LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಶಿವಕುಮಾರ ಸ್ವಾಮೀಜಿ ಪುತ್ಥಳಿಗೆ ಹಾನಿ: ಭುಗಿಲೆದ್ದ ಆಕ್ರೋಶ, ದೂರು ದಾಖಲು

ಬೆಂಗಳೂರು: ತ್ರಿವಿಧ ದಾಸೋಹಿ ಹಾಗೂ ನಡೆದಾಡುವ ದೇವರೆಂದೇ ಹೆಸರು ಖ್ಯಾತಿ ಪಡೆದಿದ್ದ ತುಮಕೂರಿನ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಪುತ್ಥಳಿಯನ್ನು ಕಿಡಿಗೇಡಿಗಳು ಹಾನಿ ಮಾಡಿರುವ ಘಟನೆ ನಗರದ ಗಿರಿನಗರ ಪೊಲೀಸ್ ವ್ಯಾಪ್ತಿಯಲ್ಲಿ ನಡೆದಿದೆ.

ಈ ಸಂಬಂಧ ಕರ್ನಾಟಕ ಸುವರ್ಣ ವೀರಶೈವ ಲಿಂಗಾಯತ ಮಹಾಸಭಾ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದು, ಮಂಗಳವಾರ ಬೆಳಿಗ್ಗೆ ಪುತ್ಥಳಿ ಧ್ವಂಸಗೊಂಡಿರುವುದು ಕಂಡು ಬಂದಿತ್ತು. ರಾತ್ರಿ ವೇಳೆ ಯಾರೋ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿ ಪ್ರತಿಮೆಯನ್ನು ಧ್ವಂಸಗೊಳಿಸಿರುವ ಶಂಕೆ ವ್ಯಕ್ತವಾಗಿದೆ ಎಂದು ಹೇಳಿದ್ದಾರೆ.

ಈ ಬೆಳವಣಗೆಗೆ ಲಿಂಗಾಯತ ಸಮುದಾಯ ಮತ್ತು ಸಿದ್ದಗಂಗಾ ಮಠದ ಅನುಯಾಯಿಗಳು ಆಘಾತದಿಂದ ಪ್ರತಿಕ್ರಿಯಿಸಿದ್ದಾರೆ.

ಆರೋಪಿಗಳ ಸುಳಿವಿಗಾಗಿ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಕಾನೂನು ಪ್ರಕಾರ ಕ್ರಮಕೈಗೊಳ್ಳುವಂತೆ ಪೊಲೀಸ್ ಆಯುಕ್ತ ಬಿ ದಯಾನಂದ ಅವರಿಗೆ ಸಮುದಾಯದ ಸದಸ್ಯರು ಒತ್ತಾಯಿಸಿದ್ದಾರೆ.

ಇದೇ ವೇಳೆ ಕೂಡಲೇ ಕ್ರಮ ಕೈಗೊಳ್ಳುವುದಾಗಿ ಆಯುಕ್ತರು ಭರವಸೆ ನೀಡಿದ್ದು, ಈ ಬಗ್ಗೆ ಗಂಭೀರವಾಗಿ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಘಟನೆ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ಶಾಸಕ ಅರವಿಂದ ಬೆಲ್ಲದ್‌ ಅವರು. ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಜಾತಿ-ಧರ್ಮದ ಭೇದವಿಲ್ಲದೇ ಲಕ್ಷಾಂತರ ಬಡಮಕ್ಕಳಿಗೆ ಅನ್ನ-ಅಕ್ಷರ-ಆಶ್ರಯ ನೀಡಿದ ನಡೆದಾಡುವ ದೇವರ ಮೇಲೂ ಮತಾಂಧರ ಕೆಂಗಣ್ಣು ಬಿದ್ದಿದೆ. ಇಂತಹ ಪುಂಡರ ಹೆಡೆಮುರಿ ಕಟ್ಟಬೇಕಿದ್ದ ಸರ್ಕಾರವೇ, ಸಾಧು-ಸಂತರ ಮೇಲೆ ಎಫ್ಐಆರ್ ದಾಖಲಿಸುವ ಮೂಲಕ ಈ ಭಯೋತ್ಪಾದಕರಿಗೆ ನೈತಿಕ ಬೆಂಬಲ ನೀಡುತ್ತಿದೆ. ಕಾಂಗ್ರೆಸ್ ಸರ್ಕಾರದ ಓಲೈಕೆ, ತುಷ್ಟೀಕರಣ, ವೋಟ್ ಬ್ಯಾಂಕ್ ರಾಜಕಾರಣವೇ ಇಂತಹ ಘಟನೆಗಳು ರಾಜ್ಯದಲ್ಲಿ ಪದೇ ಪದೇ ಮರುಕಳಿಸುತ್ತಿರುವುದಕ್ಕೆ ನೇರ ಕಾರಣಯ ಬೆಂಗಳೂರಿನಲ್ಲಿ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಪುತ್ಥಳಿಗೆ ಅಪಮಾನ ಮಾಡಿದ ಸಮಾಜ ಘಾತುಕರನ್ನು ಕೂಡಲೇ ಬಂಧಿಸಿ, ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ಸರ್ಕಾರಕ್ಕೆ ಆಗ್ರಹಿಸುತ್ತೇನೆಂದು ಹೇಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು