LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Belagavi

ಶಾ ಹೇಳಿಕೆಯ ಕಿಡಿ ವಿಧಾನ ಸಭೆ ಕಲಾಪ ಮುಂದೂಡಿಕೆ | ಪರಿಷತ್‍ನಲ್ಲಿ ಚರ್ಚೆಗೆ ಪಟ್ಟು

ಬೆಳಗಾವಿ: ಡಾ|| ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆಡಿದ ಮಾತುಗಳು ಇಂದು ವಿಧಾನ ಮಂಡಲದ ಉಭಯ ಸದನಗಳಲ್ಲಿ ಪ್ರತಿಧ್ವನಿಸಿ ವಿಧಾನಸಭೆ ಕಲಾಪ ಕೆಲ ಕಾಲ ಮುಂದೂಡಿದರೆ ಪರಿಷತ್‍ನಲ್ಲಿ ಚರ್ಚೆಗೆ ಆಗ್ರಹಿಸಿದ ಘಟನೆ ನಡೆದಿದೆ.
ಇಂದು ಬೆಳಗ್ಗೆ ವಿಧಾನ ಸಭೆ ಕಲಾಪದ ವೇಳೆ ಕಾಂಗ್ರೆಸ್ ಪಕ್ಷದ ಸದಸ್ಯರು ಅಮಿತ್ ಶಾ ಆಡಿರುವ ಮಾತುಗಳನ್ನು ಪ್ರಸ್ತಾಪಿಸಿ ಅಮಿತ್ ಶಾ ವಿರುದ್ಧ ಧಿಕ್ಕಾರದ ಘೋಷಣೆ ಕೂಗುತ್ತ ಅಂಬೇಡ್ಕರ್ ಅವರ ಭಾವಚಿತ್ರ ಹಿಡಿದು ಶಾ ವಿರುದ್ಧ ಆಕ್ರೋಶ ªಹೊರ ಹಾಕಿದ್ದಾರೆ.

ಕಾಂಗ್ರೆಸ್ ಸದಸ್ಯರ ಪ್ರತಿಭಟನೆ ಜೋರಾಗಿದ್ದನ್ನು ಗಮನಿಸಿದ ಸಭಾಧ್ಯಕ್ಷರು ಕಲಾಪವನ್ನು ಕೆಲ ಕಾಲ ಮುಂದೂಡಿದರು.ಮತ್ತೊಂದೆಡೆ ವಿಧಾನ ಪರಿಷತ್‍ನಲ್ಲೂ ಸಹ ಇದೇ ವಿಷಯ ಪ್ರಸ್ತಾಪವಾಗಿ ಸದನ ಕಲಾಪ ಆರಂಭವಾದ ಬೆನ್ನಲ್ಲೇ ಗದ್ದಲ ಗೊಂದಲ ಉಂಟಾಯಿತು.ಅಮಿತ್ ಶಾ ರ ಹೇಳಿಕೆ ಕಾಂಗ್ರೆಸ್ ಸದಸ್ಯರು ಪ್ರಸ್ತಾಪಿಸುತ್ತಿದ್ದಂತೆ ಇದನ್ನು ಕಂಡು ಬಿಜೆಪಿ ಸದಸ್ಯರು ಗರಂ ಆದರು.ಈ ಸಂದರ್ಭದಲ್ಲಿ ಮಧ್ಯೆ ಪ್ರವೇಶಿಸಿದ ಸಭಾಪತಿ ಬಸವರಾಜ ಹೊರಟ್ಟಿ ಸದನವನ್ನು ಹಿಡಿತಕ್ಕೆ ತೆಗೆದುಕೊಂಡು ನಾನು ಎಲ್ಲರಿಗೂ ಅವಕಾಶ ಕೊಡುತ್ತೇನೆ ಎಂದು ಪರಿಸ್ಥಿತಿಯನ್ನು ತಹಬದಿಗೆ ತಂದರು.

ಸಭಾಪತಿಯವರ ಮಾತಿಗೆ ಮರು ಪ್ರಶ್ನಿಸಿದ ಬಿಜೆಪಿ ಸದಸ್ಯ ಸಿ.ಟಿ.ರವಿ, ಮಾನ್ಯ ಸಭಾಪತಿಗಳೇ, ನಮಗೆ ಮಾತನ್ನಾಡಲು ಅವಕಾಶ ಕೊಡಿ ಎಂದು ಒತ್ತಾಯಿಸಿದರು.ಕೊಡುತ್ತೇನೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರೂ ಸಹ ಮಾತು ಮುಂದುವರೆಸಿದ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರು, ನನದೊಂದು ಬೇಡಿಕೆ ಇದೆ. ಮಾನ್ಯ ಕೇಂದ್ರ ಗೃಹ ಸಚಿವರು ಮಾತನ್ನಾಡಿರುವುದು ಸಾರ್ವಜನಿಕವಾಗಿ ಅಲ್ಲ. ಸದನದಲ್ಲಿ. ಹೀಗಾಗಿ, ಅವರು ಸದನದಲ್ಲಿ ಆಡಿರುವ ಮಾತನ್ನು ಇಲ್ಲಿ ಪ್ರಸಾರ ಮಾಡಿ. ಬಳಿಕ ಅದರ ಮೇಲೆ ಚರ್ಚೆಗೆ ಅವಕಾಶ ಕೊಡಿ ಎಂದು ಮನವಿ ಮಾಡಿದರು.ಸಿ.ಟಿ.ರವಿ ಮಾತಿಗೆ ಆಗಲಿ ಈಗ ಕುಳಿತುಕೊಳ್ಳಿ ಎಂದ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿ, ಪ್ರಶ್ನೋತ್ತರ ಕಲಾಪವನ್ನು ಕೈಗೆತ್ತಿಕೊಂಡರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು