LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ವಿವಿಧ ಅಪರಾಧ ಪ್ರಕರಣ: ಆರೋಪಿಗಳ ಬಂಧನ

ಬೆಂಗಳೂರು: ಬನಶಂಕರಿ ಪೊಲೀಸರು ಹ್ಯಾಂಡಲ್ ವಾಕ್ ಮುರಿದು ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುತ್ತಾರೆ.
22 ವರ್ಷದ ರಘುನಂದನ ಎಂಬಾತನನ್ನು ಬಂಧಿಸಿ ನಾಲ್ಕು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿರುತ್ತಾರೆ ಇವುಗಳ ಮೌಲ್ಯ ಒಂದು ಕಾಲು ಲಕ್ಷ ರೂಪಾಯಿಗಳಾಗಿರುತ್ತದೆ.

ಎಚ್‍ಎಎಲ್ ಪೊಲೀಸರು ಬಸ್‍ಗಳಲ್ಲಿ ಪಿಕ್ ಪಾಕೆಟ್ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ 4 ಲಕ್ಷ ರೂ ಬೆಲೆ ಬಾಳುವ ವಿವಿಧ ಬಗೆಯ ಮೊಬೈಲ್ ಫೋನ್‍ಗಳನ್ನು ವಶಪಡಿಸಿ ಕೊಂಡಿರುತ್ತಾರೆ. 34 ವರ್ಷದ ಅಲೀಮ್ ಎಂಬ ಆರೋಪಿಯನ್ನು ಬಂಧಿಸಿ 11 ಮೊಬೈಲ್ ಫೋನ್‍ಗಳನ್ನು ವಶಪಡಿಸಿಕೊಂಡಿರುತ್ತಾರೆ.

ಈ ಆರೋಪಿಯು ಕುಂದಲಳ್ಳಿ ಮತ್ತು ಮಾರತಳ್ಳಿ ಬಳಿ ಜನನಿ ಬಿಡ ಬಸ್‍ಗಳಲ್ಲಿ ಪ್ರಯಾಣ ಬೆಳೆಸಿ ಸಾರ್ವಜನಿಕರ ಪರ್ಸುಗಳಲ್ಲಿ ಮತ್ತು ಜೋಬುಗಳಿಂದ ಮೊಬೈಲ್ ಕಳವು ಮಾಡುತ್ತಿದ್ದನು.ಪತ್ತೆಯಾಗಿರುವ 11 ಮೊಬೈಲ್‍ಗಳಲ್ಲಿ ಮೂರು ವಾರಸುದಾರರು ಪತ್ತೆಯಾಗಿದ್ದು ಇನ್ನೂ ಎಂಟು ಕಳೆದುಕೊಂಡಿರುವ ಜನರು ಪತ್ತೆಯಾಗಿರಬೇಕಾಗಿರುತ್ತದೆ.

ಒಂಟಿ ಪ್ರಯಾಣಿಕರನ್ನೇ ಗುರಿಯಾಗಿಸಿ ಕೊಂಡು, ಜ್ಯೂಸ್ ಕುಡಿಸಿ ಮೊಬೈಲ್, ಪರ್ಸ್, ಚಿನ್ನಾಭರಣ ಸೇರಿ ಬೆಲೆಬಾಳುವ ವಸ್ತುಗಳನ್ನು ದೋಚುತ್ತಿದ್ದ ಖತರ್ನಾಕ್ ಕಳ್ಳಿಯನ್ನು ಬ್ಯಾಟ ರಾಯನಪುರ ಪೊಲೀಸರು ಬಂಧಿಸಿದ್ದಾರೆ.ಆಂಧ್ರಪ್ರದೇಶ ಮೂಲದ ಲತಾ ಬಂಧಿತ ಆರೋಪಿಯಾಗಿದ್ದಾಳೆ,ಬಿಎಂಟಿಸಿ ಬಸ್‍ನಲ್ಲಿ ಒಂಟಿ ಪ್ರಯಾಣಿಕರನ್ನೇ ಟಾರ್ಗೆಟ್ ಮಾಡುತ್ತಿದ್ದ ಈ ಕಳ್ಳಿ, ಪರಿಚಯ ಮಾಡಿಕೊಂಡು ಜ್ಯೂಸ್ ಕುಡಿಯಲು ಕರೆದುಕೊಂಡು ಹೋಗ್ತಿದ್ದಳು. ಜ್ಯೂಸ್ ಕುಡಿದು ಪ್ರಜ್ಞೆ ಕಳೆದುಕೊಂಡ ತಕ್ಷಣ ಮೊಬೈಲ್, ಪರ್ಸ್, ಚಿನ್ನಾಭರಣ ದೋಚಿ ಎಸ್ಕೇಪ್ ಆಗುತ್ತಿದ್ದಳು.

ಈ ಬಗ್ಗೆ ಮಾಹಿತಿ ಪಡೆದ ಬ್ಯಾಟರಾಯನಪುರ ಪೊಲೀಸರು ಆಕೆಯನ್ನ ಬಂಧಿಸಿ ಠಾಣೆಗೆ ಕರೆತಂದಿದ್ದಾರೆ. ಠಾಣೆಗೆ ಕರೆತಂದ ಕೆಲವೇ ನಿಮಿಷಗಳಲ್ಲಿ ಹಿಳೆ ವಿಷಪೂರಿತ ಚಾಕೊಲೆಟ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.ಮಹಿಳೆ ಕುಸಿದುಬಿದ್ದ ನಂತರ ಪೊಲೀಸರು ಆಕೆಯನ್ನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂಬಂಧ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು