LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಶಿವರಾಜಕುಮಾರ್ ಅಭಿನಯದ ನೂತನ ಚಿತ್ರ "#MB"

ಶಿವರಾಜಕುಮಾರ್"#MB" ಎಂಬ ನೂತನ ಚಿತ್ರದಲ್ಲಿ ನಾಯಕರಾಗಿ ನಟಿಸುತ್ತಿದ್ದಾರೆ. ಮುಂಬೈ ಮೂಲದ ಖ್ಯಾತ ADD - ONE ಫಿಲಂಸ್ ಸಂಸ್ಥೆ ಲಾಂಛನದಲ್ಲಿ ಮನೋಜ್ ಬನೋಡೆ ಹಾಗೂ ಖೇಮ್ ಚಂದ್ ಖಡ್ಗಿ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದು, ವಿಜಯಕಾಂತ್ ಅಭಿನಯದ ಸೂಪರ್ ಹಿಟ್ "ವಲ್ಲರಸು" ಚಿತ್ರದ ನಿರ್ದೇಶಕ ಎನ್ ಮಹಾರಾಜನ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ಈವರೆಗೂ ಮೂರು ತಮಿಳು ಹಾಗೂ ಸನ್ನಿ ಡಿಯೋಲ್ ಅಭಿನಯದ ಹಿಂದಿ ಚಿತ್ರವೊಂದನ್ನು ನಿರ್ದೇಶಿಸಿರುವ ಮಹಾರಾಜನ್ ಅವರು ನಿರ್ದೇಶಿಸುತ್ತಿರುವ ಮೊದಲ ಕನ್ನಡ ಚಿತ್ರವಿದು.ADD - ONEಫಿಲಂಸ್ ಸಂಸ್ಥೆಯ ಮೂಲಕ ಸಾಕಷ್ಟು ದೊಡ್ಡದೊಡ್ಡ ಇವೆಂಟ್ ಗಳನ್ನು ಆಯೋಜಿಸಿರುವ ಮನೋಜ್ ಬನೋಡೆ ಹಾಗೂ ಖೇಮ್ ಚಂದ್ ಖಡ್ಗಿ ಅವರು ಈಗ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದಾರೆ. ತಮ್ಮ ಮೊದಲ ನಿರ್ಮಾಣದ ಚಿತ್ರವನ್ನು ದಕ್ಷಿಣ ಭಾರತದಲ್ಲಿ, ಅದರಲ್ಲೂ ಕನ್ನಡ ಚಿತ್ರವೊಂದನ್ನು ನಿರ್ಮಿಸುತ್ತಿರುವುದು ನಿಜಕ್ಕೂ ಸಂತಸದ ವಿಚಾರ.

ಶಿವರಾಜಕುಮಾರ್ ಅವರು ನಾಯಕರಾಗಿ ನಟಿಸುತ್ತಿರುವ ಈ ಚಿತ್ರ ಕನ್ನಡ ಸೇರಿದಂತೆ ಆರು ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಚಿತ್ರವಾಗಿ ನಿರ್ಮಾಣವಾಗುತ್ತಿದೆ. ಕನ್ನಡದ ಹೆಸರಾಂತ ನಟ ಶಿವರಾಜಕುಮಾರ್ ಅವರ ಅಭಿನಯದ ಈ ಚಿತ್ರವನ್ನು ನಿರ್ಮಿಸುತ್ತಿರುವುದಕ್ಕೆ ಬಹಳ ಖುಷಿಯಾಗಿದೆ ಎನ್ನುತ್ತಾರೆ ನಿರ್ಮಾಪಕರು.
"#MB" ಎಂದರೆ ಏನು ಎಂಬ ವಿಷಯವನ್ನು ಗೌಪ್ಯವಾಗಿಟ್ಟಿರುವ ನಿರ್ದೇಶಕರು, ಮುಂದಿನ ದಿನಗಳಲ್ಲಿ ಶೀರ್ಷಿಕೆಯ ವಿವರಣೆ ಹಾಗೂ ಚಿತ್ರತಂಡದ ಬಗ್ಗೆ ಹೆಚ್ಚಿನ ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ. 2025ರ ಮಧ್ಯದಲ್ಲಿ ಚಿತ್ರವನ್ನು ಆರಂಭಿಸುವುದಾಗಿ ನಿರ್ಮಾಪಕರು ಹೇಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು