LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ವಿಶ್ವ ಗಣ್ಯರೊಂದಿಗೆ ಪ್ರಧಾನಿ ಮೋದಿ ಸಂವಾದ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನಿನ್ನೆ ವಲ್ರ್ಡ್ ಆಡಿಯೋ-ವಿಶುವಲ್ ಅಂಡ್ ಎಂಟರ್‍ಟೇನ್‍ಮೆಂಟ್ ಸಮ್ಮಿಟ್ ಸಲಹಾ ಮಂಡಳಿಯ ವಿಸ್ತೃತ ಸಭೆಯ ಅಧ್ಯಕ್ಷತೆ ವಹಿಸಿ ವಿಶ್ವದ ಗಣ್ಯರೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಂವಾದ ನಡೆಸಿದರು. ಸಂವಾದದಲ್ಲಿ ಭಾಗಿಯಾದ ಗಣ್ಯರು ವೇವ್ಸ್ ಶೃಂಗಸಭೆಯ ಸಲಹಾ ಮಂಡಳಿಯ ಭಾಗವಾಗಿದ್ದಾರೆ.

ಪ್ರಧಾನಿಯವರು ಸಂವಾದ ನಡೆಸಿದ ಗಣ್ಯರಲ್ಲಿ ನಟರಾದ ಅಮಿತಾಭ್ ಬಚ್ಚನ್, ದಿಲ್ಜಿತ್ ದೋಸಾಂಜ್, ರಜನಿಕಾಂತ್, ಶಾರುಖ್ ಖಾನ್, ರಣಬೀರ್ ಕಪೂರ್, ಚಿರಂಜೀವಿ, ಅನಿಲ್ ಕಪೂರ್, ಅಕ್ಷಯ್ ಕುಮಾರ್, ಅನುಪಮ್ ಖೇರ್, ಎ.ಆರ್. ರೆಹಮಾನ್, ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ, ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ, ಮಹೀಂದ್ರಾ ಮತ್ತು ಮಹೀಂದ್ರಾ ಅಧ್ಯಕ್ಷ ಆನಂದ್ ಮಹೀಂದ್ರಾ ಮತ್ತು ಇತರರು ಸೇರಿದ್ದರು.

ಫೆಬ್ರವರಿ 5 ರಿಂದ ಫೆಬ್ರವರಿ 9 ರವರೆಗೆ ಮೊದಲ ವಿಶ್ವ ಆಡಿಯೋ-ವಿಶುವಲ್ ಮನರಂಜನಾ ಶೃಂಗಸಭೆಯನ್ನು ಭಾರತದಲ್ಲಿ ಆಯೋಜಿಸಲಾಗುತ್ತಿದೆ.ಈ ಸಭೆಯ ಕುರಿತು ಪ್ರಧಾನಿ ಮೋದಿ ಮೈಕ್ರೋ ಬ್ಲಾಗಿಂಗ್ ತಾಣ ಎಕ್ಸ್‍ನಲ್ಲಿ ಸಂದೇಶ ಪ್ರಕಟಿಸಿದ್ದು, ಮನರಂಜನೆ, ಸೃಜನಶೀಲತೆ ಮತ್ತು ಸಂಸ್ಕೃತಿಯ ಜಗತ್ತನ್ನು ಒಟ್ಟುಗೂಡಿಸುವ ಜಾಗತಿಕ ಶೃಂಗಸಭೆಯಾದ ವೇವ್ಸ್ ಸಲಹಾ ಮಂಡಳಿಯ ವಿವರವಾದ ಸಭೆ ಇದೀಗ ಮುಕ್ತಾಯಗೊಂಡಿದೆ. ಸಲಹಾ ಮಂಡಳಿಯ ಸದಸ್ಯರು ವಿವಿಧ ಕ್ಷೇತ್ರಗಳ ಪ್ರಖ್ಯಾತ ವ್ಯಕ್ತಿಗಳಾಗಿದ್ದು, ಅವರು ತಮ್ಮ ಬೆಂಬಲವನ್ನು ಪುನರುಚ್ಚರಿಸಿದ್ದಾರೆ. ಮಾತ್ರವಲ್ಲದೆ, ಭಾರತವನ್ನು ಜಾಗತಿಕ ಮನರಂಜನಾ ಕೇಂದ್ರವನ್ನಾಗಿ ಮಾಡುವ ನಮ್ಮ ಪ್ರಯತ್ನಗಳನ್ನು ಹೇಗೆ ಮುಂದುವರಿಸುವುದು ಎಂಬುದರ ಕುರಿತು ಅಮೂಲ್ಯವಾದ ಸಲಹೆಗಳನ್ನು ಹಂಚಿಕೊಂಡಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.

ಈ ಸಂವಾದವು ನಾವೀನ್ಯತೆ, ಜಾಗತಿಕ ನಾಯಕತ್ವ, ಭಾರತದ ಸಾಂಸ್ಕೃತಿಕ ಮತ್ತು ತಾಂತ್ರಿಕ ಪ್ರಭಾವ ಮತ್ತು ವಿಶ್ವ ವೇದಿಕೆಯಲ್ಲಿ ಭಾರತದ ಸ್ಥಾನವನ್ನು ಹೆಚ್ಚಿಸುವ ತಂತ್ರಗಳ ಮೇಲೆ ಕೇಂದ್ರೀಕರಿಸುವ ಗುರಿಯನ್ನು ಹೊಂದಿದೆ. ವೇವ್ಸ್ ಶೃಂಗಸಭೆಯು ವಿವಿಧ ವಲಯಗಳ ಗಣ್ಯ ವೃತ್ತಿಪರರನ್ನು ಒಟ್ಟುಗೂಡಿಸುತ್ತದೆ ಮತ್ತು ಅಂತರ-ಕೈಗಾರಿಕಾ ಸಹಯೋಗವನ್ನು ಬೆಳೆಸುವ ಮತ್ತು ಡಿಜಿಟಲ್ ಮತ್ತು ಸೃಜನಶೀಲ ಆರ್ಥಿಕತೆಯಲ್ಲಿ ಭಾರತದ ಬೆಳವಣಿಗೆಯನ್ನು ವೇಗಗೊಳಿಸುವ ಗುರಿಯನ್ನು ಹೊಂದಿದೆ.

ಭಾರತದ ಸೃಜನಶೀಲ ಮತ್ತು ಮಾಧ್ಯಮ ಆರ್ಥಿಕತೆಯನ್ನು ಉತ್ತೇಜಿಸಲು ಮತ್ತು ಬೆಳೆಸಲು ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ವೇವ್ಸ್ ವಲ್ರ್ಡ್ ಆಡಿಯೋ-ವಿಶುವಲ್ ಅಂಡ್ ಎಂಟರ್‍ಟೇನ್‍ಮೆಂಟ್ ಸಮ್ಮಿಟ್ 2025 ಅನ್ನು ಆಯೋಜಿಸುತ್ತಿದೆ. ಫೆಬ್ರವರಿ 5-9 ರವರೆಗೆ ನಡೆಯಲಿರುವ ವೇವ್ಸ್ ಶೃಂಗಸಭೆಯ ಭಾಗವಾಗಿ, ಸಚಿವಾಲಯವು ಕ್ರಿಯೇಟ್ ಇನ್ ಇಂಡಿಯಾ ಚಾಲೆಂಜ್, ಸೀಸನ್ 1 ಅನ್ನು ಸಹ ಪ್ರಾರಂಭಿಸುತ್ತಿದೆ.

 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು