LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಶರಣ ಸಾಹಿತ್ಯ ಪರಿಷತ್‍ನಿಂದ "ವಚನ ಸಂಭ್ರಮ"

ದೇವನಹಳ್ಳಿ: ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತಿನ ವತಿಯಿಂದ "ವಚನ ಸಂಭ್ರಮ" ಹಾಗೂ ವಿಜಯಪುರದ ಬಂಗಲೆ ಕುಟುಂಬ ಮತ್ತು ಶ್ರೀ ಸಾಕ್ಷಿ ಮುರುಘ ಸೇವಾ ಟ್ರಸ್ಟ್ ವತಿಯಿಂದ ನೋಟ್ ಪುಸ್ತಕ ವಿತರಣೆ ಕಾರ್ಯಕ್ರಮ ವಿಜಯಪುರ ಸರ್ಕಾರಿ ಹೆಣ್ಣು ಮಕ್ಕಳ ಪ್ರೌಢಶಾಲೆ ಯಲ್ಲಿ ನಡೆಯಿತು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಚಂದ್ರಶೇಖರ ಹಡಪದ ಮಾತನಾಡಿ ಹನ್ನೆರಡನೆಯ ಶತಮಾನದಲ್ಲಿ ಶಿವ ಶರಣರಿಂದ ರಚನೆಯಾದ ವಚನಗಳು ಇಪ್ಪತ್ತೊಂದನೆಯ ಶತಮಾನದಲ್ಲಿಯೂ ಯೋಗ್ಯ ಮಾರ್ಗದರ್ಶನ ಮಾಡುವಲ್ಲಿ ಸಹಕಾರಿಯಾಗಿದೆ. ಶರಣರ ವಚನಗಳನ್ನು ಅಧ್ಯಯನ ಮಾಡಿ ಅವನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಯಶಸ್ವಿ ಜೀವನ ನಡೆಸಬಹುದು ಎಂಬುದಾಗಿ ಅಭಿಪ್ರಾಯ ವ್ಯಕ್ತಪಡಿಸಿದರು.

ಶ್ರೀಸಾಕ್ಷಿ ಮುರುಘ ಸೇವಾ ಟ್ರಸ್ಟ್‍ನ ಸದಸ್ಯರಾದ ಶ್ರೀಮತಿ ಮೀನಾಸುರೇಶ್ ಬಾಬು, ಶ್ರೀಮತಿ ವಿಮಲಾಂಬ ಅನಿಲ್ ಕುಮಾರ್ ರವರು ವಚನ ಗಾಯನ ನಡೆಸಿಕೊಟ್ಟರು ನಂತರ ದೇವನಹಳ್ಳಿ ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕವಿ ಮ ಸುರೇಶ್ ಬಾಬು ಸಮಯದ ಮಹತ್ವದ ಕುರಿತಾಗಿ ಮಾತನಾಡುತ್ತ ಸಜ್ಜನರ ಸಹವಾಸ ಹೆಜ್ಜೇನು ಸವಿದಂತೆ,ಗುರು ಹಿರಿಯರಿಗೆ ಗೌರವ ನೀಡುವ ಸಂಸ್ಕಾರ ವಚನಗಳು ಕಲಿಸಿ ಕೊಡುತ್ತದೆ ಎನ್ನುತ್ತ ಸ್ವರಚಿತ ಕವಿತೆ ವಾಚಿಸುವ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಇನ್ನೊಬ್ಬ ಅತಿಥಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕ ಡಾ ನಂದೀಶ್, ಮಾತನಾಡುತ್ತಾ ದೇವನಹಳ್ಳಿ ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತಿನ ಕಾರ್ಯ ಶ್ಲಾಘನೀಯ ಎಂಬುದಾಗಿ ಅಭಿಪ್ರಾಯ ಪಟ್ಟರು.

ಪತ್ರಿಕಾ ವರದಿಗಾರ ಹರೀಶ್ ಶಾಲಾ ಶಿಕ್ಷಕರಾದ ಶ್ರೀ ನಾರಾಯಣಸ್ವಾಮಿ ಶಿಕ್ಷಕಿಯರಾದ ಪ್ರತಿಭಾ ನಾಯಕ್,ಆರತಿ ಪತ್ತಾರ್,ಸವಿತಾ, ಗಿರಿಜಮ್ಮ ಹಾಗೂ ಅತಿಥಿ ಶಿಕ್ಷಕ ಶಿಕ್ಷಕಿಯರು ಭಾಗವಹಿಸಿದ್ದರು. ವಚನ ಗಾಯನ ಮಾಡಿದ ವಿದ್ಯಾರ್ಥಿನಿಯರಿಗೆ ವಚನದ ಪುಸ್ತಕ ವಿತರಿಸಲಾಯಿತು.ಇದೇ ಕಾರ್ಯಕ್ರಮದಿಂದ ಸ್ಫೂರ್ತಿ ಪಡೆದ ಪತ್ರಿಕಾ ವರದಿಗಾರ ಹರೀಶ್ ವಿದ್ಯಾರ್ಥಿಗಳಿಗೆ ಲೇಖನಿಗಳನ್ನು ವಿತರಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು