LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಶಮಿ ಮಾರಕ ದಾಳಿಗೆ ನಡುಗಿದ ಬಾಂಗ್ಲಾ: ಭಾರತ ಭರ್ಜರಿ ಶುಭಾರಂಭ

ಮೊಹಮ್ಮದ್ ಶಮಿ ಅವರ ಮಾರಕ ಬೌಲಿಂಗ್ ಮತ್ತು ಉಪನಾಯಕ ಶುಭಮನ್ ಗಿಲ್ ಅವರ ಜವಾಬ್ದಾರಿಯುತ ಶತಕದಿಂದಾಗಿ ಬಾಂಗ್ಲಾದೇಶವನ್ನು ಟೀ ಇಂಡಿಯಾ 6 ವಿಕೆಟ್ ಗಳಿಂದ ಮಣಿಸಿ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭರ್ಜರಿ ಶುಭಾರಂಭ ಮಾಡಿದೆ.ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಬಾಂಗ್ಲಾದೇಶ ನೀಡಿದ್ದ ಸುಲಭ ಗುರಿಯನ್ನು ಟೀಂ ಇಂಡಿಯಾ ಕೇವಲ46.3 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು ತಲುಪಿ ಜಯಘೋಷ ಮೊಳಗಿಸಿತು.

ಗೆಲ್ಲಲು 229 ರನ್ ಗಳ ಗುರಿ ಪಡೆದಿದ್ದ ಭಾರತ ತಂಡಕ್ಕೆ ನಾಯಕ ರೋಹಿತ್ ಶರ್ಮಾ ಮತ್ತು ಉಪನಾಯಕ ಶುಭಮನ್ ಗಿಲ್ ಅವರು ಉತ್ತಮ ಆರಂಭ ಒದಗಿಸಿದರು. ಮೊದಲ ವಿಕೆಟ್ ಗೆ ಇವರಿಬ್ಬರು ಕೇವಲ 9.5 ಓ ವರ್ ಗಳಲ್ಲಿ 69 ರನ್ ಗಳ ಜೊತೆಯಾಟವಾಡಿದರು. ರೋಹಿತ್ ಶರ್ಮಾ ಕೇವಲ 36 ಓವರ್ ಗಳಲ್ಲಿ 41 ರನ್ ಗಳಿಸಿ ಔಟಾದರು. ನಂತರ ಕ್ರೀಸಿಗೆ ಅಗಮಿಸಿದ ವಿರಾಟ್ ಕೊಹ್ಲಿ ಅವರು 22 ರನ್ ಗಳಿಸಿದ್ದಾಗ ಸುಲಭದ ಕ್ಯಾಚ್ ನೀಡಿ ಔಟಾದರು. ಶ್ರೇಯಸ್ ಅಯ್ಯರ್ (15) ಮತ್ತು ಅಕ್ಷರ್ ಪಟೇಲ್ (8) ಅವರು ಕೂಡ ಹೆಚ್ಚು ರನ್ ಗಳಿಸಲಿಲ್ಲ. ಆದರೆ ಶುಭವನ್ ಗಿಲ್ ಮತ್ತು ಕೆಎಲ್ ರಾಹುಲ್ ಅವರು ತಂಡವನ್ನು ವಿಜಯದ ದಡ ಸೇರಿಸಿದರು.

ಶುಭಮನ್ ಗಿಲ್ ತಾಳ್ಮೆಯ ಆಟ 129 ಎಸೆತಗಳನ್ನು ಎದುರಿಸಿದ ಶುಭಮನ್ ಗಿಲ್ ಅವರು 9 ಬೌಂಡರಿ ಮತ್ತು 2 ಸಿಕ್ಸರ್ ಗಳಿದ್ದ 101 ರನ್ ಗಳಿಸಿದರು. ಅವರಿಗೆ ಉತ್ತಮ ಸಾಥ್ ನೀಡಿದ ಕೆಎಲ್ ರಾಹುಲ್ ಅವರು 47 ಎಸೆತಗಳಿಂದ 41 ರನ್ ಗಳಿಸಿದರು. ಇವರಿಬ್ಬರು 5ನೇ ವಿಕೆಟ್ ಗೆ ಮುರಿಯದ 87 ರನ್ ಗಳಿಸಿದ್ದರು. ಬಾಂಗ್ಲಾದೇಶದಿಂದ ಒಂದು ಜೀವದಾನ ಪಡೆದ ಕೆಎಲ್ ರಾಹುಲ್ ಮತ್ತೆ ಜಾಗರೂಕತೆಯಿಂದ ಆಡಿದರು. ಹೀಗಾಗಿ ವಿಕೆಟ್ ಪಡೆಯುವ ಎದುರಾಳಿ ತಂಡದ ಯಾವ ಪ್ರಯತ್ನವೂ ಯಶಸ್ವಿಯಾಗಲಿಲ್ಲ. ಅಂತಿಮವಾಗಿ ಭಾರತ ತಂಡ ಗೆಲುವಿನ ನಗೆ ಬೀರಿತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು