LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ವಿವಾದದಲ್ಲಿ ಮಹೇಂದ್ರ ಸಿಂಗ್ ಧೋನಿಯ ಮನೆ

ಮಹೇಂದ್ರ ಸಿಂಗ್ ಧೋನಿ ಅವರ ಸಾಧನೆಯನ್ನು ಪರಿಗಣಿಸಿ ಜಾರ್ಖಂಡ್ ಸರ್ಕಾರ ಹಲವು ವರ್ಷಗಳ ಹಿಂದೆ ರಾಂಚಿಯ ಹರ್ಮು ರಸ್ತೆ ಪ್ರದೇಶದಲ್ಲಿ 10 ಸಾವಿರ ಚದರ ಅಡಿ ಜಾಗವನ್ನು ಗೌರವಪೂರ್ವಕವಾಗಿ ನೀಡಿತು. ಟೀಮ್ ಇಂಡಿಯಾದ ಮಾಜಿ ನಾಯಕ ಅಲ್ಲಿ ಐಷಾರಾಮಿ ಮನೆ ನಿರ್ಮಿಸಿದ್ದರು. ಇದೀಗ ಇದೇ ಮನೆಯು ವಿವಾದಕ್ಕೆ ಒಳಗಾಗಿದೆ.

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮತ್ತೆ ಸುದ್ದಿಯಲ್ಲಿದ್ದಾರೆ. ಈ ಬಾರಿ ಸುದ್ದಿಯಾಗಿರುವುದು ರಾಂಚಿಯಲ್ಲಿರುವ ತಮ್ಮ ಹಳೆಯ ಮನೆಯ ವಿಷಯದಿಂದ ಎಂಬುದಷ್ಟೇ ವ್ಯತ್ಯಾಸ. ಮಹೇಂದ್ರ ಸಿಂಗ್ ಧೋನಿ ಅವರ ಸಾಧನೆಯನ್ನು ಪರಿಗಣಿಸಿ ಜಾರ್ಖಂಡ್ ಸರ್ಕಾರ ಈ ಹಿಂದೆ ಅವರಿಗೆ ರಾಂಚಿಯಲ್ಲಿ 10 ಸಾವಿರ ಚದರ ಅಡಿ ಜಾಗ ನೀಡಿತ್ತು.

ಈ ಜಾಗದಲ್ಲಿ ಮಹೇಂದ್ರ ಸಿಂಗ್ ಧೋನಿ ಐಷಾರಾಮಿ ಮನೆ ನಿರ್ಮಿಸಿದ್ದರು. ಇಷ್ಟೇ ಆಗಿದ್ದರೆ ಸಮಸ್ಯೆ ಇರುತ್ತಿರಲಿಲ್ಲ. ಆದರೆ ಈ ಮನೆಯನ್ನು ಧೋನಿ ವಾಣಿಜ್ಯ ಉದ್ದೇಶದ ಬಳಕೆಗೆ ಮುಂದಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ರಾಂಚಿಯ ಹರ್ಮು ರಸ್ತೆಯಲ್ಲಿರುವ ಧೋನಿಯ ಈ ಮನೆಯಲ್ಲಿ ಡಯಾಗ್ನೋಸ್ಟಿಕ್ ಸೆಂಟರ್ ನಿರ್ಮಿಸಲಾಗುತ್ತಿದೆ ಎಂದು ವರದಿಯಾಗಿದೆ. ಈ ಬಗ್ಗೆ ಹೌಸಿಂಗ್ ಬೋರ್ಡ್​ಗೆ ದೂರು ದಾಖಲಿಸಲಾಗಿದೆ. ಹೀಗಾಗಿ ಇದೀಗ ಜಾರ್ಖಡ್ ಹೌಸಿಂಗ್ ಬೋರ್ಡ್ ಧೋನಿ ಕಡೆಯಿಂದ ಸ್ಪಷ್ಟನೆ ಕೇಳಿದೆ.

ಜಾರ್ಖಂಡ್ ಹೌಸಿಂಗ್ ಬೋರ್ಡ್ ನಿಯಮಗಳ ಪ್ರಕಾರ, ವಸತಿ ಪ್ಲಾಟ್‌ಗಳನ್ನು ವಾಣಿಜ್ಯ ಉದ್ದೇಶಗಳಿಗಾಗಿ ಬಳಸುವಂತಿಲ್ಲ. ಯಾವುದೇ ಪ್ರಕರಣದಲ್ಲಿ ಯಾವುದೇ ಉಲ್ಲಂಘನೆ ಕಂಡುಬಂದರೆ ಅದನ್ನು ಕಾನೂನುಬಾಹಿರ ಎಂದು ಪರಿಗಣಿಸಲಾಗುತ್ತದೆ.

ಇದೀಗ ಈ ಬಗ್ಗೆ ತನಿಖೆ ಆರಂಭಿಸಲಾಗಿದ್ದು, ನಿಯಮ ಉಲ್ಲಂಘನೆ ಕಂಡು ಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಜಾರ್ಖಂಡ್ ಹೌಸಿಂಗ್ ಬೋರ್ಡ್​ನ ಅಧ್ಯಕ್ಷ ಸಂಜಯ್ ಲಾಲ್ ಪಾಸ್ವಾನ್ ಹೇಳಿದ್ದಾರೆ.

ಅಂದಹಾಗೆ ಧೋನಿಯ ಈ ಮನೆಯು ವಿವಾದಕ್ಕೆ ಒಳಗಾಗುತ್ತಿರುವುದು ಇದೇ ಮೊದಲೇನಲ್ಲ. ಕೆಲ ವರ್ಷಗಳ ಹಿಂದೆ ಈ ಮನೆಯ ಮೇಲ್ಛಾವಣಿಯಲ್ಲಿ ಧೋನಿ ಈಜುಕೊಳವನ್ನು ನಿರ್ಮಿಸಿದ್ದರು. ಈ ಬಗ್ಗೆ 2007 ರಲ್ಲಿ ದೂರು ನೀಡಲಾಗಿತ್ತು.

ಇನ್ನು 2016ರಲ್ಲಿ ನಗರದಲ್ಲಿ ನೀರಿನ ಅಭಾವ ಉಂಟಾದಾಗ ಧೋನಿ ತನ್ನ ಈಜುಕೊಳಕ್ಕೆ ಪ್ರತಿದಿನ 15 ಸಾವಿರ ಲೀಟರ್ ನೀರು ವ್ಯಯಿಸುತ್ತಿದ್ದಾರೆ. ಇದರಿಂದ ತಮ್ಮ ಮನೆಗೆ ಸರಿಯಾಗಿ ನೀರು ಸಿಗುತ್ತಿಲ್ಲ ಎಂದು ಆರೋಪಿಸಿದ್ದರು.

ಇದೀಗ ಸರ್ಕಾರ ನೀಡಿದ ಜಾಗವನ್ನು ಧೋನಿ ವಾಣಿಜ್ಯ ಉದ್ದೇಶಕ್ಕಾಗಿ ಬಳಸಲು ಮುಂದಾಗಿ ಮತ್ತೊಮ್ಮೆ ಸುದ್ದಿ ಸೃಷ್ಟಿಸಿದ್ದಾರೆ. ಸದ್ಯ ಈ ಮನೆಯಲ್ಲಿ ಮಹೇಂದ್ರ ಸಿಂಗ್ ಧೋನಿ ವಾಸಿಸುತ್ತಿಲ್ಲ. ಬದಲಾಗಿ ಕಳೆದ ಹಲವಾರು ವರ್ಷಗಳಿಂದ ಸಿಮಾಲಿಯಾ ರಿಂಗ್ ರೋಡ್‌ನಲ್ಲಿರುವ ತಮ್ಮ ಬೃಹತ್ ಫಾರ್ಮ್ ಹೌಸ್‌ನಲ್ಲಿ ಕುಟುಂಬದೊಂದಿಗೆ ನೆಲೆಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು