LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ವೀರಗಾಸೆ ಯುವಕನಾಗಿ ವಿಜಯ ರಾಘವೇಂದ್ರ `ರುದ್ರಾಭಿಷೇಕಂ' ಚಿತ್ರಕ್ಕೆ ಚಾಲನೆ

ನಮ್ಮನಾಡಿನ ಸಾಂಸ್ಕೃತಿಕ ಇತಿಹಾಸ, ಆಚರಣೆಗಳು, ಕಲೆಯನ್ನು ಪ್ರತಿಬಿಂಬಿಸುವ ಒಂದಷ್ಟು ಚಲನಚಿತ್ರಗಳು ಈಗಾಗಲೇ ನಿರ್ಮಾಣವಾಗಿ ಪ್ರೇಕ್ಷಕರನ್ನು ರಂಜಿಸಿವೆ. ಅದೇ ಹಾದಿಯಲ್ಲಿ ಇದೀಗ ಮತ್ತೊಂದು ಸಿನಿಮಾ ಸೆಟ್ಟೇರಿದೆ. ಪ್ರತಿಭಾವಂತ ನಟ ವಿಜಯ ರಾಘವೇಂದ್ರ ಅವರು ಒಬ್ಬ ವೀರಗಾಸೆ ಕಲಾವಿದನಾಗಿ ಕಾಣಿಸಿಕೊಳ್ಳುತ್ತಿರುವ ಚಿತ್ರ ರುದ್ರಾಭಿಷೇಕಂ. ಈ ಚಿತ್ರದ ಮುಹೂರ್ತ ಸಮಾರಂಭ ದೇವನಹಳ್ಳಿ ಬಳಿಯ ವಿಜಯಪುರದ ಫಾರಂ ಹೌಸ್ ಒಂದರಲ್ಲಿ ಸರಳವಾಗಿ ನೆರವೇರಿತು.

ಮುಹೂರ್ತದ ನಂತರ ಮಾತನಾಡಿದ ವಿಜಯ ರಾಘವೇಂದ್ರ, ಇನ್ನೊಂದು ಒಳ್ಳೆಯ ಪ್ರಯತ್ನ. ನಮ್ಮ ನಾಡಿನ ಸಾಂಸ್ಕೃತಿಕ ಹಿನ್ನೆಲೆಯ ಜತೆಗೆ ಒಂದು ಸಣ್ಣ ಇತಿಹಾಸ, ಅದರ ವೈಭವವನ್ನು ತೆಗೆದುಕೊಂಡು ಹೋಗುವ ಕಥೆ. ಕಮರ್ಷಿಯಲ್ ಎಲಿಮೆಂಟ್ ಒಳಗೊಂಡಿದ್ದರೂ ಕೂಡ ಸಾಕಷ್ಟು ಡಿವೈನಿಟಿ ಇರುವ ಚಿತ್ರ. ನಿರ್ದೇಶಕರು ವೀರಗಾಸೆ ಕಲೆಯ ಹಿನ್ನೆಲೆ ಇಟ್ಟುಕೊಂಡು ಒಂದೊಳ್ಳೆ ಕಾನ್ಸೆಪ್ಟ್ ರೆಡಿ ಮಾಡಿಕೊಂಡಿದ್ದಾರೆ. ಇದೇ ಮೊದಲ ಬಾರಿಗೆ ನಾನು ಒಬ್ಬ ವೀರಗಾಸೆ ಕಲಾವಿದನಾಗಿ ಕಾಣಿಸಿಕೊಳ್ಳುತ್ತಿದ್ದೇನೆ.

ಅಷ್ಟೇ ಅಲ್ಲ ಚಿತ್ರದಲ್ಲಿ ನನಗೆ ಸಾಕಷ್ಟು ಗೆಟಪ್ ಗಳಿವೆ ಎಂದು ಹೇಳಿದರು. ನಿರ್ದೇಶಕ ವಸಂತ್ ಕುಮಾರ್ ಮಾತನಾಡುತ್ತ ನಾನು ಕಳೆದ ಎರಡುವರೆ ದಶಕಗಳಿಂದಲೂ ಚಿತ್ರರಂಗದಲ್ಲಿದ್ದೇನೆ. ಹಲವಾರು ಚಿತ್ರಗಳಿಗೆ ಸಹನಿರ್ದೇಶನ, ಕಥೆ, ಚಿತ್ರಕಥೆ ಬರೆದಿದ್ದೇನೆ. ಇದೊಂದು ಟ್ರೆಡಿಷನಲ್ ಸಬ್ಜೆಕ್ಟ್. ನಮ್ಮ ನಾಡಿನ ಜನಪದ ಹಿನ್ನೆಲೆ ಇಟ್ಟುಕೊಂಡು, ನೂರಾರು ವರ್ಷಗಳ ಇತಿಹಾಸ ಇರುವ ಒಂದು ಕಲೆಯನ್ನು ಈ ಚಿತ್ರದ ಮೂಲಕ ಹೇಳಹೊಟಿದ್ದೇನೆ. ಒಂದೂವರೆ ವರ್ಷದಿಂದ ಸಾಕಷ್ಟು ರೀಸರ್ಚ್ ಮಾಡಿ ಈ ಕಥೆ ರೆಡಿ ಮಾಡಿಕೊಂಡಿದ್ದೇನೆ. ಕಥೆ ಮಾಡಿಕೊಂಡು ಒಂದಷ್ಟು ಮಠಾಧೀಶರನ್ನು ಸಂಪರ್ಕಿಸಿದಾಗ ಅವರೆಲ್ಲ ಒಳ್ಳೆ ಪ್ರಯತ್ನ. ಗೆದ್ದೇ ಗೆಲ್ತೀಯ ಎಂದು ಶುಭ ಹಾರೈಸಿದರು.

ಈ ಕಥೆಯ ಮೂಲ ಹಂದರ ವೀರಭದ್ರ ದೇವರು. ಆತ ಹೇಗೆ ಬಂದ, ಆತ ಬರಲು ಕಾರಣವೇನು ಎಂಬುದನ್ನು ಇಲ್ಲಿ ಹೇಳುತ್ತಿದ್ದೇನೆ. ನಾನು ಕಥೆ ಮಾಡುವಾಗಲೇ ವಿಜಯ ರಾಘವೇಂದ್ರ ಅವರನ್ನು ವೀರಗಾಸೆ ಗೆಟಪ್ ನಲ್ಲಿ ಕಲ್ಪಿಸಿಕೊಂಡೆ. ಈ ಸಮಯದಲ್ಲಿ ನನ್ನ ಹಲವಾರು ಸ್ನೇಹಿತರು ನಿರ್ಮಾಣದಲ್ಲಿ ಕೈಜೋಡಿಸುತ್ತಿದ್ದಾರೆ. ಈ ಮೂಲಕ ನಾಡಿನ ಜನತೆಗೆ ಒಂದೊಳ್ಳೆ ಸಿನಿಮಾ ಕಟ್ಟಿ ಕೊಡಬೇಕೆಂದುಕೊಂಡುದ್ದೇನೆ.

ಮೊದಲ ಹಂತದಲ್ಲಿ ಇದೇ ಫಾರಂ ಹೌಸ್ ನಲ್ಲಿ 15 ದಿನ ಶೂಟ್ ಮಾಡುತ್ತಿದ್ದೇವೆ. ನಂತರ ಇಡೀ ಊರತುಂಬ ಆಲದಮರ, ಹಿಂದುಳಿದವರೇ ಇರುವಂಥ ಲೊಕೇಶನ್ ಹುಡುಕೊದಾಗ ಸಿಕ್ಕಿದ್ದೇ ಚಿಕ್ಕತದಮಂಗಲ. ಅಲ್ಲಿ ಜಾಸ್ತಿ ಇರುವುದೇ ವೀರಭದ್ರ ದೇವರ ಒಕ್ಕಲಿನವರು. ಅಲ್ಲಿ ಹೋಗಿ ಶೂಟಿಂಗ್ ಮಾಡಬೇಕೆಂದಾಗ ಇಡೀ ಊರ ಜನತೆ ನಮಗೆ ಸಹಕಾರ ಕೊಡ್ತಿದಾರೆ ಎಂದು ಹೇಳಿದರು.

ನಿರ್ದೇಶಕರ ಸ್ನೇಹಿತರಾದ ಜಯರಾಮಣ್ಣ, ಶಿವರಾಮ್, ಚಿದಾನಂದ್, ಹಡಪದ, ರಮೇಶ್, ಮಂಜುನಾಥ್, ಮುನಿಕೃಷ್ಣಪ್ಪ, ರವಿ, ಅಶ್ವಥ್, ಆನಂದ್ ಸೇರಿ ಫ್ಯಾನ್ ಇಂಡಿಯಾ ಕ್ರಿಯೇಶನ್ಸ್ ಬ್ಯಾನರ್ ಮೂಲಕ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ನಿರ್ದೇಶಕರ ಒಂದು ಒಳ್ಳೆಯ ಪ್ರಯತ್ನಕ್ಕೆ ನಾವೆಲ್ಲ ಕೈ ಜೋಡಿಸಿರುವುದಾಗಿ ಅವರು ಹೇಳಿಕೊಂಡರು.

ರುದ್ರಾಭಿಷೇಕಂ ಚಿತ್ರದ ನಾಯಕಿಯಾಗಿ ಮೈಸೂರು ಮೂಲದ ರಂಗಭೂಮಿ ಪ್ರತಿಭೆ ಪ್ರೇರಣಾ ನಟಿಸುತ್ತಿದ್ದಾರೆ. ಮತ್ತೊಬ್ಬ ದೈತ್ಯಪ್ರತಿಭೆ ಬಲ ರಾಜವಾಡಿ ಅವರು ಊರ ಗೌಡನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹಿರಿಯ ಸಂಗೀತ ನಿರ್ದೇಶಕ ವಿ. ಮನೋಹರ್ ಅವರು ಚಿತ್ರದ ನಾಲ್ಕು ಹಾಡುಗಳಿಗೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಅಲ್ಲದೆ ತಾರಕೇಶ್ವರ ಸೇರಿ ಅನೇಕ ಚಿತ್ರಗಳಿಗೆ ಕ್ಯಾಮೆರಾ ಹಿಡಿದಿರುವ ಮುತ್ತುರಾಜ್ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು