LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ವಿವಿಧ ಬೇಡಿಕೆಗಳ ಈಡೇರಿಕೆಗೆ ವಿವಿಧ ಸಂಘಟನೆಗಳ ಒಕ್ಕೊರಲ ಒತ್ತಾಯ ಜನಸ್ನೇಹಿ ಆಡಳಿತಕ್ಕೆ ಒತ್ತು: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ

ಬೆಂ.ಗ್ರಾ.ಜಿಲ್ಲೆ: ಜಿಲ್ಲಾಡಳಿತ ಭವನದಲ್ಲಿಂದು ರೈತ ಕಾರ್ಮಿಕ,ದಲಿತ, ಅಸಂಘಟಿತ ಹಾಗೂ ಮಹಿಳಾ ಸಂಘಟನೆಗಳು ಜಿಲ್ಲೆಯ ರೈತರ,ಕಾರ್ಮಿಕರ ಸಾರ್ವಜನಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಹಾಗೂ ಭ್ರಷ್ಟಾಚಾರ ರಹಿತ ಆಡಳಿತಕ್ಕೆ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರಗಳಿಗೆ ಆಗ್ರಹ ಮಾಡಿದರು.ಸಂಘಟನೆಗಳ ಪ್ರಮುಖ ಬೇಡಿಕೆಗಳು

- ಭ್ರಷ್ಟಾಚಾರ ರಹಿತ ಆಡಳಿತ. - ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸುವುದು. - ಸಾರ್ವಜನಿಕರ ಭೇಟಿಗೆ ಸಮಯ ನಿಗದಿ ಪಡಿಸುವುದು, - ಸರ್ಕಾರಿ ಕಚೇರಿಗಳಲ್ಲಿ ಸಿ.ಸಿ.ಟಿ.ವಿ ಅಳವಡಿಕೆ, - ಅಧಿಕಾರಿಗಳು ಸಾರ್ವಜನಿಕರನ್ನು ಗೌರವದಿಂದ ಕಾಣುವುದು. - ಪ.ಜಾತಿ, ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ವಿಲೇವಾರಿ. - ಸಾಗುವಳಿ ಚೀಟಿ ವಿತರಣೆ. - ಸರ್ಕಾರಿ ಜಾಗಗಳ ಒತ್ತುವರಿ ತೆರವು. - ನಿವೇಶನ, ವಸತಿ ಹಂಚಿಕೆ. - ಬಗರ್ ಹುಕುಂ ಜಮೀನು ವಿವಾದ. - ಕಡತಗಳ ಶೀಘ್ರ ವಿಲೇವಾರಿ. - ಇ.ಎಸ್.ಐ ಆಸ್ಪತ್ರೆ ಉದ್ಘಾಟನೆ. - ಹೊಸಕೋಟೆಯಲ್ಲಿ ಉಪವಿಭಾಗ ಸ್ಥಾಪಿಸುವುದು
- ಪೌತಿ ಖಾತೆ, ಪೋಡಿ ಇತ್ಯರ್ಥ

ಈ ಸಂಬಂಧ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಸಂಘಟನೆಗಳ ಮುಖಂಡರಿಗೆ ಕರೆದಿದ್ದ ಸಭೆಯಲ್ಲಿ ಸಂಘಟನೆಗಳ ಬೇಡಿಕೆಗಳಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ ಜಿಲ್ಲೆಯಲ್ಲಿ ಈಗಾಗಲೇ ಪೌತಿ ಖಾತೆ ಆಂದೋಲನ ಶುರುವಾಗಿದ್ದು 6000 ಕುಟುಂಬಗಳು ಇದರ ವ್ಯಾಪ್ತಿಗೆ ಬರುತ್ತದೆ. ಪೋಡಿ ಮುಕ್ತ ಜಿಲ್ಲೆ ಮಾಡುವ ನಿಟ್ಟಿನಲ್ಲಿ ಈಗಾಗಲೇ ಕೆಲಸ ಶುರು ಮಾಡಲಾಗಿದೆ. ಸೂಕ್ತ ದಾಖಲೆಗಳು ಇರುವ ಜಮೀನುಗಳನ್ನು ಮೊದಲು ಪೋಡಿ ಮಾಡಲಾಗುತ್ತಿದೆ ಎಂದರು.

ಆಶ್ರಯ ಯೋಜನೆಯಡಿ ಬಡವರಿಗೆ ನಿವೇಶನ ನೀಡುವ ಸಲುವಾಗಿ ಜಿಲ್ಲೆಯಲ್ಲಿ 200 ರಿಂದ 300 ಎಕರೆ ಸರ್ಕಾರಿ ಜಾಗ ಗುರ್ತಿಸಲಾಗಿದೆ. ಅಂದಾಜು 7000 ನಿವೇಶನಗಳನ್ನು ನಿರ್ಮಿಸಲು ರಾಜೀವ್ ಗಾಂಧಿ ಗೃಹ ನಿರ್ಮಾಣ ಮಂಡಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. 4000 ನಿವೇಶನಗಳ ನಿರ್ಮಾಣಕ್ಕೆ ಅನುಮೋದನೆ ಸಿಕ್ಕಿದೆ. ನಿವೇಶನ ರಹಿತರ ಪಟ್ಟಿ ಸಿದ್ದಪಡಿಸಲಾಗಿದ್ದು ಅರ್ಹರಿಗೆ ಹಂತ ಹಂತವಾಗಿ ನಿವೇಶನ ಹಂಚಲು ಕ್ರಮ ವಹಿಸಲಾಗುವುದು ಎಂದರು.

ಸಾರ್ವಜನಿಕ ಆಡಳಿತದಲ್ಲಿ ಪಾರದರ್ಶಕ ಆಡಳಿತಕ್ಕೆ ಮೊದಲ ಆದ್ಯತೆ ನೀಡಬೇಕು. ಅಧಿಕಾರಿಗಳು ಜನಸಾಮಾನ್ಯರನ್ನು ಗೌರವದಿಂದ ಕಾಣಬೇಕು. ಸಾರ್ವಜನಿಕರಿಂದ ಯಾವುದೇ ದೂರುಗಳ ಬರದೇ ಇರೋ ಹಾಗೆ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.ಇನ್ನಿತರ ಬೇಡಿಕೆಗಳಿಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ಸೂಕ್ತ ನಿರ್ದೇಶನ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಸಂಘಟನೆಗಳ ಮುಖಂಡರಿಗೆ ಹೇಳಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ಉಪವಿಭಾಗಾಧಿಕಾರಿ ದುರ್ಗ ಶ್ರೀ, ನಾಲ್ಕು ತಾಲ್ಲೂಕು ತಹಶೀಲ್ದಾರ್ ಗಳು, ವಿವಿಧ ಸಂಘಟನೆಗಳು ಮುಖಂಡರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು