LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ವೈವಾಹಿಕ ಜೀವನಕ್ಕೆ ಕಾಲಿರಿಸಿದ ಪಿವಿ ಸಿಂಧು

ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರು ಉದ್ಯಮಿ ವೆಂಕಟ್ ದತ್ತಾ ಸಾಯಿ ಅವರೊಂದಿಗೆ ಸಪ್ತಪದಿ ತುಳಿದಿದ್ದಾರೆ. ರಾಜಸ್ಥಾನದ ಉದಯಪುರದಲ್ಲಿ ಅದ್ದೂರಿಯಾಗಿ ನಡೆದ ಮದುವೆಯ ನಂತರ, ವಿವಾಹದಲ್ಲಿ ಕೆಲವು ಗಣ್ಯ ಅತಿಥಿಗಳು ಭಾಗವಹಿಸಿದ್ದರು.

ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಹಾಗೂ ಎರಡು ಬಾರಿಯ ಒಲಿಂಪಿಕ್ಸ್ ಪದಕ ವಿಜೇತೆ ಪಿವಿ ಸಿಂಧು ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ರಾಜಸ್ಥಾನದ ಉದಯಪುರದಲ್ಲಿ ಅದ್ದೂರಿಯಾಗಿ ನಡೆದ ಮದುವೆ ಸಮಾರಂಭದಲ್ಲಿ ಉದ್ಯಮಿ ವೆಂಕಟ್ ದತ್ತಾ ಸಾಯಿ ಅವರೊಂದಿಗೆ ಸಿಂಧು ಸಪ್ತಪದಿ ತುಳಿದಿದ್ದಾರೆ. ಪಿವಿ ಸಿಂಧು ಮತ್ತು ವೆಂಕಟ್ ಮದುವೆಯ ಮೊದಲ ಫೋಟೋ ಇದೀಗ ವೈರಲ್ ಆಗಿದ್ದು, ಇದರಲ್ಲಿ ಇಬ್ಬರ ಜೋಡಿ ತುಂಬಾ ಸುಂದರವಾಗಿ ಕಾಣಿಸುತ್ತಿದೆ. ಇವರಿಬ್ಬರ ಮದುವೆಗೆ ಅಭಿಮಾನಿಗಳು ಶುಭಕೋರುತ್ತಿದ್ದಾರೆ.

ಡಿಸೆಂಬರ್ 22 ರಂದೇ ಸಿಂಧು ಮತ್ತು ವೆಂಕಟ್ ಮದುವೆಯಾಗಿದ್ದಾರೆ. ಆದರೆ ಈ ವಿವಾಹ ಸಮಾರಂಭವನ್ನು ಅತ್ಯಂತ ಖಾಸಗಿಯಾಗಿ ಇರಿಸಲಾಗಿರುವುದರಿಂದ ಸಿಂಧು ತಮ್ಮ ಮದುವೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಇನ್ನೂ ಹಂಚಿಕೊಂಡಿಲ್ಲ. ಆದರೆ, ಈ ಮದುವೆಯಲ್ಲಿ ಭಾಗಿಯಾಗಿರುವ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ನವ ಜೋಡಿಯ ಮದುವೆಯ ಫೋಟೋವನ್ನು ತಮ್ಮ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದು ನವದಂಪತಿಗಳಿಗೆ ಶುಭಕೋರಿದ್ದಾರೆ.

ವಾಸ್ತವವಾಗಿಇದೇ ತಿಂಗಳ 14ರಂದು ಇಬ್ಬರ ನಿಶ್ಚಿತಾರ್ಥವೂ ನಡೆದಿತ್ತು. ಇದೀಗ ಕುಟುಂಬಸ್ಥರು, ಆತ್ಮೀಯ ಸ್ನೇಹಿತರು ಹಾಗೂ ವಿಶೇಷ ಅತಿಥಿಗಳ ಸಮ್ಮುಖದಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿರುವ ಈ ಜೋಡಿ ಮಂಗಳವಾರ ಹೈದರಾಬಾದ್‌ನಲ್ಲಿ ಅದ್ದೂರಿಯಾಗಿ ಆರತಕ್ಷತೆಯನ್ನು ಏರ್ಪಡಿಸಿದೆ. ಈ ಸಮಾರಂಭಕ್ಕೆ ದಂಪತಿಗಳಿಬ್ಬರು ಸಚಿನ್ ತೆಂಡೂಲ್ಕರ್ ಮತ್ತು ಪ್ರಧಾನಿ ನರೇಂದ್ರ ಮೋದಿಯಂತಹ ಸೆಲೆಬ್ರಿಟಿಗಳನ್ನು ಆಹ್ವಾನಿಸಿದ್ದಾರೆ.

ಪಿವಿ ಸಿಂಧು ಅವರ ಪತಿ ವೆಂಕಟ್ ದತ್ತಾ ಸಾಯಿ ಅವರು ಫೌಂಡೇಶನ್ ಆಫ್ ಲಿಬರಲ್ ಮತ್ತು ಮ್ಯಾನೇಜ್‌ಮೆಂಟ್ ಎಜುಕೇಶನ್‌ನಿಂದ ಲಿಬರಲ್ ಆರ್ಟ್ಸ್ ಅಂಡ್ ಸೈನ್ಸಸ್‌ನಲ್ಲಿ ಪದವಿ ಪಡೆದಿದ್ದಾರೆ. 2018 ರಲ್ಲಿ, ಅವರು ಫ್ಲೇಮ್ ವಿಶ್ವವಿದ್ಯಾಲಯದಿಂದ ಅಕೌಂಟಿಂಗ್ ಮತ್ತು ಫೈನಾನ್ಸ್‌ನಲ್ಲಿ ಬಿಬಿಎ ಮಾಡಿದರು. ಬೆಂಗಳೂರಿನ ಇಂಟರ್‌ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ಇನ್‌ಫರ್ಮೇಷನ್ ಟೆಕ್ನಾಲಜಿಯಿಂದ ಡಾಟಾ ಸೈನ್ಸ್ ಮತ್ತು ಮೆಷಿನ್ ಲರ್ನಿಂಗ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪ್ರಸ್ತುತ ಅವರು ಪೊಸಿಡೆಕ್ಸ್ ಟೆಕ್ನಾಲಜಿಯಲ್ಲಿ ಕಾರ್ಯನಿರ್ವಾಹಕ ನಿರ್ದೇಶಕರಾಗಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು