LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ವಿಶ್ವಮಟ್ಟದಲ್ಲೂ ಸದ್ದು ಮಾಡಿದ ಬೆಂಗಳೂರು ಟ್ರಾಫಿಕ್

ಬೆಂಗಳೂರು: ಸದಾ ವಾಹನ ದಟ್ಟಣೆ, ಟ್ರಾಫಿಕ್ ಜಂಜಾಟದ ಮೂಲಕ ಸಿಟಿ ಜನರನ್ನ ಕಂಗಾಲಾಗಿಸಿದ್ದ ಬೆಂಗಳೂರಿನ ಟ್ರಾಫಿಕ್ ಜಾಮ್ ಭೂತ ಇದೀಗ ವಿಶ್ವಮಟ್ಟದಲ್ಲೂ ಸದ್ದು ಮಾಡುತ್ತಿದೆ. ನೆದರ್ ಲ್ಯಾಂಡ್ ನ ಲೋಕೆಷನ್ ಟೆಕ್ನಾಲಜಿ ಸಂಸ್ಥೆ ಟಾಮ್ ಟಾಮ್ ಬಿಡುಗಡೆ ಮಾಡಿರೋ ವಿಶ್ವದ ಅತಿಹೆಚ್ಚು ಸ್ಲೋ ಮೂವಿಂಗ್ ಟ್ರಾಫಿಕ್ ಹೊಂದಿರುವ ನಗರಗಳ ಪಟ್ಟಿಯಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿಗೆ ಮೂರನೇ ಸ್ಥಾನ ಸಿಕ್ಕಿದೆ. ಈ ಮೂಲಕ ಬೆಂಗಳೂರಿನ ಟ್ರಾಫಿಕ್ ಸಮಸ್ಯೆಯನ್ನ ವಿಶ್ವಮಟ್ಟದಲ್ಲಿ ಅನಾವರಣ ಮಾಡಿದೆ.

ಸದ್ಯ ವಿಶ್ವದ ಪ್ರಮುಖ ನಗರಗಳ ಟ್ರಾಫಿಕ್ ದಟ್ಟಣೆ ಬಗ್ಗೆ ಅಧ್ಯಯನ ನಡೆಸಿದ್ದ ಟಾಮ್ ಟಾಮ್ ಸಂಸ್ಥೆ, ಭಾರತದ ಮೂರು ನಗರಗಳಲ್ಲಿ ಅತಿಹೆಚ್ಚು ಟ್ರಾಫಿಕ್ ಇರುವುದಾಗಿ ವರದಿ ರಿಲೀಸ್ ಮಾಡಿದೆ. ಟಾಮ್ ಟಾಮ್ ವರದಿಯಲ್ಲಿ ಕಲ್ಕತ್ತಾ, ಪುಣೆ ಹಾಗೂ ಬೆಂಗಳೂರು ಅತಿಹೆಚ್ಚು ಸಂಚಾರ ದಟ್ಟಣೆ ಹೊಂದಿರುವುದಾಗಿ ವರದಿಯಿಂದ ತಿಳಿದುಬಂದಿದೆ. ಇತ್ತ ರಾಜಧಾನಿಯಲ್ಲಿ ಕಳೆದ ವರ್ಷಕ್ಕಿಂತ ಈ ಬಾರೀ ವಾಹನ ದಟ್ಟಣೆ ಮತ್ತಷ್ಟು ಹೆಚ್ಚಾಗಿರುವ ವರದಿ ಬಹಿರಂಗವಾಗಿದ್ದು, ಬೆಂಗಳೂರಿನಲ್ಲಿ 10 ಕಿಲೋಮೀಟರ್ ದೂರ ತಲುಪೋಕೆ 34 ನಿಮಿಷ 10 ಸೆಕೆಂಡ್ ಸಮಯ ಬೇಕಿದೆ ಎಂದು ವರದಿ ತಿಳಿಸಿದೆ. ಅಲ್ಲದೇ ರಾಜಧಾನಿಯ ಜನರು ವರ್ಷದಲ್ಲಿ ಐದು ದಿನಗಳಷ್ಟು ಸಮಯವನ್ನ ಟ್ರಾಫಿಕ್ ನಲ್ಲೇ ಕಳೆಯುತ್ತಿರುವುದು ವರದಿ ಹೇಳಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು