LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಶಿಕ್ಷಣ ಇಲಾಖೆ ಮುಖ್ಯಸ್ಥರಾಗಿ ಮಾಜಿ WWE CEO Linda McMahon ನೇಮಕ

ವಾಷಿಂಗ್ಟನ್: ಅಮೆರಿಕದ ಚುನಾಯಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಸರ್ಕಾರದ ಕಾರ್ಯ ಈಗಾಗಲೇ ಪ್ರಾರಂಭಿಸಿದ್ದು, ಶಿಕ್ಷಣ ಇಲಾಖೆಯ ಮುಖ್ಯಸ್ಥರನ್ನಾಗಿ ವರ್ಲ್ಡ್ ರೆಸ್ಲಿಂಗ್ ಎಂಟರ್ ಟೈನ್ ಮೆಂಟ್ (WWE) ನ ಮಾಜಿ ಸಿಇಒ ಲಿಂಡಾ ಮೆಕ್‌ಮಹೋನ್ ಅವರನ್ನು ನೇಮಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡೊನಾಲ್ಡ್ ಟ್ರಂಪ್, ನಾವು ಶಿಕ್ಷಣವನ್ನು ರಾಜ್ಯಗಳಿಗೆ ಹಿಂತಿರುಗಿಸುತ್ತೇವೆ ಮತ್ತು ಲಿಂಡಾ ಆ ಪ್ರಯತ್ನವನ್ನು ಮುನ್ನಡೆಸುತ್ತಾರೆ ಎಂಬ ಭರವಸೆ ತಮಗಿದೆ.

ಆಕೆ fierce advocate for Parents' Rights ಎಂದೇ ಖ್ಯಾತಿ ಪಡೆದವರಾಗಿದ್ದಾರೆ. ಹೀಗಾಗಿ ಆಕೆಯ ಆಯ್ಕೆ ಸಮಂಜಸ ಎಂದು ನಾನು ಭಾವಿಸುತ್ತೇನೆ. ಸರ್ಕಾರದಲ್ಲಿ ಸುಮಾರು 4,000 ಹುದ್ದೆಗಳನ್ನು ಭರ್ತಿ ಮಾಡುವ ಕಾರ್ಯವನ್ನು ಇದು ಹೊಂದಿದೆ ಎಂದಿದ್ದಾರೆ.

ಅಂತೆಯೇ ಶಿಕ್ಷಣ ಇಲಾಖೆಯಲ್ಲಿ ಮೆಕ್ ಮಹೋನ್ ಸಾಕಷ್ಟು ಅನುಭವಹೊಂದಿದ್ದು, ಕನೆಕ್ಟಿಕಟ್ ಶಿಕ್ಷಣ ಮಂಡಳಿಯಲ್ಲಿ ಎರಡು ವರ್ಷಗಳ ಅವಧಿಯನ್ನು ಮತ್ತು ಖಾಸಗಿ ಕ್ಯಾಥೋಲಿಕ್ ಶಾಲೆಯಾದ ಸೇಕ್ರೆಡ್ ಹಾರ್ಟ್ ವಿಶ್ವವಿದ್ಯಾಲಯದ ಟ್ರಸ್ಟಿಗಳ ಮಂಡಳಿಯಲ್ಲಿ 16 ವರ್ಷಗಳ ಸೇವೆ ಸಲ್ಲಿಸಿದ್ದಾರೆ ಎಂದು ಟ್ರಂಪ್ ಹೇಳಿದರು.

ಮೆಕ್ ಮಹೋನ್ ಅವರು ಜನವರಿಯಲ್ಲಿ ಶ್ವೇತಭವನಕ್ಕೆ ಹಿಂದಿರುಗುವ ಮುನ್ನ ಟ್ರಂಪ್ ಅವರ ಪರಿವರ್ತನಾ ತಂಡದ ಸಹ-ಅಧ್ಯಕ್ಷರಾಗಿದ್ದರು. ಮೆಕ್ ಮಹೋನ್ 2009 ರಲ್ಲಿ WWE ಅನ್ನು ತೊರೆದು ಅಮೆರಿಕ ಸೆನೆಟ್‌ಗೆ ಸ್ಪರ್ಧಿಸಿದ್ದರು. 2021 ರಿಂದ, ಅವರು ಟ್ರಂಪ್ ನೇತೃತ್ವದ ಅಮೇರಿಕಾ ಫಸ್ಟ್ ಪಾಲಿಸಿ ಇನ್‌ಸ್ಟಿಟ್ಯೂಟ್‌ನಲ್ಲಿ ಸೆಂಟರ್ ಫಾರ್ ದಿ ಅಮೇರಿಕನ್ ವರ್ಕರ್‌ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು