LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ವಿವಿಧ ಇಲಾಖೆಗಳ ಸಮನ್ವಯತೆಯಿಂದ ಮಹಿಳೆಯರಿಗೆ ಯೋಜನೆಗಳು ತಲುಪಲು ಸಹಕಾರಿ ಸರ್ಕಾರದ ಯೋಜನೆಗಳ ಸದುಪಯೋಗ ಪಡಿಸಿಕೊಂಡು ಮಹಿಳೆಯರು ಸ್ವಾವಲಂಬಿಗಳಾಗಿ: ಪದ್ಮಾವತಿ ಜಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ: ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರವು ಉದ್ಯೋಗಿನಿ, ಸಂಜೀವಿನಿ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಚೇತನ ಯೋಜನೆ, ಅಮೃತ ಯೋಜನೆ, ಸಮೃದ್ಧಿ ಯೋಜನೆ, ಗೃಹಲಕ್ಷ್ಮಿ ಮೈತ್ರಿ, ಮನಸ್ವಿನಿ ಮುಂತಾದ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳ ಬಗ್ಗೆ ಸಂಬಂಧಪಟ್ಟ ಇಲಾಖೆಗಳಿಂದ ಮಾಹಿತಿ ಪಡೆದು ಯೋಜನೆಯ ಸೌಲಭ್ಯ ಪಡೆದುಕೊಂಡು ಸ್ವಾವಲಂಬಿಗಳಾಗಿ ಬದುಕಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ಪದ್ಮಾವತಿ.ಜಿ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ, ಮಹಿಳಾ ಉದ್ದಿಮೆದಾರರೊಂದಿಗೆ ಸಂವಾದ ಕಾರ್ಯಕ್ರಮ ಹಾಗೂ ಇತರೆ ಸೌಲಭ್ಯ ವಿತರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಸರ್ಕಾರ ಮತ್ತು ಸಾರ್ವಜನಿಕರ ನಡುವೆ ಅಧಿಕಾರಿಗಳು ಸೇತುವೆಯಾಗಿ ಕಾರ್ಯ ನಿರ್ವಹಿಸಬೇಕು. ಸರ್ಕಾರದ ಯೋಜನೆಗಳು ಪ್ರತಿಯೊಬ್ಬ ಅರ್ಹ ಫಲಾನುಭವಿಗೆ ತಲುಪುವಂತೆ ಅಧಿಕಾರಿಗಳು ಕೆಲಸ ಮಾಡಬೇಕು.

ದಮನಿತರ, ಧ್ವನಿ ಇಲ್ಲದವರ, ಬಡವರ, ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರದ ಯೋಜನೆಗಳು ತಲುಪುವಂತಾಗಬೇಕು. ಈ ನಿಟ್ಟಿನಲ್ಲಿ ಮಹಿಳಾ ಅಭಿವೃದ್ಧಿ ನಿಗಮ ಕಾರ್ಯ ನಿರ್ವಹಿಸುತ್ತಿದೆ. ಪ್ರಸ್ತುತ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲು ಕಾರ್ಯ ನಿರ್ವಹಿಸುತ್ತಿದ್ದಾರೆ. ಮಹಿಳೆಯರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ ಸ್ತ್ರೀ ಶಕ್ತಿ ಸಂಘಗಳು, ಇತರೆ ಸ್ವಸಹಾಯ ಸಂಘಗಳ ಮೂಲಕ ಸಾಲ ಸೌಲಭ್ಯ ಒದಗಿಸಿ ಅರ್ಥಿಕವಾಗಿ ಸಬಲೆಯರನ್ನಾಗಿ ಮಾಡುವುದು ನಿಗಮದ ಗುರಿಯಾಗಿದೆ ಎಂದು ಹೇಳಿದರು.

ಲಿಂಗತ್ವ ಅಲ್ಪ ಸಂಖ್ಯಾತರಿಗೆ ಕೂಡ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ಕಲ್ಪಿಸಲಾಗಿದೆ. ಜೊತೆಗೆ ಲಿಂಗತ್ವ ಅಲ್ಪಸಂಖ್ಯಾತರಿಗೆ ಆಹಾರ ಪಡಿತರ ಚೀಟಿ ವಿತರಿಸಲು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ಅಧ್ಯಕ್ಷರಾದ ಪದ್ಮಾವತಿ ಜಿ ಅವರು ನೀಡಿದರು.ಮಹಿಳೆಯರಿಗಾಗಿ ಸರ್ಕಾರ ತಂದಿರುವ ವಿವಿಧ ಯೋಜನೆಗಳ ಮಾಹಿತಿಯನ್ನು ಸಂಬಂಧಪಟ್ಟ ಇಲಾಖೆಗಳಲ್ಲಿ ಪಡೆದುಕೊಳ್ಳಬಹುದಾಗಿದ್ದು, ಉದ್ಯೋಗಿನಿ, ಸಂಜೀವಿನಿ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಚೇತನ ಯೋಜನೆ, ಅಮೃತ ಯೋಜನೆ, ಸಮೃದ್ಧಿ ಯೋಜನೆಗಳಡಿ ಸಾಲ ಸೌಲಭ್ಯ, ಸಹಾಯಧನ ಸೇರಿದಂತೆ ಮಹಿಳಾ ಸಬಲೀಕರಣಕ್ಕಾಗಿ ಹಲವು ಕಾರ್ಯಕ್ರಮಗಳು ಇದ್ದು, ಮಹಿಳೆಯರು ಯೋಜನೆಗಳನ್ನು ಸರಿಯಾದ ರೀತಿಯಲ್ಲಿ ಸದುಪಯೋಗ ಪಡಿಸಿಕೊಳ್ಳಿ ಎಂದರು.
ನಂತರ ಮಹಿಳಾ ಉದ್ದಿಮೆದಾರರೊಂದಿಗೆ ಸಂವಾದ ನಡೆಸಿ ಕುಂದು ಕೊರತೆ ಆಲಿಸಿ, ಉದ್ದಿಮೆಗಳ ಬಗೆಗಿನ ಅಭಿಪ್ರಾಯ ಪಡೆದುಕೊಂಡರು ಹಾಗೂ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆದ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಿಸಿದರು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಯ ಜಂಟಿ ನಿರ್ದೇಶಕಿ ಅಕ್ಕಮಹಾದೇವಿ, ಜಿ.ಪಂ ಯೋಜನಾ ನಿರ್ದೇಶಕ ವಿಠ್ಠಲ ಕಾವ್ಳೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಮುದ್ದಣ್ಣ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರಾದ ಮಹೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಅನಿತಾ ಲಕ್ಷ್ಮಿ, ನಿಗಮದ ಅಭಿವೃದ್ಧಿ ನಿರೀಕ್ಷಕರಾದ ವಿಜಯ ಕುಮಾರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕಿ ಹೇಮಾವತಿ ಜೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ತಾಲ್ಲೂಕು ಸಿ.ಡಿ.ಪಿ.ಒ ಗಳು, ಜಿಲ್ಲಾ ಮಹಿಳಾ ಅಭಿವೃದ್ಧಿ ಘಟಕ ಸಿಬ್ಬಂದಿ ಹಾಗೂ ಇತರರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು