದ್ದು, ಈ ಗೆಲುವಿನಲ್ಲಿ ಅವರ ಕಾಣಿಕೆಯೂ ಇದೆ. ಅವರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ತಿಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು