LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಶಾಸಕ ಪ್ರದೀಪ್ ಈಶ್ವರ್‍ರಿಂದ ವಿದ್ಯಾರ್ಥಿಗಳಿಗೆ ಸ್ಕಾಲರ್‍ಶಿಪ್

ಚಿಕ್ಕಬಳ್ಳಾಪುರ: ಜನರಿಂದ - ಜನರಿಗಾಗಿ - ಜನರಿಗೋಸ್ಕರ ಮುಂದುವರೆದ ಜನಪ್ರಿಯ ಶಾಸಕ ಪ್ರದೀಪ್ ಈಶ್ವರ್ ಅವರ ನಮ್ಮ ಊರಿಗೆ ನಮ್ಮ ಶಾಸಕರು ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದರು.ಅವರು ಮಾತನಾಡಿ ಬ್ಯಾಂಕಿನ ಬ್ಯಾಲೆನ್ಸ್ ನೋಡಿದಾಗಸಿಗುವ ಖುಷಿಗಿಂತ, ಬಡ ಮಕ್ಕಳ ಮುಖದಲ್ಲಿ ಮಂದಹಾಸ ಕಂಡಾಗ ಸಿಗುವ ಖುಷಿಗೆ ವ್ಯಾಲಿಡಿಟಿ ಜಾಸ್ತಿ. ಬಾಲ್ಯದಲ್ಲೇ ತಂದೆ-ತಾಯಿಯನ್ನು ಕಳೆದುಕೊಂಡು ಅನಾಥನಾಗಿ ಬೆಳೆದವನು ನಾನು. ಅನ್ನ ಮತ್ತು ಅಕ್ಷರದ ಬೆಲೆ ಅರಿತವನು, ನಿಮ್ಮ ಆಶೀರ್ವಾದದಿಂದ ವಿಧಾನಸೌಧ ತಲುಪಿದವನು.

ಆಸ್ತಿ - ಅಂತಸ್ತಿನ ಮೇಲೆವ್ಯಾಮೋಹ ಕಡಿಮೆ. ಸೂಕ್ತ ಸಮಯಕ್ಕೆ ಆಸ್ಪತ್ರೆಗೆ ತಲುಪದೆ ಜೀವ ಕಳೆದುಕೊಂಡವರು ನನ್ನ ತಂದೆ ಈಶ್ವರ್ ಮತ್ತು ನನ್ನ ದೇವತೆ ಮಂಜುಳ. ಕಳೆದ ಎರಡು ವರ್ಷಗಳಿಂದ ವರಮಹಾಲಕ್ಷ್ಮಿ ಹಬ್ಬಕ್ಕೆ ನನ್ನ ತಾಯಂದಿರಿಗೆ ಅರಿಶಿನ-ಕುಂಕುಮ ಕೊಟ್ಟಿದ್ದೇನೆ. ನನ್ನ ಕುಟುಂಬಕ್ಕೆ ಬಂದ ಸ್ಥಿತಿ, ಯಾರಿಗೂ ಬರಬಾರದೆಂದು,“24x7” ಹತ್ತು ‘ಅಮ್ಮ ಆಂಬುಲೆನ್ಸ್ ಉಚಿತವಾಗಿ ಕಾರ್ಯನಿರ್ವಹಿಸುತ್ತಿವೆ.

ಸರ್ಕಾರಿ ಶಾಲೆಯ 20,000 ಮಕ್ಕಳಿಗೆ ಹಬ್ಬಕ್ಕೆ ‘ಬಟ್ಟೆ’ ವಿತರಿಸಿದ್ದೇನೆ. 5,000 ಅಂಗನವಾಡಿ ಮಕ್ಕಳಿಗೆ ಹಬ್ಬಕ್ಕೆ ‘ಬಟ್ಟೆ’ ಹಂಚಿಕೆ ಮಾಡಿದ್ದೇನೆ. ಈಗ ವಿದ್ಯಾರ್ಥಿಗಳಿಗೆ SCHOLARSHIP ನೀಡುವ ಸಮಯ, ಸಾಧ್ಯವಾದರೆ ನಿಮ್ಮ ಆಶೀರ್ವಾದ ಮುಂದುವರಿಯಲಿ ಎಂದು ಆಶಿಸಿದರು.
ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ 1,000 ಸಾವಿರಗಳನ್ನು ನೀಡಲಾಗುವುದು.

ಡಿಪ್ಲೋಮೊ ಮತ್ತು ಐ.ಟಿ.ಐ ವಿದ್ಯಾರ್ಥಿಗಳಿಗೆ 1,500 ಸಾವಿರಗಳನ್ನು ನೀಡಲಾಗುವುದು. ದ್ವಿತೀಯ ಪಿ.ಯು.ಸಿ ಎಲ್ಲಾ ಕೋರ್ಸಿನ ವಿದ್ಯಾರ್ಥಿ
ಗಳಿಗೆ 2,000 ಸಾವಿರ ಗಳನ್ನು ನೀಡಲಾಗುವುದು. ಪ್ರಥಮ ದರ್ಜೆಯ ಕಾಲೇಜಿನ (BA, B. Com, BSC, BBA, BCA, BSW, LLB)) ವಿದ್ಯಾರ್ಥಿಗಳಿಗೆ 2,000 ಗಳನ್ನು ನೀಡಲಾಗುವುದು. ಎಲ್ಲಾ ಸ್ನಾತಕೋತ್ತರ ಅಂತಿಮ ವರ್ಷದ (MBBS, B.E., M.SC, MA, M. Com, MBA, MSW, BAMS, Dental) ವಿದ್ಯಾರ್ಥಿಗಳಿಗೆ 3,000 ರೂ ನೀಡಲಾಗುವುದು.

30 ಗ್ರಾಪಂ ಒಳಪಡುವ ವಿದ್ಯಾರ್ಥಿಗಳು ಸರ್ಕಾರಿ ಅಥವಾ ಖಾಸಗಿ ಯಾವುದೇ ಶಾಲಾ- ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು ವಿದ್ಯಾರ್ಥಿ ವೆಬ್ ಸೈಟ್ ಮೂಲಕ ನೋಂದಾಯಿಸಿಕೊಳ್ಳಬಹುದು.ನೋಂದಾಯಿಸಿಕೊಳ್ಳಲು ಅ.15 ರಿಂದ ಆರಂಭ ಗೊಂಡು ನ.15 ಕೊನೆಯ ದಿನಾಂಕವಾಗಿರುತ್ತದೆ. ಹೆಚ್ಚಿನ
ಮಾಹಿತಿಗಾಗಿ ದೂ:080-24413333, ವೆಬ್ ಸೈಟ್: www.pradeepeshwarmla.comಈ ಮೂಲಕ ನೋಂದಾಯಿಸಿಕೊಳ್ಳಬಹುದು ಎಂದು ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು