LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ವೈಜ್ಞಾನಿಕ ಪರಿಹಾರಕ್ಕೆ ರೈತರ ಪಟ್ಟು ಕೆಐಎಡಿಬಿ ಅಧಿಕಾರಿಗಳ ವಿರುದ್ಧ ದೊಡ್ಡಬಳ್ಳಾಪುರ ತಾಲ್ಲೂಕು ಕಚೇರಿ ಎದುರು ಬೃಹತ್ ಪ್ರತಿಭಟನೆ

ದೊಡ್ಡಬಳ್ಳಾಪುರ: ಕೊನಘಟ್ಟ ಬಳಿ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ವಶಪಡಿಸಿಕೊಳ್ಳುತ್ತಿರುವ ರೈತರ ಜಮೀನಿಗೆ ನ್ಯಾಯಯುತ ಹಾಗೂ ವೈಜ್ಞಾನಿಕ ಪರಿಹಾರ ನೀಡುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ. ರೈತರು ನಡೆಸುತ್ತಿರುವ ಹೋರಾಟ 176ನೇ ದಿನಕ್ಕೆ ಕಾಲಿಟ್ಟಿದ್ದರೂ ಕೆಐಎಡಿಬಿ ಅಧಿಕಾರಿಗಳು ರೈತರಿಗೆ ನೀಡುವ ಪರಿಹಾರದ ಕುರಿತು ಯಾವುದೇ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಆರೋಪಿಸಿದರು.

ವೈಜ್ಞಾನಿಕ ಬೆಲೆ ನಿಗಧಿಗೆ ಒತ್ತಾಯಿಸಿ ರೈತರು ಪ್ರತಿಭಟನಾ ಸ್ಥಳದಿಂದ ಎತ್ತಿನ ಗಾಡಿ, ಟ್ರ್ಯಾಕ್ಟರ್ ಗಳ ಜಾಥಾ ಮೂಲಕ ತಾಲೂಕು ಕಚೇರಿ ಮುಂಭಾಗ ಸೋಮವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಸರ್ಕಾರದ ಎಸ್‍ಆರ್ ಬೆಲೆ ಆಧಾರದ ಮೇಲೆ ಭೂ ದರ 1:4 ನಿಗದಿ ಮಾಡಿ ರೈತರನ್ನು ಉಳಿಸಿ ಎಂದು ಒತ್ತಾಯಿಸಿದರು.

ರೈತರು ತಲಾತಲಾಂತರಗಳಿಗೆ ಜೀವನಡೆಸಿಕೊಂಡು ಬಂದಿರುವ ಜೀವನಾಧಾರ ಕೃಷಿಯು ಜಮೀನುಗಳನ್ನು ಸೂಕ್ತ ಬೆಲೆ ನೀಡದೆ ಕಸಿದುಕೊಳ್ಳಲು ಹುನ್ನಾರ ನಡೆಸಿರುವುದು ಸರಿಯಲ್ಲ. ಇದನ್ನು ವಿರೋಧಿಸಿ ರೈತರು ಕಳೆದ 176 ದಿನಗಳಿಂದ ಸತತವಾಗಿ ಹೋರಾಟ ನಡೆಸುತ್ತಿದ್ದರೂ ಸಹ ಯಾವುದೇ ಪರಿಹಾರ ನೀಡದೆ ದಲ್ಲಾಳಿಗಳಂತೆ ವರ್ತಿಸುವ ಅಧಿಕಾರಿಗಳು ನಮ್ಮಲ್ಲಿರುವುದು ವಿಪರ್ಯಾಸ. ರೈತರು ಭೂಮಿ ಮಾರಾಟ ಮಾಡುತ್ತಿಲ್ಲ ಅದು ಒಂದು ರೀತಿ ದಾನ ಮಾಡಿದಂತೆ. ಅಧಿಕಾರಿಗಳು ಈ ವಿಚಾರ ಅರಿತು ರೈತರ ಪರ ನಿಲ್ಲಲಿ ಎಂದು ಒತ್ತಾಯಿಸಿದರು.

ಎಚ್.ಡಿ.ಕುಮಾರಸ್ವಾಮಿ ಸ್ಪಂದನೆ:
ಅಧಿಕಾರಿಗಳ ಧೋರಣೆ ಬಗ್ಗೆ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ ಕುಮಾರಸ್ವಾಮಿ ಅವರಿಗೆ ಮನವರಿಕೆ ಮಾಡಿಕೊಡಲಾಗಿದೆ. ಅವರು ಬೆಂಬಲವಾಗಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಕೆಐಎಡಿಬಿ ಭೂ ಪರಿಹಾರ ಧನ ವಿತರಣೆಯಲ್ಲಿ ರೈತರಿಗೆ ಅನ್ಯಾಯವಾಗದ ರೀತಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ರೈತರ ನಿಯೋಗ ಅವರನ್ನು ಸಂಪರ್ಕಿಸಿದ ದಿನವೇ ಕೆಐಎಡಿಬಿ ಅಧಿಕಾರಿಗಳಿಗೆ ದೂರವಾಣಿ ಮೂಲಕ ರೈತರಿಗೆ ಉತ್ತಮ ಬೆಲೆ ನೀಡುವಂತೆ ತಿಳಿಸಿದ್ದಾರೆ ಇನ್ನಾದರೂ ಅಧಿಕಾರಿಗಳು ಕ್ರಮಕ್ಕೆ ಮುಂದಾಗಬೇಕು ಎಂದು ಎಸ್.ಎಮ್. ಹರೀಶ್ಗೌಡ ತಿಸಿಳಿದರು.

ಪುನರ್ ಪರಿಶೀಲನೆ ಮಾಡಿ: ಸರ್ಕಾರದ ಮಾನದಂಡಗಳನ್ನು ಉಲ್ಲಂಘಿಸಿ ಭೂ ದರ ನಿಗಧಿ ಮಾಡಿರುವ ಹಿನ್ನಲೆ ರೈತರು ಕೆಐಎಡಿಬಿ ಅಧಿಕಾರಿಗಳ ವಿರುದ್ಧ 176 ದಿನಗಳಿಂದ ಹೋರಾಟ ಮಾಡುತ್ತಿದ್ದೇವೆ. ಹೋರಾಟದಿಂದ ರೈತರ ಪ್ರತಿ ಎಕರೆ ಭೂಮಿಗೆ ಅಧಿಕಾರಿಗಳು 20 ಲಕ್ಷ ರೂ. ಅಧಿಕ ಮೊತ್ತ ಘೋಷಣೆ ಮಾಡಿರುವುದು ಯಶಸ್ಸಿಗೆ ಪೂರಕವಾಗಿದೆ. ಆದರೆ ಕಾನೂನಾತ್ಮಕವಾಗಿಯೇ ಕೇಂದ್ರ ಸರ್ಕಾರ ಹೊರಡಿಸಿದ 2013ರ ಭೂ ಸ್ವಾಧೀನ ಕಾಯ್ದೆಯ ಮಾನದಂಡಗಳ ಪ್ರಕಾರ 1:4ರ ದರಕ್ಕೆ ಒತ್ತಾಯಿಸಿ ಹೋರಾಟ ಮಾಡುತ್ತಿದ್ದೇವೆ.

ಜಿಲ್ಲಾಧಿಕಾರಿ ಪುನರ್ ಪರಿಶೀಲನೆ ಮಾಡಿ ಸರ್ಕಾರಕ್ಕೆ ವರದಿ ನೀಡಿ ರೈತರಿಗೆ ಅನುಕೂಲಮಾಡಿಕೊಳ್ಳಬೇಕುಎಂದು ಕೊನಘಟ್ಟ ರೈತ ಮುಖಂಡ ಆನಂದ್ ಒತ್ತಾಯಿಸಿದರು.ಅಂತಿಮವಾಗಿ ಉಪವಿಭಾಗಾಧಿಕಾರಿ ಶ್ರೀನಿವಾಸ್ ಹಾಗೂ ಉಪನೋಂದಣಾಧಿಕಾರಿ ಅನುಪಮ ರವರಿಗೆ ಮನವಿ ಸಲ್ಲಿಸಿದರು.
ಈ ಪ್ರತಿಭಟನೆಯಲ್ಲಿ ಆದಿನಾರಾಯಣ ಹೊಸಹಳ್ಳಿ, ನಾಗದೇನಹಳ್ಳಿ,ಕೊನಘಟ್ಟ ಹಾಗೂ ಕೊಡಹಳ್ಳಿ ಗ್ರಾಮಗಳ ರೈತ ಮುಖಂಡರು,ರೈತರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು