LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ವಿವೇಕಾನಂದರು ಬಳಸಿ ಬಿಸಲಾಡಲ್ಪಟ್ಟವರು ಎಂಬುದನ್ನು ಬಿಜೆಪಿ ಸಾಬೀತುಪಡಿಸಿದೆ: ಎಎಪಿ

ಬೆಂಗಳೂರು: ಬಿಜೆಪಿ ಹಾಗೂ ಸಂಘ ಪರಿವಾರ ಭಾರತದಲ್ಲಿ ಬಲವಾಗಿ ಬೇರೂರಲು ಸ್ವಾಮಿ ವಿವೇಕಾನಂದರನ್ನು ದುರ್ಬಳಕೆ ಮಾಡಿಕೊಂಡಿರುವುದು ಗುಟ್ಟಾಗಿ ಉಳಿದಿಲ್ಲ. ಕಳೆದ 10 ವರ್ಷಗಳಿಂದ ಅಧಿಕಾರ ಸಾಧಿಸುವಲ್ಲಿ ಯಶಸ್ವಿಯಾಗಿರುವ ಬಿಜೆಪಿಗೆ ಸ್ವಾಮಿ ವಿವೇಕಾನಂದರ ಅಗತ್ಯವೂ ಇಲ್ಲ. ಸ್ವಾಮಿ ವಿವೇಕಾನಂದರ ಪುಣ್ಯಸ್ಮರಣೆಯ ಅಂಗವಾಗಿ ಇರಿಸಲಾಗಿದ್ದ ಫೋಟೊವನ್ನು ಯಾಕೆ ಇಟ್ಟಿದ್ದೀರಿ ಎಂದು ಪ್ರಶ್ನಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್ ದಾಸ್ ಅಗ್ರವಾಲ್, ಬಿಜೆಪಿ ಪಾಲಿಗೆ ವಿವೇಕಾನಂದರು ಬಳಸಿ ಬಿಸಾಡಲ್ಪಟ್ಟವರು ಎಂಬುದನ್ನು ಸಾಬೀತುಪಡಿಸಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ ಆರೋಪಿಸಿದರು.

ಬಿಜೆಪಿ ಕಚೇರಿಯಲ್ಲಿ ನಡೆದ ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಕಾರ್ಯಕ್ರಮದ ವೇದಿಕೆಯಲ್ಲಿ ಪಕ್ಷದ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗ್ರವಾಲ್ ಅವರು ಅಸಹನೆಯಿಂದ ಸ್ವಾಮಿ ವಿವೇಕಾನಂದರ ಫೋಟೊ ಯಾಕೆ ಇಟ್ಟಿದ್ದೀರಿ ಎಂದು ಪ್ರಶ್ನಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಓಡಾಡುತ್ತಿದ್ದು, ಈ ವಿಚಾರಕ್ಕೆ ಸಂಬಂಧಿಸಿ ಜಗದೀಶ್ ಸದಂ ಅವರು ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.

ಭಾರತದ ಸಂಸ್ಕೃತಿಯನ್ನು ವಿಶ್ವಮಟ್ಟದಲ್ಲಿ ಪಸರಿಸಿದ ವೀರ ಸನ್ಯಾಸಿ, ನೈಜ ಹಿಂದೂ, ಅಪ್ರತಿಮ ವಾಗ್ಮಿ, ಅನುಪಮ ಮಾನವತಾವಾದಿ, ಯುವಪ್ರೇರಕ, ಸಿಡಿಲ ಸಂತ ಸ್ವಾಮಿ ವಿವೇಕಾನಂದರು ಹಾಕಿಕೊಟ್ಟಿರುವ ಧರ್ಮ ಮಾರ್ಗದಲ್ಲಿ ಎಂದೂ ಹೆಜ್ಜೆ ಇರಿಸದ ಬಿಜೆಪಿ, ಆರೆಸ್ಸೆಸ್ ನವರು ಅವರ ಹೆಸರನ್ನು ದುರ್ಬಳಕೆ ಮಾಡಿಕೊಂಡರು. ಬಿಜೆಪಿ ಬೆಂಬಲಿಸುತ್ತಿರುವ ಹೆಚ್ಚಿನ ಯುವಕರು ಸ್ವಾಮಿ ವಿವೇಕಾನಂದರ ಕಾರಣಕ್ಕಾಗಿ ಬೆಂಬಲಿಸುತ್ತಿರುವವರಾಗಿದ್ದಾರೆ.

ಆದರೆ ವಿವೇಕಾನಂದರ ಹೆಸರಲ್ಲಿ ಅಷ್ಟೂ ಯುವಕರನ್ನು ವಂಚಿಸಿದ್ದಾರೆ. ಹಿಂಸೆ, ದ್ವೇಷ, ವೈರತ್ವವವನ್ನೇ ತುಂಬಿಕೊಂಡಿರುವ ಬಿಜೆಪಿ, ಆರೆಸ್ಸೆಸ್ ನವರು ಎಂದೂ ವಿವೇಕಾನಂದರ ಪಥದಲ್ಲಿ ಹೆಜ್ಜೆ ಇರಿಸಿಲ್ಲ ಎಂದು ಜಗದೀಶ್ ಸದಂ ವಾಗ್ದಾಳಿ ನಡೆಸಿದರು.ದೇವರು, ಧರ್ಮವನ್ನು ದುರ್ಬಳಕೆ ಮಾಡಿಕೊಂಡ ರೀತಿಯಲ್ಲೇ ಸ್ವಾಮಿ ವಿವೇಕಾನಂದರನ್ನು ದುರ್ಬಳಕೆ ಮಾಡಿಕೊಂಡರು. ಈ ಲೋಕಸಭೆ ಚುನಾವಣೆಯಲ್ಲಿ ರಾಮ ಮಂದಿರದ ಹೆಸರಲ್ಲಿ ರಾಜಕಾರಣ ಮಾಡಲು ಯತ್ನಿಸಿ ಸ್ವತಃ ಅಯೋಧ್ಯೆಯಲ್ಲೇ ಸೋತರು. ಈ ಕಾರಣಕ್ಕಾಗಿ ಬಿಜೆಪಿಯವರು ಶ್ರೀರಾಮನನ್ನೇ ನಿಂದಿಸುತ್ತಿದ್ದಾರೆ.

ಜನತೆ ಇಂತಹ ವಿಚಾರಗಳನ್ನು ಸೂಕ್ಷ್ಮವಾಗಿ ಗಮನಿಸಬೇಕು. ಮೊದಲು ಭಗತ್ ಸಿಂಗ್ ಹೆಸರನ್ನು ಎತ್ತುತ್ತಿದ್ದರು. ಕ್ರಮೇಣ ಭಗತ್ ಸಿಂಗ್ ಅವರ ಬದುಕಿನ ಹೋರಾಟಕ್ಕೂ ತಮ್ಮ ಹೇರಿಕೆಯ ಹಿಂದುತ್ವದ ಸಿದ್ಧಾಂತಕ್ಕೂ ಸರಿ ಹೊಂದದ ಕಾರಣ ಭಗತ್ ಸಿಂಗ್ ಅವರನ್ನು ಕೈಬಿಟ್ಟರು. ಸ್ವಾಮಿ ವಿವೇಕಾನಂದರ ಬದುಕಿಗೂ ಬಿಜೆಪಿಗರ ಹಿಂದುತ್ವದ ಸಿದ್ಧಾಂತಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ಹಾಗಾಗಿ ಅವರ ಹಾದಿಯನ್ನು ಎಂದೂ ತುಳಿಯದ ಬಿಜೆಪಿಗರು ಈಗೀಗ ಸ್ವಾಮಿ ವಿವೇಕಾನಂದರ ಹೆಸರನ್ನೇ ಹೇಳುತ್ತಿಲ್ಲ. ಬಿಜೆಪಿಗೆ ವಿವೇಕಾನಂದರ ಬಗ್ಗೆ ನಿಜಕ್ಕೂ ಗೌರವವಿದ್ದರೆ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು