LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ವಿಶ್ವ ಕನ್ನಡ ಹಬ್ಬಕ್ಕೆ ಸಿಂಗಾಪುರ ಕನ್ನಡ ಸಂಘ ಹಾಗೂ ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಒಪ್ಪಂದದ ಸಹಿ

ಸಿಂಗಾಪುರದಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಆಯೋಜಿಸಲಿರುವ ವಿಶ್ವ ಕನ್ನಡ ಹಬ್ಬದ ಪೂರ್ವಬಾವಿ ಸಿದ್ಧತೆ ಹಾಗೂ ಪತ್ರಿಕಾಗೋಷ್ಠಿ ನಡೆಸಲು ಅಧ್ಯಕ್ಷರಾದ ಶಿವಕುಮಾರ್ ನಾಗರ ನವಿಲೆಯವರು ಸಿಂಗಪುರಕ್ಕೆ ಭೇಟಿ ನೀಡಿ ಅಲ್ಲಿನ ಸಿಂಗಪುರ ಕನ್ನಡ ಸಂಘದ ಅಧ್ಯಕ್ಷ ವೆಂಕಟರತ್ನಯ್ಯ ಹಾಗೂ ಉಪಾಧ್ಯಕ್ಷ ಶಿವಕುಮಾರ್ ರವರೊಂದಿಗೆ ವಿಶ್ವ ಕನ್ನಡ ಹಬ್ಬದ ಕುರಿತು ಸುದೀರ್ಘ ಚರ್ಚೆ ನಡೆಸಿ ಮಹತ್ತರ ತೀರ್ಮಾನಗಳನ್ನು ಕೈಗೊಳ್ಳಲಾಯಿತು.

ಕನ್ನಡ ನಾಡು ನುಡಿಗಾಗಿ ಸೇವೆ ಸಲ್ಲಿಸಿರುವ ಸಾಧಕರಿಗೆ 'ವಿಶ್ವಮಾನ್ಯ ಪ್ರಶಸ್ತಿ' ನೀಡುವ ಕುರಿತು ತಿಳಿಸಲಾಯಿತು. ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಸಂಪೂರ್ಣ ಯಶಸ್ವಿಗೆ ಸಿಂಗಪುರ ಕನ್ನಡ ಸಂಘದೊಂದಿಗೆ ಒಪ್ಪಂದದ ಮೂಲಕ ಕಾರ್ಯಕ್ರಮ ಸಂಪೂರ್ಣ ಯಶಸ್ವಿಗೆ ಅಧ್ಯಕ್ಷರಿಬ್ಬರೂ ಸಹಿ ಮಾಡಿದರು. ಸಭೆಯಲ್ಲಿ ಭಾಗವಹಿಸಿದ ಕನ್ನಡ ಸಂಘದ ಪದಾಧಿಕಾರಿಗಳು ಕನ್ನಡ ಭಾವುಟವನ್ನು ಹಿಡಿದು ಬೆಂಬಲ ಸೂಚಿಸಿದರು.

ಹಾಗೆಯೇ ಕಾರ್ಯಕ್ರಮಕ್ಕೆ ನಾವೆಲ್ಲರೂ ಕನ್ನಡ ತಾಯಿಯ ಸೇವೆಗೆ ತನು ಮನ ಅರ್ಪಿಸಿ ದುಡಿಯುವುದಾಗಿ ಅಧ್ಯಕ್ಷರಿಗೆ ತಿಳಿಸಿದರು. ನಂತರ ಸ್ಥಳ ವೀಕ್ಷಣೆ ಹಾಗೂ ಸಭಾಂಗಣ ವೀಕ್ಷಿಸಿ ಕಾರ್ಯಕ್ರಮದ ಸ್ಥಳ ನಿಗಧಿ ಮಾಡಲಾಯಿತು. ಅಧ್ಯಕ್ಷರು ಸಿಂಗಾಪುರದಲ್ಲಿ ಪತ್ರಿಕಾ ಗೋಷ್ಠಿಯನ್ನು ಏರ್ಪಡಿಸಿ ಕಾರ್ಯಕ್ರಮದ ಉದ್ದೇಶ ಹಾಗೂ ರೂಪುರೇಶೆಗಳನ್ನು ತಿಳಿಸಿದರು. ವಿಶ್ವ ಕನ್ನಡ ಹಬ್ಬದ ಮೂಲ ದ್ಯೇಯ ಅನಿವಾಸಿ ಕನ್ನಡಿಗರ ಹಾಗೂ ಮೂಲ ಕನ್ನಡಿಗರ ಹೃದಯ ಬೆಸೆಯುವುದು ಹಾಗೂ ನಾಡಿನ ಭಾಷಾ ಪರಂಪರೆಯನ್ನು ವಿಶ್ವಕ್ಕೆ ತಿಳಿಸುವುದಾಗಿದೆ.

ಈ ಕಾರ್ಯಕ್ರಮಕ್ಕೆ ಸಿಂಗಪುರದ ಕನ್ನಡಿಗರ ಸಹಕಾರ ಅಗತ್ಯವಾಗಿದ್ದು, ಕನ್ನಡ ಹಬ್ಬಕ್ಕೆ ಎಲ್ಲರೂ ಕೈ ಜೋಡಿಸಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ವಿಶ್ವ ಕನ್ನಡ ಹಬ್ಬದ ಪದಾಧಿಕಾರಿಗಳಾದ ಸುನೀಲ್, ರಜತ್ ಹಾಗೂ ಸಿಂಗಾಪುರ ಕನ್ನಡ ಸಂಘದ ಪದಾಧಿಕಾರಿಗಳಾದ ಸುದೀಪ್ ಪೆರ್ಡೂರ್, ಲಕ್ಷ್ಮಿ ಶ್ರೀ, ರಮ್ಯಾ ಎಸ್.ವೈ, ಶ್ರೀನಿವಾಸ್ ಕೆ.ಜೆ, ಶ್ರೀಕಾಂತ್ ಪುರುಷೋತ್ತಮ, ನಿಖಿತಾ ಪ್ರಸಾದ್ ಮುಂತಾದವರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು