LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಶತಮಾನೋತ್ಸವ ಸಂಭ್ರಮ ಮಹಾತ್ಮ ಗಾಂಧಿ ಅಧ್ಯಕ್ಷತೆಯ ಕಾಂಗ್ರೆಸ್ ಅಧಿವೇಶನದ ನೆನಪಿನ ಕಾರ್ಯಕ್ರಮ

ಬೆಳಗಾವಿ: ಮಹಾತ್ಮಗಾಂಧಿಜೀಯವರು ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆವಹಿಸಿ ನೂರು ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಕಾಂಗ್ರೆಸ್ ಪಕ್ಷದ ವತಿಯಿಂದ ಶತಮಾನೋತ್ಸವ ಸಂಭ್ರಮದ ಕಾರ್ಯಕ್ರಮವನ್ನು ಆಚರಿಸಲಾಗುತ್ತಿದೆ.

ಇಂದು ಮಧ್ಯಾಹ್ನ 3 ಗಂಟೆಗೆ ಕಾಂಗ್ರೆಸ್ ಪಕ್ಷದ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ. ಈ ಸಂದರ್ಭದಲ್ಲಿ ಅಂಬೇಡ್ಕರ್ ಅವರ ಬಗ್ಗೆ ಸಂಸತ್‍ನಲ್ಲಿ ಕೇಂದ್ರ ಸಚಿವ ಅಮಿತ್ ಶಾ ಅವರು ಆಡಿರುವ ಮಾತುಗಳನ್ನು ವಿಷಯ ಚರ್ಚೆಗೆ ಬರಲಿದೆ ಎಂದು ಹೇಳಲಾಗಿದೆ.ಶತಮಾನೋತ್ಸವ ಕಾರ್ಯಕ್ರಮದ ಹಿನ್ನೆಲೆಲ್ಲಿ ಇಂದು ಬೆಳಗ್ಗೆಯಿಂದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಹಲವು ಕಾರ್ಯಕ್ರಮಗಳಿಗೆ ಚಾಲನೆ ನೀಡಿದ್ದಾರೆ.

ಗಂಗಾಧರ ರಾವ್ ದೇಶಪಾಂಡೆ ಸ್ಮಾರಕ ಭವನ, ಫೋಟೋ ಗ್ಯಾಲರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.ಇಂದು ಬೆಳಗಾವಿಯ ರಾಮತೀರ್ಥ ನಗರದಲ್ಲಿರುವ ಗಂಗಾಧರ ರಾವ್ ದೇಶಪಾಂಡೆ ಸ್ಮಾರಕ ಭವನ ಹಾಗೂ ಪೋಟೋ ಗ್ಯಾಲರಿಯನ್ನು ಉದ್ಘಾಟಿಸಿದ ಸಿಎಂ ಅವರು, ಭವನದಲ್ಲಿ ಇರುವ ಫೋಟೋಗಳನ್ನು ವೀಕ್ಷಣೆ ಮಾಡಿದರು.
ಬೆಳಗಾವಿಯ ಸರ್ದಾರ್ ಮೈದಾನದಲ್ಲಿ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಆಯೋಜಿಸಿರುವ ಖಾದಿ ಉತ್ಸವಕ್ಕೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದರು.

ಖಾದಿ ಉದ್ಯಮಕ್ಕೆ ಉತ್ತೇಜನ ನೀಡುವ ಸಲುವಾಗಿ ರಾಜ್ಯ ಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನ ಏರ್ಪಡಿಸಲಾಗಿದೆ.ನಮ್ಮ ಸರಸ್ ಮೇಳ, ನಮ್ಮ ಖಾದಿ ಉತ್ಸವ, ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಅಯೋಜಿಸಲಾಗಿದೆ.ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಸಚಿವರಾದ ಎಚ್.ಕೆ.ಪಾಟೀಲ್, ಡಾ.ಎಂ.ಸಿ.ಸುಧಾಕರ್, ಬೈರತಿ ಸುರೇಶ್, ಶರಣ್ ಪ್ರಕಾಶ್ ಪಾಟೀಲ್, ಹಿರಿಯರಾದ ಟಿ.ಬಿ.ಜಯಚಂದ್ರ, ಆರ್.ವಿ.ದೇಶಪಾಂಡೆ, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ್ ಹಟ್ಟಿಹೊಳಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು