LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chikkaballapura

ವಿಶ್ವ ವಿಕಲಚೇತನರ ದಿನಾಚರಣೆ

ಚಿಕ್ಕಬಳ್ಳಾಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆ ಹಾಗೂ ವಿಕಲಚೇತನರ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು, ಚಿಕ್ಕಬಳ್ಳಾಪುರ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆಯನ್ನು ಡಿಸೆಂಬರ್ 3 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಪತ್ರಕರ್ತರ ಭವನದಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಉನ್ನತ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಸುಧಾಕರ್ ಅವರು ನೆರವೇರಿಸಲಿದ್ದಾರೆ.
ಕಾರ್ಯಕ್ರಮ ಉಪಸ್ಥಿತಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ರವರು ವಹಿಸಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಿಕ್ಕಬಳ್ಳಾಪುರ ಶಾಕರಾದ ಪಿ.ಇ ಪ್ರದೀಪ್ ಈಶ್ವರ್ ಅವರು ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ಕೆ.ಸುಧಾಕರ್, ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಎಂ. ಮಲ್ಲೇಶ್ ಬಾಬು, ಶಾಸಕರಾದ ಎಸ್.ಎನ್. ಸುಬ್ಬಾರೆಡ್ಡಿ, ಬಿ.ಎನ್. ರವಿಕುಮಾರ್, ಕೆ.ಹೆಚ್. ಪುಟ್ಟಸ್ವಾಮಿಗೌಡ, ಚಿದಾನಂದ ಎಂ. ಗೌಡ, ಎಂ.ಎಲ್. ಅನಿಲ್ ಕುಮಾರ್, ಡಿ.ಟಿ. ಶ್ರೀನಿವಾಸ್, ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎನ್. ಕೇಶವರೆಡ್ಡಿ, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್, ನಗರಸಭೆ ಅಧ್ಯಕ್ಷ ಎ.ಗಜೇಂದ್ರ ರವರು ಭಾಗವಹಿಸಲಿದ್ದಾರೆ.

ಅತಿಥಿಗಳಾಗಿ ಸರ್ಕಾರದ ಕಾರ್ಯದರ್ಶಿಗಳು ಮೂಲಭೂತ ಸೌಲಭ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿ ಡಾ. ಎನ್. ಮಂಜುಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ. ಶಮ್ಲಾ ಇಕ್ಬಾಲ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕ ಟಿ. ರಾಘವೇಂದ್ರ ರವರು ಭಾಗವಹಿಸಲಿದ್ದಾರೆ.

ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು ಸರ್ಕಾರಿ ನೌಕರರ ಸಂಘ ಹಾಗೂ ಇತರೆ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಮಸ್ತ ನಾಗರಿಕರು ಹಾಗೂ ಜಿಲ್ಲೆಯ ಎಲ್ಲಾ ವಿಕಲಚೇತನರಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಘ ಸಂಸ್ಥೆಗಳು ಭಾಗವಹಿಸಲಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು