LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಶಸ್ತ್ರಾಸ್ತ್ರ ತ್ಯಜಿಸಿ ಮುಖ್ಯವಾಹಿನಿಗೆ ಮರಳಿದ ನಕ್ಸಲರು; ಮಾವೋವಾದಿಗಳ ಶರಣಾಗತಿಯಲ್ಲಿ ಗೋಪಾಲಕಿ ಗೌರಮ್ಮ ಪಾತ್ರ ಪ್ರಮುಖ

ಬೆಂಗಳೂರು: ನಕ್ಸಲ್ ಮುಕ್ತ ಕರ್ನಾಟಕದ ಘೋಷಣೆಯ ಭಾಗವಾಗಿ ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಆರು ಮಂದಿ ನಕ್ಸಲರು ಶಸ್ತ್ರಾಸ್ತ್ರ ತ್ಯಜಿಸಿ, ಮುಖ್ಯವಾಹಿನಿಗೆ ಮರಳಿದ್ದು, ನಕ್ಸಲರ ಈ ಶರಣಾಗತಿಯಲ್ಲಿ ಬುಡಕಟ್ಟು ಮಹಿಳೆ ಗೌರಮ್ಮ ಅವರ ಪಾತ್ರ ಪ್ರಮುಖವಾಗಿತ್ತು.

ಗೋಪಾಲಕಿಯಾಗಿರುವ ಗೌರಮ್ಮ ಅವರು, ಸರ್ಕಾರ ಮತ್ತು ನಕ್ಸಲರ ನಡುವೆ ಸಂದೇಶವಾಹಕಿಯಾಗಿ ಕೆಲಸ ಮಾಡಿದ್ದರು.

ಗೌರಮ್ಮ ಅವರು ಶೃಂಗೇರಿ ತಾಲ್ಲೂಕಿನ ಕಿಗ್ಗಾ ಬಳಿಯ ಕಿತ್ತಲೆಗುಳಿಯ ನಿವಾಸಿಯಾಗಿದ್ದು, ಹಸುಗಳಿಗೆ ಮೇಯಿಸಲು ಕಾಡಿಗೆ ಹೋಗಿ, ಅಲ್ಲಿ ನಕ್ಸಲರ ಭೇಟಿ ಮಾಡಿ, ಅವರು ನೀಡಿದ ಸಂದೇಶವನ್ನು ಸರ್ಕಾರಕ್ಕೆ ರವಾನಿಸುತ್ತಿದ್ದರು. ಗೌರಮ್ಮ ಅವರಿಗೆ ಶರಣಾದ ನಕ್ಸಲರ ಅಡಗುತಾಣಗಳು ತಿಳಿದಿತ್ತು. ಹೀಗಾಗಿ ಅವರೊಂದಿಗೆ ಸಂವಹನ ಸಾಧಿಸುತ್ತಿದ್ದರು. ನಕ್ಸಲರು ಕೂಡ ಗೌರಮ್ಮ ಅವರ ಮೇಲೆ ನಂಬಿಕೆ ಇಟ್ಟಿದ್ದರು. 6 ಮಂದಿ ನಕ್ಸಲರ ಪೈಕಿ ಮುಂಡಗಾರು ಲತಾ ಗೌರಮ್ಮ ಅವರನ್ನು ಆಗಾಗ್ಗೆ ಭೇಟಿಯಾಗುತ್ತಿದ್ದರು. ಆ ವೇಳೆ ಪುನರ್ವಸತಿ ಸಮಿತಿಯಿಂದ ಬಂದ ಪತ್ರಗಳನ್ನು ಲತಾ ಅವರಿಗೆ ನೀಡುತ್ತಿದ್ದರು.

ಸರ್ಕಾರದ ಪತ್ರಗಳು ಮತ್ತು ಪುನರ್ವಸತಿ ಪ್ಯಾಕೇಜ್ ಅನ್ನು ಪರಿಶೀಲಿಸಿದ ನಕ್ಸಲರು ಸರ್ಕಾರದ ಮೇಲೆ ನಂಬಿಕೆ ಇರಿಸಿ, ಶರಣಾಗಲು ನಿರ್ಧರಿಸಿದರು ಎಂದು ಸಮಿತಿ ಸದಸ್ಯ ಪಾರ್ವತೀಶ ಬಿಳಿದಾಳೆ ಅವರು ಹೇಳಿದ್ದಾರೆ.

ಮಾಜಿ ನಕ್ಸಲ್ ಸುರೇಶ್ ಅಂಗಡಿ ಅವರು ಶರಣಾದ ನಕ್ಸಲರಲ್ಲಿ ಒಬ್ಬರಾದ ಅವರ ಪತ್ನಿ ವನಜಾಕ್ಷಿ ಬಾಳೆಹೊಳೆ ಅವರಿಗೆ ಪತ್ರವೊಂದನ್ನು ಬರೆದಿದ್ದರು. ಈ ಪತ್ರ ಅವರು ಶರಣಾಗುವ ನಿರ್ಧಾರ ತೆಗೆದುಕೊಳ್ಳುವಂತೆ ಪ್ರೇರೇಪಿಸಿತ್ತು ಎಂದು ಹೇಳಲಾಗುತ್ತಿದೆ.

ತಂತ್ರಜ್ಞಾನದಲ್ಲಿ ಪರಿಣತರಾಗಿರುವ ಇಂದಿನ ಯುವಕರು ನಕ್ಸಲೈಟ್ ಚಳುವಳಿಗೆ ಬೆಂಬಲ ನೀಡುವುದು ಕಡಿಮೆಯಾಗಿದೆ ಎಂದು ಸುರೇಶ್ ಅವರು, ತಮ್ಮ ಪತ್ರದಲ್ಲಿ ಬರೆದಿದ್ದರು. ಅಲ್ಲದೆ, ಪ್ರಜಾಪ್ರಭುತ್ವದಲ್ಲಿ ನ್ಯಾಯಕ್ಕಾಗಿ ಹೋರಾಡಲು ಆಯ್ಕೆಗಳಿವೆ. ವೈದ್ಯಕೀಯ ಆರೈಕೆ ಹೇಗೆ ಸಿಗುತ್ತಿದೆ ಮತ್ತು ಕೇರಳ ಸರ್ಕಾರಿ ಅಧಿಕಾರಿಗಳು ಮತ್ತು ಪೊಲೀಸರು ಅವರನ್ನು ಎಷ್ಟು ಚೆನ್ನಾಗಿ ನಡೆಸಿಕೊಳ್ಳುತ್ತಿದ್ದಾರೆ ಎಂಬುದನ್ನು ಅವರು ವಿವರಿಸಿದ್ದರು ಎಂದು ತಿಳಿದುಬಂದಿದೆ,

ಕೆಲವು ವರ್ಷಗಳ ಹಿಂದೆ ಕೇರಳದ ಅರಣ್ಯಗಳಲ್ಲಿ ಎಎನ್‌ಎಫ್ ಸಿಬ್ಬಂದಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾಗ ಕಾಡಾನೆಯ ದಾಳಿಯಲ್ಲಿ ಸುರೇಶ್ ಅವರು ತೀವ್ರವಾಗಿ ಗಾಯಗೊಂಡಿದ್ದರು.

ಗೌರಮ್ಮ ಅಷ್ಟೇ ಅಲ್ಲದೆ, ನಕ್ಸಲರ ಶರಣಾಗತಿಯಲ್ಲಿ ಪೊಲೀಸ್ ವರಿಷ್ಠಾಧಿಕಾರಿಯ ಪಾತ್ರ ಕೂಡ ಪ್ರಮುಖವಾಗಿತ್ತು. “ಎಎನ್‌ಎಫ್‌ನೊಂದಿಗಿನ ತಮ್ಮ ಅವಧಿಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ (ಆಂತರಿಕ ಭದ್ರತೆ) ವೆಂಕಟೇಶ್ ಪ್ರಸಾದ್ ಅವರು, ನಕ್ಸಲರು ಮತ್ತು ಅವರ ಸಂಪರ್ಕಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಸಮಿತಿಯ ಇಬ್ಬರು ಸದಸ್ಯರು ಮತ್ತು ಬರಹಗಾರ ಬಜಗೆರೆ ಜಯಪ್ರಕಾಶ್ ಮತ್ತು ಶಿವಮೊಗ್ಗ ಮೂಲದ ವಕೀಲ ಕೆ.ಪಿ. ಶ್ರೀಪಾಲ ಸೇರಿದಂತೆ ಒಂದು ತಂಡವು ಪರಿಣಾಮಕಾರಿಯಾಗಿ ಕೆಲಸ ಮಾಡಿ ಆರು ನಕ್ಸಲರನ್ನು ಮುಖ್ಯವಾಹಿನಿಗೆ ತರುವಲ್ಲಿ ಯಶಸ್ವಿಯಾಗಿದೆ ಎಂದು ಪಾರ್ವತೀಶ್ ಅವರು ಮಾಹಿತಿ ನೀಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು