LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ವಿಶ್ವ ಚೆಸ್ ಚಾಂಪಿಯನ್ ಶಿಪ್ ಗೆದ್ದ 18 ಹರೆಯದ ಯುವ ತಾರೆ ಡಿ ಗುಕೇಶ್!

18ರ ಹರೆಯದ ಭಾರತದ ಯುವ ಚೆಸ್ ತಾರೆ ಡಿ ಗುಕೇಶ್ ಅವರು ವಿಶ್ವಚಾಂಪಿಯನ್ ಶಿಪ್ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಈ ಪ್ರಶಸ್ತಿಯನ್ನು ಗೆದ್ದ ವಿಶ್ವದ ಅತ್ಯಂತ ಕಿರಿಯ ಮತ್ತು ಭಾರತದ ಎರಡನೇ ಚೆಸ್ ಪಟು ಎಂಬ ಗೌರವಕ್ಕೂ ಅವರು ಪಾತ್ರರಾಗಿದ್ದಾರೆ.ಸಿಂಗಾಪುರದಲ್ಲಿ ನಡೆದ ಚಾಂಪಿಯನ್ ಶಿಪನ್ ಪಂದ್ಯಾವಳಿಯಲ್ಲಿ ಅವರು ಚೀನಾದ ಡಿಂಗ್ ಲಿರಿನ್ ಅವರನ್ನು ಸೋಲಿಸುವ ಮೂಲಕ ಅವರು ಭಾರತೀಯ ಚೆಸ್ ನಲ್ಲಿ ಹೊಸ ಅಧ್ಯಾಯ ಬರೆದಿದ್ದಾರೆ. ಈ ಹಿಂದೆ ಭಾರತದ ಗ್ರಾಂಡ್ ಮಾಸ್ಟರ್ ವಿಶ್ವನಾಥನ್ ಆನಂದ್ ಅವರು ವಿಶ್ವ ಚೆಸ್ ಚಾಂಪಿಯನ್ ಶಿಪ್ ಅನ್ನು 5 ಬಾರಿ ಗೆದ್ದುಕೊಂಡಿದ್ದರು.

ಅತ್ಯಂತ ಕಿರಿಯ ಚೆಸ್ ದೊರೆ 18ರ ಹರೆಯದ ಗುಕೇಶ್ ಅವರು ವಿಶ್ವ ಚೆಸ್ ದಂತಕತೆಗಳಾದ ಗ್ಯಾರಿ ಕ್ಯಾಸ್ಪರೋವ್ ಮತ್ತು ಮಾಜಿ ವಿಶ್ವ ಚಾಂಪಿಯನ್ ಮ್ಯಾಗ್ನಸ್ ಕಾರ್ಲ್ ಸನ್ ಅವರ ದಾಖಲೆಯನ್ನೂ ಮುರಿದಿದ್ದಾರೆ. ಕ್ಯಾಸ್ಪರೋವ್ ಅವರು 1985ರಲ್ಲಿ ವಿಶ್ವ ಚಾಂಪಿಯನ್ ಶಿಪ್ ಗೆದ್ದಾಗ ಅವರಿಗೆ 22 ವರ್ಷ ವಯಸ್ಸಾಗಿತ್ತು. ಅದೇ ರೀತಿ ಕಾರ್ಲ್ ಸನ್ ಅವರು 2003ರಲ್ಲಿ ಗೆದ್ದಾಗಲೂ ಅಷ್ಟೇ ವಯಸ್ಸಾಗಿತ್ತು. ಇದೀಗ ಗುಕೇಶ್ ಅವರು ಈ ಇಬ್ಬರು ಮಹಾನ್ ಚೆಸ್ ಪಟುಗಳ ದಾಖಲೆಯನ್ನು ಮೀರಿ ನಿಂತಿದ್ದಾರೆ.

ವಿಶ್ವನಾಥನ್ ಆನಂದ್ ಅವರು 2000ದಲ್ಲಿ ತಮ್ಮ 31ನೇ ವಯಸ್ಸಿನಲ್ಲಿ ಮೊದಲ ಬಾರಿಗೆ ವಿಶ್ವ ಚೆಸ್ ಚಾಂಪಿಯನ್ ಶಿಪ್ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದರು. ಆ ಬಳಿಕ 2007, 2008, 2010 ಮತ್ತು 2012ರಲ್ಲಿ ಪ್ರಶಸ್ತಿ ಗೆದ್ದುಕೊಂಡಿದ್ದರು. ಭಾರತಕ್ಕೆ ಇದೀಗ ಸರಿಯಾಗಿ 12 ವರ್ಷಗಳ ನಂತರ ಚೆಸ್ ನಲ್ಲಿ ವಿಶ್ವ ಪ್ರಶಸ್ತಿ ಲಭಿಸಿದೆ.ಗಣ್ಯರಿಂದ ಶುಭಾಶಯ ಗುಕೇಶ್ ಅವರ ವಿಶ್ವವಿಜಯಕ್ಕೆ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಸಚಿವ ಮುನ್ಸುಕ್ ಮಾಂಡವೀಯ, ಮಾಜಿ ವಿಶ್ವ ಚಾಂಪಿಯನ್ ವಿಶ್ವನಾಥನ್ ಆನಂದ್, ಮಾಜಿ ಒಲಿಂಪಿಕ್ ಪದಕ ವಿಜೇತ ಅಭಿನವ್ ಬಿಂದ್ರಾ ಅವರು ಶುಭಾಶಯ ಕೋರಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು